Bengaluru Crime: ಮಂತ್ರಿ ಮಾಲ್‌ನ 2ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ, ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು
ಕನ್ನಡ ಸುದ್ದಿ  /  ಕರ್ನಾಟಕ  /  Bengaluru Crime: ಮಂತ್ರಿ ಮಾಲ್‌ನ 2ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ, ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು

Bengaluru Crime: ಮಂತ್ರಿ ಮಾಲ್‌ನ 2ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ, ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು

Bengaluru Crime: ಬೆಂಗಳೂರು ಮಂತ್ರಿ ಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಇನ್ನೊಂದೆಡೆ, ಗಂಟೆಗಾನಹಳ್ಳಿಯಲ್ಲಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದಾನೆ. ಮತ್ತೊಂದೆಡೆ, ಆಟೋ ತಗುಲಿದ್ದಕ್ಕೆ ಆಟೋ ಚಾಲಕನ ಹತ್ಯೆ ಮಾಡಿದ ಆರೋಪಿಗಳ ಬಂಧನವಾಗಿದೆ. (ವರದಿ- ಎಚ್ ಮಾರುತಿ, ಬೆಂಗಳೂರು)

ಮಂತ್ರಿ ಮಾಲ್‌ನ 2ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ. ಮತ್ತೊಂದೆಡೆ ಗಂಟೆಗಾನ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು ಸಂಭವಿಸಿದೆ. ಇನ್ನೊಂದು ಪ್ರಕರಣದಲ್ಲಿ ಆಟೋ ಚಾಲಕನ ಹತ್ಯೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. (ಸಾಂಕೇತಿಕ ಚಿತ್ರ)
ಮಂತ್ರಿ ಮಾಲ್‌ನ 2ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ. ಮತ್ತೊಂದೆಡೆ ಗಂಟೆಗಾನ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು ಸಂಭವಿಸಿದೆ. ಇನ್ನೊಂದು ಪ್ರಕರಣದಲ್ಲಿ ಆಟೋ ಚಾಲಕನ ಹತ್ಯೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. (ಸಾಂಕೇತಿಕ ಚಿತ್ರ)

Bengaluru Crime: ಬೆಂಗಳೂರು ಮಲ್ಲೇಶ್ವರಂನ ಮಂತ್ರಿಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಗುರುವಾರ (ಜನವರಿ 23) ರಾತ್ರಿ ನಡೆದಿದೆ. ಇನ್ನೊಂದು ಪ್ರಕರಣದಲ್ಲಿ ಚಿಕ್ಕಜಾಲದ ಗಂಟೆಗಾನ ಹಳ್ಳಿಯಲ್ಲಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದಾನೆ. ಮತ್ತೊಂದೆಡೆ, ಆರ್‌ ಟಿ ನಗರ ಸಮೀಪದ ರಹಮತ್‌ ನಗರದಲ್ಲಿ ಆಟೋ ತಗುಲಿದ್ದಕ್ಕೆ ಆಟೋ ಚಾಲಕನ ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.

ಮಂತ್ರಿಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತನನ್ನು ಟಿಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ.

ತುಮಕೂರು ಜಿಲ್ಲೆ ತಿಪಟೂರು ಮೂಲದ ಮಂಜುನಾಥ್ ಅವರು ಬೆಂಗಳೂರಿನ ನಾಗರಭಾವಿಯಲ್ಲಿ ನೆಲೆಸಿದ್ದರು. ಗುರುವಾರ ಸಂಜೆ ಮಂತ್ರಿಮಾಲ್‌ಗೆ ಬಂದ ಮಂಜುನಾಥ್, ರಾತ್ರಿ 9 ಗಂಟೆ ಸುಮಾರಿಗೆ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಎಲೆಕ್ಟ್ರಾನಿಕ್ಸ್ ಅಂಗಡಿ ನಡೆಸುತ್ತಿದ್ದ ಇವರು ಸಾಲ ಮಾಡಿಕೊಂಡಿದ್ದರು. ಬ್ಯಾಂಕ್ ಸೇರಿ ವಿವಿಧೆಡೆ 2 ಕೋಟಿ ರೂಪಾಯಿಯಷ್ಟು ಸಾಲವಿದೆ. ಸಾಲವನ್ನ ತೀರಿಸಲು ಸಾಧ್ಯವಾಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟುಕೊಂಡೇ ಬಂದಿದ್ದರು. ಡೆತ್‌ನೋಟ್‌ನಲ್ಲೇ ತಮ್ಮ ಸಾವಿನ ಬಳಿಕ ಸಂಪರ್ಕಿಸಬೇಕಾದವರ ಹೆಸರು ಹಾಗೂ ನಂಬರ್‌ಗಳನ್ನ ಬರೆದಿಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ನಡೆದಿದೆ.

ಗಂಟೆಗಾನಹಳ್ಳಿಯಲ್ಲಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ; ಸವಾರ ಸಾವು

ಬೆಂಗಳೂರು ಹೊರವಲಯದ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಗಂಟೆಗಾನಹಳ್ಳಿಯ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಮೃತರನ್ನು 20 ವರ್ಷದ ನೀರಜ್‌ಕುಮಾರ್‌ ಎಂದು ಗುರುತಿಸಲಾಗಿದೆ.

ಉತ್ತರ ಪ್ರದೇಶ ಮೂಲದ ನೀರಜ್‌ ಕುಮಾರ್ ಹಾರೋಹಳ್ಳಿಯಲ್ಲಿ ನೆಲಸಿದ್ದರು. ಗಂಟೆಗಾನಹಳ್ಳಿ ರಸ್ತೆಯ ಸಾಯಿಗ್ರೀನ್ ಪಾರ್ಕ್‌ ಲೇಔಟ್‌ನಲ್ಲಿ ವಿದ್ಯುತ್ ಕಂಬ ಅಳವಡಿಸಲು ಲಾರಿಯನ್ನು ನಿಲುಗಡೆ ಮಾಡಲಾಗಿತ್ತು. ಲಾರಿಯ ಪಾರ್ಕಿಂಗ್‌ ಲೈಟ್‌ ಹಾಕಿರಲಿಲ್ಲ. ರಾತ್ರಿ 11.30ರ ಸುಮಾರಿಗೆ ಅದೇ ಮಾರ್ಗದಲ್ಲಿ ನೀರಜ್‌ಕುಮಾರ್ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಇತರರು ನೀರಜ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಅವರು ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.. ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟೋ ತಗುಲಿದ್ದಕ್ಕೆ ಆಟೋ ಚಾಲಕನ ಹತ್ಯೆ; ಆರೋಪಿಗಳು ಅಂದರ್

ಆರ್‌ ಟಿ ನಗರ ಸಮೀಪದ ರಹಮತ್‌ ನಗರದಲ್ಲಿ ಆಟೋ ಡಿಕ್ಕಿ ಹೊಡೆಯಿತು ಎಂಬ ಕಾರಣಕ್ಕೆ ನಡೆದ ಘರ್ಷಣೆಯಲ್ಲಿ ಆಟೋ ಚಾಲಕನನ್ನು ಭೀಖರವಾಗಿ ಹತ್ಯೆ ಮಾಡಲಾಗಿದೆ. 27 ವರ್ಷದ ಸಲ್ಮಾನ್ ಹತ್ಯೆಗೀಡಾದ ಚಾಲಕ. ಪ್ರಕರಣ ದಾಖಲಿಸಿಕೊಂಡ ಆರ್.ಟಿ.ನಗರ ಪೊಲೀಸರು, ರಹಮತ್ ನಗರದ ನಿವಾಸಿಗಳಾದ ಸೈಯದ್ ಪರ್ವೇಜ್, ಆತನ ಸಹೋದರ ಸೈಯದ್ ತಬ್ರೇಜ್ ಮತ್ತು ಸಂಬಂಧಿಕರಾದ ಸಾದಿಕ್, ತೌಸಿಫ್ ಎಂಬವರನ್ನು ಬಂಧಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ಸೈಯದ್ ಪರ್ವೇಜ್ ತಂದೆಗೆ ರಹಮತ್ ನಗರದಲ್ಲಿ ಆಟೊ ಡಿಕ್ಕಿಯಾಗಿತ್ತು. ಇದೇ ಕಾರಣಕ್ಕೆ ಪರ್ವೇಜ್‌ನ ತಂದೆ, ಆಟೊ ಚಾಲಕ ಸಲ್ಮಾನ್‌ಗೆ ಬೈದಿದ್ದರು. ಇದರಿಂದ ಕೋಪಗೊಂಡ ಸಲ್ಮಾನ್, ಅವರ ಮೇಲೆ ಹಲ್ಲೆ ನಡೆಸಿದ್ದ. ಬಳಿಕ ಆರೋಪಿಗಳು ಸಲ್ಮಾನ್ ಮನೆಯ ಎದುರು ಹೋಗಿ ಗಲಾಟೆ ಆರಂಭಿಸಿದ್ದರು. ಜಗಳ ವಿಕೋಪಕ್ಕೆ ತಿರುಗಿದಾಗ ಆರೋಪಿಗಳು, ಸಲ್ಮಾನ್‌ಗೆ ಕಾಲಿನಿಂದ ಒದ್ದು ತೀವ್ರವಾಗಿ ಹಲ್ಲೆ ಮಾಡಿದ್ದರು. ಗಾಯಗೊಂಡಿದ್ದ ಸಲ್ಮಾನ್‌ನನ್ನು ಕುಟುಂಬದ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಲ್ಮಾನ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

(ವರದಿ- ಎಚ್ ಮಾರುತಿ, ಬೆಂಗಳೂರು)

Whats_app_banner