ಬಿಡದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ಕನ್ನಡ ಸುದ್ದಿ  /  ಕರ್ನಾಟಕ  /  ಬಿಡದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬಿಡದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬಿಡದಿಯಲ್ಲಿ ನಡೆದಿದೆ. ಗಾಯಗೊಂಡಿರುವ ರಿಕ್ಕಿ ರೈ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಮಾಜಿ ಡಾನ್, ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ (ಏಪ್ರಿಲ್ 12, ಶನಿವಾರ) 1.30ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗಾಯವಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರಿಕ್ಕಿ ರೈ ತಮ್ಮ ಕಪ್ಪು ಬಣ್ಣದ ಫಾರ್ಚೂನರ್ ಕಾರಿನಲ್ಲಿ ಬೆಂಗಳೂರಿಗೆ ಹೋಗಲು ಮನೆಯಿಂದ ಹೊರ ಬರುತ್ತಿದ್ದಂತೆ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬಿಡದಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ತೀವ್ರವಾಗಿ ಗಾಯಗೊಂಡಿರುವ ರಿಕ್ಕಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರಾಮನಗರ ಎಸ್ಪಿ ಶ್ರೀನಿವಾಸ ಗೌಡ, ಡಿವೈಎಸ್ಪಿ ಶ್ರೀನಿವಾಸ ಅವರ ನೇತೃದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಗುಂಡಿನ ದಾಳಿ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫೈರಿಂಗ್ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ರಿಕ್ಕಿ ರೈ ಅವರ ಮನೆ ಬಳಿಯ ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಪತ್ತೆಹಚ್ಚುವ ಪ್ರಯತ್ನವನ್ನು ಮುಂದುವರಿಸಿದ್ದಾರೆ. ಬಿಡದಿ ಇನ್ಸ್ ಪೆಕ್ಟರ್ ಶಂಕರ್ ನಾಯಕ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಎರಡು ದಿನಗಳ ಹಿಂದಷ್ಟೇ ವಿದೇಶದಿಂದ ಬೆಂಗಳೂರಿಗೆ ವಾಪಸ್ ಬಂದಿದ್ದರು. ಈತ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.