ಕನ್ನಡ ಸುದ್ದಿ  /  ಕರ್ನಾಟಕ  /  Us Consulate In Bengaluru: ಮುಂದಿನ ವರ್ಷ ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ; ಅಮೆರಿಕ

US Consulate In Bengaluru: ಮುಂದಿನ ವರ್ಷ ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ; ಅಮೆರಿಕ

ಪ್ರಧಾನಿ ನರೇಂದ್ರ ಮೋದಿ 2023 ರಲ್ಲಿ ಅಮೆರಿಕದಲ್ಲಿ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿ ಮಾಡಿದ್ದಾಗ ಭಾರತದಲ್ಲಿ ಎರಡು ಹೊಸ ಯುಎಸ್ ರಾಯಭಾರಿ ಕಚೇರಿಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದರು. ಅದರಂತೆ ಬೆಂಗಳೂರಿನಲ್ಲಿ ಯುಎಸ್ ದೂತಾವಾಸ ಸ್ಥಾಪನೆಯಾಗಲಿದೆ.

ಮುಂದಿನ ವರ್ಷ ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ ಮಾಡುವುದಾಗಿ ಅಮೆರಿಕ ಹೇಳಿದೆ.
ಮುಂದಿನ ವರ್ಷ ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ ಮಾಡುವುದಾಗಿ ಅಮೆರಿಕ ಹೇಳಿದೆ.

ಬೆಂಗಳೂರು: ಮುಂದಿನ ವರ್ಷದ ವೇಳೆಗೆ ಬೆಂಗಳೂರಿನಲ್ಲಿರುವ ಅಮೆರಿಕನ್ ಕಾನ್ಸುಲೇಟ್ (US Consulate In Bengaluru) ಕಾರ್ಯಾರಂಭ ಮಾಡಲಿದೆ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಹೇಳಿದ್ದಾರೆ. 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಗೆ ಭೇಟಿ ನೀಡಿದಾಗ ಮತ್ತು ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಚರ್ಚೆಯ ವೇಳೆ ಭಾರತದಲ್ಲಿ ಎರಡು ಹೊಸ ಯುಎಸ್ ದೂತಾವಾಸಗಳನ್ನು ಸ್ಥಾಪಿಸುವ ಘೋಷಣೆ ಮಾಡಿದ್ದರು. ಅದರಂತೆ ಸಿಲಿಕಾನ್ ಸಿಟಿಯಲ್ಲಿ ಮುಂದಿನ ವರ್ಷ ಅಮೆರಿಕ ರಾಯಭಾರಿ ಕಚೇರಿ ಆರಂಭವಾಗಲಿದೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಿನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಎರಿಕ್ ಗಾರ್ಸೆಟ್ಟಿ, "ಈ ಹಿಂದೆ, ಪ್ರಧಾನಿ ಮೋದಿ ಅಧ್ಯಕ್ಷ ಬೈಡನ್ ಅವರನ್ನು ಭೇಟಿಯಾದಾಗ, ಅವರು ಭಾರತದಲ್ಲಿ ಒಂದಲ್ಲ, ಎರಡು ದೂತಾವಾಸಗಳನ್ನು ಘೋಷಿಸಿದ್ದರು. ಅವುಗಳಲ್ಲಿ ಒಂದು ಬೆಂಗಳೂರಿನಲ್ಲಿಯೇ ಇರುತ್ತದೆ. ಮುಂಬರುವ ವರ್ಷದಲ್ಲಿ ಅದನ್ನು ಸ್ಥಾಪಿಸಲು ನಾನು ಆಶಿಸುತ್ತೇನೆ. ಈ ನಗರದಲ್ಲಿ ಯುಎಸ್ ಕಾನ್ಸುಲೇಟ್ ಅನ್ನು ನೋಡಲು ನಾನು ಉತ್ಸುಕನಾಗಿದ್ದೇನೆ ಅಂತಲೂ ಹೇಳಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಯುಎಸ್ ಕಾನ್ಸುಲೇಟ್ ಕರ್ನಾಟಕದ ಕನಿಷ್ಠ ನಾಲ್ಕರಿಂದ ಐದು ಲಕ್ಷ ಜನರಿಗೆ ನಗರದಲ್ಲಿ ವೀಸಾ ಸಂಬಂಧಿತ ಕೆಲಸಗಳನ್ನು ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದರು. "ಬೆಂಗಳೂರಿನ ಜನರು ಯುಎಸ್ ವೀಸಾ ಸಂಬಂಧಿತ ಯಾವುದೇ ಕೆಲಸವನ್ನು ಪಡೆಯಲು ಚೆನ್ನೈ, ಹೈದರಾಬಾದ್ ಅಥವಾ ದೆಹಲಿಗೆ ಹೋಗಬೇಕಾಗಿತ್ತು. ಇದಕ್ಕೆ 25,000 ರೂ.ಗಳಿಂದ 30,000 ರೂ.ಗಳವರೆಗೆ ವೆಚ್ಚವಾಗುತ್ತಿತ್ತು.

ಅಮೆರಿಕಕ್ಕೆ ಪ್ರಯಾಣಿಸುವ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಟೆಕ್ಕಿಗಳನ್ನು ಹೊಂದಿದ್ದರೂ, ಬೆಂಗಳೂರಿನಲ್ಲಿ ಯುಎಸ್ ರಾಯಭಾರಿ ಕಚೇರಿ ಇರಲಿಲ್ಲ. ಶ್ವೇತಭವನದ ಘೋಷಣೆಯ ಬಗ್ಗೆ ನಮಗೆ ಸಂಪೂರ್ಣ ಸಂತೋಷವಾಗಿದೆ. ಅದನ್ನು ಸಾಧ್ಯವಾಗಿಸಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸುತ್ತೇನೆ. ಬೆಂಗಳೂರಿನಲ್ಲಿರುವ ಯುಎಸ್ ಕಾನ್ಸುಲೇಟ್ ಪ್ರತಿ ವರ್ಷ ಕರ್ನಾಟಕದ ನಾಲ್ಕರಿಂದ ಐದು ಲಕ್ಷ ಜನರಿಗೆ ರಾಜ್ಯದ ಹೊರಗೆ ಪ್ರಯಾಣಿಸಲು ವೀಸಾ ಪಡೆಯಲು ನೆರವಾಗುತ್ತದೆ.

ಬೆಂಗಳೂರಿನಲ್ಲಿರುವ ಯುಎಸ್ ಕಾನ್ಸುಲೇಟ್ ಅನಿವಾಸಿ ಭಾರತೀಯರು, ವಿದ್ಯಾರ್ಥಿಗಳು ಮತ್ತು ಟೆಕ್ಕಿಗಳಿಗೆ ತುಂಬಾ ಅನುಕೂಲಕರವಾಗಲಿದೆ. ಅಮೆರಿಕ ಮತ್ತು ಭಾರತದ ನಡುವಿನ ದೃಢವಾದ ಆರ್ಥಿಕ ಮತ್ತು ವಾಣಿಜ್ಯ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲಲು ಬಾಹ್ಯಾಕಾಶ ಕ್ಷೇತ್ರದ ಉದ್ಯಮಿಗಳನ್ನು ಭೇಟಿ ಮಾಡಲು ಗಾರ್ಸೆಟ್ಟಿ ಬೆಂಗಳೂರಿಗೆ ಭೇಟಿ ನೀಡಿದ್ದರು.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024