ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ; ಕುಡಿದು ವಾಹನ ಚಲಾಯಿಸಿದ 650ಕ್ಕೂ ಹೆಚ್ಚು ಕೇಸ್
ಕನ್ನಡ ಸುದ್ದಿ  /  ಕರ್ನಾಟಕ  /  ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ; ಕುಡಿದು ವಾಹನ ಚಲಾಯಿಸಿದ 650ಕ್ಕೂ ಹೆಚ್ಚು ಕೇಸ್

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ; ಕುಡಿದು ವಾಹನ ಚಲಾಯಿಸಿದ 650ಕ್ಕೂ ಹೆಚ್ಚು ಕೇಸ್

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಕುಡಿದು ವಾಹನ ಚಲಾಯಿಸಿದವರ ವಿರುದ್ಧ ಕ್ರಮ ಜರುಗಿಸುವ ಬೆಂಗಳೂರು ಸಂಚಾರ ಪೊಲೀಸರು, 650ಕ್ಕೂ ಹೆಚ್ಚು ಪ್ರಕರಣ ದಾಖಲಿಸಿಕೊಂಡಿದ್ದಾರೆ. (ವರದಿ- ಎಚ್.ಮಾರುತಿ, ಬೆಂಗಳೂರು)

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಿಐಡಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಿಐಡಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.ಆರೋಪಿಗಳು ಪೊಳೀಸ್‌ ಇನ್‌ ಸ್ಪೆಕ್ಟರ್‌ಗಳು ಹಾಗೂ ಎಸಿಪಿಗಳ ಅಶ್ಲೀಲ ವಿಡಿಯೋ ಮತ್ತು ಫೋಟೊ ಮಾಡಿರುವುದನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ತಮ್ಮ ಪರವಾಗಿ ಮತ್ತು ತಮ್ಮ ಎಲ್ಲ ಕೆಲಸಗಳನ್ನು ಮಾಡುವಂತೆ ಬ್ಲ್ಯಾಕ್ ಮೇಲ್ ಮಾಡಲು ಈ ತಂತ್ರ ಅನುಸರಿಸುತ್ತಿದ್ದರು ಎಂಬ ಅಂಶವನ್ನು ನಮೂದು ಮಾಡಲಾಗಿದೆ.

ಶಾಸಕ ಮುನಿರತ್ನ ಸೇರಿ 7 ಆರೋಪಿಗಳ ವಿರುದ್ಧ ಚಾರ್ಜ್‌ ಶೀಟ್

ಶಾಸಕ ಮುನಿರತ್ನ ಸೇರಿ 7 ಆರೋಪಿಗಳ ವಿರುದ್ಧ ಚಾರ್ಜ್‌ ಶೀಟ್ ಸಲ್ಲಿಕೆ ಮಾಡಲಾಗಿದೆ. ಒಟ್ಟು 3000 ಪುಟಗಳ ಚಾರ್ಜ್‌ ಶೀಟ್‌ನಲ್ಲಿ ಶಾಸಕ ಮುನಿರತ್ನ, ಸುಧಾಕರ್, ಇನ್‌ಸ್ಪೆಕ್ಟ‌ರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್ ಕುಮಾರ್, ಮಂಜುನಾಥ್ ಅವರ ಹೆಸರನ್ನು ಉಲ್ಲೇಖ ಮಾಡಲಾಗಿದೆ.

ಈ ಪ್ರಕರಣ ಸಂಬಂಧ ಎಚ್‌ ಐವಿ ಸೋಂಕಿತ ಸಂತ್ರಸ್ತೆ, ನೊಂದ ಮಹಿಳೆಯಿಂದ ಸಿಐಡಿ ಅಧಿಕಾರಿಗಳು ಹೇಳಿಕೆಗಳನ್ನು ಪಡೆದಿದ್ದರು. ಜತೆಗೆ ಸಾಕ್ಷ್ಯಗಳ ಹೇಳಿಕೆಯನ್ನೂ ಪಡೆಯಲಾಗಿತ್ತು. ಶಾಸಕ ಮುನಿರತ್ನ ಅವರನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ 63 ಪ್ರಶ್ನೆಗಳನ್ನು ಮುನಿರತ್ನ ಅವರಿಗೆ ಕೇಳಲಾಗಿತ್ತು.

ಗುತ್ತಿಗೆದಾರರಿಗೆ ಜೀವ ಬೆದರಿಕೆ, ಜಾತಿ ನಿಂದನೆ, ಅತ್ಯಾಚಾರ ಪ್ರಕರಣ

ಗುತ್ತಿಗೆದಾರರಿಗೆ ಜೀವ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣವನ್ನು ಶಾಸಕ ಮುನಿರತ್ನ ಎದುರಿಸುತ್ತಿದ್ದಾರೆ. ಈ ಪೈಕಿ ಅವರ ವಿರುದ್ಧದ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಯತ್ನದ ಆರೋಪ ಬಹಳ ಗಂಭೀರ ಸ್ವರೂಪ ಪಡೆದುಕೊಂಡಿರುವ ಆರೋಪಗಳಾಗಿವೆ. ಮುನಿರತ್ನ ನಾಯ್ಡು ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ. ಅವರ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪ ಇವರ ಮೇಲಿದೆ. ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಖಾಸಗಿ ವಿಡಿಯೋಗಳನ್ನು ಬಳಸಿಕೊಳ್ಳುತ್ತಿದ್ದರು ಂದು ಸಂತ್ರಸ್ತೆ ನೀಡಿದ್ದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 354(ಎ),354(ಸಿ), 376(2)(ಎನ್),308, 270,120ಬಿ,119,504,506,201,511, ರೆ/ವಿ 34 ಐಪಿಸಿ, ಕಲಂ 66ಇ, ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಕೇಸ್ ದಾಖಲಾಗಿತ್ತು.

ಕುಡಿದು ವಾಹನ ಚಲಾಯಿಸಿದವರ ವಿರುದ್ಧ ಕ್ರಮ; 650ಕ್ಕೂ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು ವ್ಯಾಪ್ತಿಯಲ್ಲಿ ಏಪ್ರಿಲ್ 21 ರಿಂದ ಏಪ್ರಿಲ್ 27ರವರೆಗೆ ನಡೆದ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ 650ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ಅತಿ ವೇಗವಾಗಿ ವಾಹನ ಚಲಾಯಿಸಿದವರಿಂದ ಒಟ್ಟು 1.89 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ನಗರದಾದ್ಯಂತ 53 ಸಂಚಾರ ಪೊಲೀಸ್ ಠಾಣೆಗಳ ಎಲ್ಲ ಸಂಚಾರ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಾಹನ ಚಲಾಯಿಸುವವರ ವಿರುದ್ಧ ನಡೆದ ವಿಶೇಷ ಕಾರ್ಯಾಚರಣೆಯ ಸಂದರ್ಭದಲ್ಲಿ, ಒಟ್ಟು 43,253 ವಾಹನಗಳನ್ನು ಪರಿಶೀಲಿಸಲಾಗಿದೆ ಮತ್ತು ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ 668 ಪ್ರಕರಣಗಳನ್ನು ದಾಖಲಿಸಲಾಗಿದೆ. ಅತಿ ವೇಗವಾಗಿ ವಾಹನ ಚಲಾಯಿಸಿದವರ ವಿರುದ್ಧ 185 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವರಿಂದ ಒಟ್ಟು 1.89 ಲಕ್ಷ ರೂ. ದಂಡವನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದ್ದಾರೆ.

(ವರದಿ- ಎಚ್. ಮಾರುತಿ, ಬೆಂಗಳೂರು)

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.