ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ, ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿಗೊಳಿಸಿದ ಬೆಂಗಳೂರು ನ್ಯಾಯಾಲಯ; ಏನಿದು ಆದೇಶ?
ಕನ್ನಡ ಸುದ್ದಿ  /  ಕರ್ನಾಟಕ  /  ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ, ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿಗೊಳಿಸಿದ ಬೆಂಗಳೂರು ನ್ಯಾಯಾಲಯ; ಏನಿದು ಆದೇಶ?

ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ, ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿಗೊಳಿಸಿದ ಬೆಂಗಳೂರು ನ್ಯಾಯಾಲಯ; ಏನಿದು ಆದೇಶ?

John Doe Order: ಶೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕುಟುಂಬ ಸದಸ್ಯರು ಮತ್ತು ಧರ್ಮಸ್ಥಳ ಕ್ಷೇತ್ರ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಮತ್ತು ಅಪಪ್ರಚಾರದ ವಿರುದ್ಧ ಜಾನ್ ಡೋ ಆದೇಶ ಹೊರಡಿಸಿದೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ.

ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ, ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ (ಸಾಂಕೇತಿಕ ಚಿತ್ರ)
ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ, ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ (ಸಾಂಕೇತಿಕ ಚಿತ್ರ)

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ, ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ ಹೊರಡಿಸಿದೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ. ಈ ಆದೇಶದಂತೆ ಯಾರೂ ಕೂಡ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರು ಮತ್ತು ಧರ್ಮಸ್ಥಳ ಕ್ಷೇತ್ರ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಮತ್ತು ಅಪಪ್ರಚಾರ ಹರಡಲು ಹಾಗೂ ಮಾಹಿತಿ ಪ್ರಕಟ, ಪ್ರಸಾರ ಮಾಡುವಂತಿಲ್ಲ.

ಏನಿದು ಜಾನ್ ಡೋ ಆದೇಶ?

ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೆ ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧವೂ ಜಾರಿಯಾಗುವ ಕಾನೂನು ಕ್ರಮ. ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮಿಡಿಯಾ ಮತ್ತು ಇತರ ಆನ್‌ಲೈನ್ ತಾಣಗಳಲ್ಲಿ ಅವಹೇಳನಕಾರಿ ಮತ್ತು ಅಪಪ್ರಚಾರ ಹೆಚ್ಚಿರುವ ಕಾರಣ ಇದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ.

ಜಾನ್ ಡೋ ಆದೇಶದ ಮಹತ್ವ

ಜಾನ್ ಡೋ ಆದೇಶದ ಪ್ರಕಾರ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಅ‍ಪಪ್ರಚಾರ ಮಾಡುವುದು ಮತ್ತು ಅವಹೇಳನಕಾರಿ ಮಾಹಿತಿಯನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಹರಡುವುದು ನಿಷೇಧಿಸಲಾಗಿದೆ. ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಈ ಆದೇಶದ ಪ್ರಕಾರ, ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮ ಸಂಸ್ಥೆಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಅವಹೇಳನಕಾರಿ ವಿಚಾರ ಹಂಚಿಕೊಂಡಲ್ಲಿ ತಕ್ಷಣ ಅಳಿಸಿ ಹಾಕಬೇಕು ಮತ್ತು ಇದನ್ನು ಮುಂದುವರೆಸಿದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗುವ ಸಾಧ್ಯತೆ ಇರುತ್ತದೆ.

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಗೌರವ ಹಾಗೂ ಪ್ರತಿಷ್ಠೆಯನ್ನು ರಕ್ಷಿಸಲು ಮತ್ತು ಅಪಪ್ರಚಾರ ತಡೆಯಲು ಮಹತ್ವದ ಆದೇಶವಾಗಿದೆ. ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಪರ ನ್ಯಾಯಲಯದಲ್ಲಿ ವಾದಿಸಿದ್ದಾರೆ.

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.