ಕನ್ನಡ ಸುದ್ದಿ  /  Karnataka  /  Bengaluru Bbmp Bans Sale Of Meat On Mahavir Jayanti

Mahavir Jayanti: ಈ ಮಂಗಳವಾರ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ, ಬೆಂಗಳೂರಲ್ಲಿ ತಿಂಗಳಿಗೊಮ್ಮೆ ನಾನ್‌ವೆಜ್ ಬ್ಯಾನ್‌!

ಮಹಾವೀರ ಜಯಂತಿಯಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬೆಂಗಳೂರು ಮಹಾನಗರ ಪಾಲಿಕೆಯ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

Mahavir Jayanti: ಮಹಾವೀರ ಜಯಂತಿ ಪ್ರಯುಕ್ತ ಬೆಂಗಳೂರಿನಲ್ಲಿ ಈ ಮಂಗಳವಾರ ಮಾಂಸ ಮಾರಾಟವಿಲ್ಲ
Mahavir Jayanti: ಮಹಾವೀರ ಜಯಂತಿ ಪ್ರಯುಕ್ತ ಬೆಂಗಳೂರಿನಲ್ಲಿ ಈ ಮಂಗಳವಾರ ಮಾಂಸ ಮಾರಾಟವಿಲ್ಲ

ಬೆಂಗಳೂರು: ಏಪ್ರಿಲ್‌ 4, 2022ರ ಮಂಗಳವಾರ ಮಹಾವೀರ ಜಯಂತಿ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.

ಮಹಾವೀರ ಜಯಂತಿಯಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬೆಂಗಳೂರು ಮಹಾನಗರ ಪಾಲಿಕೆಯ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

"ದಿನಾಂಕ: 04.04.2023ರ ಮಂಗಳವಾರ "ಮಹಾವೀರ ಜಯಂತಿ" ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ" ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ ಅಂದರೆ ಮಾರ್ಚ್‌ 30ರಂದು ರಾಮನವಮಿಯಂದೂ ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿತ್ತು. ರಾಮ ನವಮಿ ಹಬ್ಬದಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಕುರಿ, ಕೋಳಿ, ಮೀನು, ಮಾಂಸ ಮಾರಾಟ ನಿಷೇಧಿಸಿ ಆದೇಶಿಸಲಾಗಿತ್ತು. ರಾಮನವಮಿಯಂದು ಕಲಬುರಗಿ ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆ ಸೇರಿದಂತೆ ವಿವಿಧ ನಗರಸಭಾ ವ್ಯಾಪ್ತಿಯಲ್ಲಿ ಸಹ ಇದೇ ರೀತಿ ಆದೇಶ ಹೊರಡಿಸಲಾಗಿತ್ತು.

ಮಹಾ ಶಿವರಾತ್ರಿ ಪ್ರಯುಕ್ತ ಫೆಬ್ರವರಿ 18ರ ಶನಿವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕ(ಪಶುಪಾಲನೆ) ರವಿಕುಮಾರ್ ಪ್ರಕಟಣೆ ಹೊರಡಿಸಿದ್ದರು.

ಬೆಂಗಳೂರಿನಲ್ಲಿ ಜನವರಿ 30ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿತ್ತು. ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ "ಸರ್ವೋದಯ ದಿನ"ದಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿತ್ತು.

ಈ ವರ್ಷ ಹೀಗೆ ತಿಂಗಳಿಗೆ ಒಮ್ಮೆಯಾದರೂ ಬೆಂಗಳೂರಿಗರು ನಾನ್‌ ವೆಜ್‌ ಬ್ಯಾನ್‌ ಆದೇಶ ಪಡೆಯುತ್ತಿದ್ದಾರೆ. ಫೆಬ್ರವರಿಯಲ್ಲಿ ಏರ್‌ ಶೋ ಹಿನ್ನಲೆಯಲ್ಲಿ ಯಲಹಂಕ ವ್ಯಾಪ್ತಿಯಲ್ಲಿ ಹಲವು ದಿನಗಳ ಕಾಲ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು.

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಹೀಗೆ ಪ್ರಮುಖ ಹಬ್ಬ ಹರಿದಿನಗಳು ಇರುವಾಗ ಮಾಂಸ ಮಾರಾಟ, ಪ್ರಾಣಿವಧೆಗಳಿಗೆ ಬೆಂಗಳೂರಿನಲ್ಲಿ ನಿಷೇಧ ಹೇರುತ್ತ ಬರಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡಿಸ್ಟ್ರಿಕ್ಟ್ ಕಂಪ್ಲೇಂಟ್ ಮಾನಿಟರಿಂಗ್ ಸೆಲ್(DCMC) ಸ್ಥಾಪನೆ

ಕರ್ನಾಟಕ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಘೋಷಣೆಯಾಗಿದ್ದು, ಬೆಂಗಳೂರು ನಗರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಚುನಾವಣಾ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭ್ರಷ್ಟ ಆಚರಣೆಗಳಿಗೆ, ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಗೆ, ಇತರೆ ಎಲೆಕ್ಟ್ರೋಲ್ ಅಫೆನ್ಸ್‌ಗಳಿಗೆ ಸಂಬಂಧಿಸಿದಂತೆ ದೂರು ದಾಖಲಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಛೇರಿಯ ಆವರಣದಲ್ಲಿನ ಅನೆಕ್ಸ್-3 ಕಟ್ಟಡ, 6ನೇ ಮಹಡಿಯಲ್ಲಿ ಡಿಸ್ಟ್ರಿಕ್ಟ್ ಕಂಪ್ಲೇಂಟ್ ಮಾನಿಟರಿಂಗ್ ಸೆಲ್(District Complaint Monitoring Cell-DCMC) ಅನ್ನು 24X7 ಕಾರ್ಯಾಚರಣೆಯಲ್ಲಿರುವಂತೆ ಸ್ಥಾಪಿಸಲಾಗಿರುತ್ತದೆ.

ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ: 1950, National Grevances Redessal System(NGRS) ಹಾಗೂ cVIGIL app ಮೂಲ ದೂರುಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು ದೂರುಗಳ‌ ಪರಿಹಾರ ಹಾಗೂ ಮತದಾರ ಸಹಾಯವಾಣಿಯ ನೋಡಲ್ ಅಧಿಕಾರಿಯಾದ ಪ್ರತೀಕ್ ಬಾಯಲ್ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ವಿಭಾಗ