ಬೆಂಗಳೂರು ಅಪರಾಧ ಸುದ್ದಿ; 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಯಶಸ್ವಿ ಕಾರ್ಯಾಚರಣೆ, 2.74 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು ಅಪರಾಧ ಸುದ್ದಿ; 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಯಶಸ್ವಿ ಕಾರ್ಯಾಚರಣೆ, 2.74 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶ

ಬೆಂಗಳೂರು ಅಪರಾಧ ಸುದ್ದಿ; 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಯಶಸ್ವಿ ಕಾರ್ಯಾಚರಣೆ, 2.74 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶ

ಬೆಂಗಳೂರು ಅಪರಾಧ ಸುದ್ದಿ: ಬೆಂಗಳೂರಿನ 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, 2.74 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶಪಡಿಸಿದೆ. 8 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)

ಬೆಂಗಳೂರು ಅಪರಾಧ ಸುದ್ದಿ: 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಯಶಸ್ವಿ ಕಾರ್ಯಾಚರಣೆ ನಡೆಸಿ 2.74 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶಪಡಿಸಿದೆ(ಸಾಂಕೇತಿಕ ಚಿತ್ರ)
ಬೆಂಗಳೂರು ಅಪರಾಧ ಸುದ್ದಿ: 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಯಶಸ್ವಿ ಕಾರ್ಯಾಚರಣೆ ನಡೆಸಿ 2.74 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶಪಡಿಸಿದೆ(ಸಾಂಕೇತಿಕ ಚಿತ್ರ)

ಬೆಂಗಳೂರು: ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೂವರು ವಿದೇಶಿಯರು ಸೇರಿದಂತೆ 8 ಮಂದಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ 2.74 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳ ವಶಪಡಿಸಿಕೊಳ್ಳುವಲ್ಲಿ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ಯಶಸ್ವಿಯಾಗಿದೆ.

ಕೊತ್ತನೂರು, ಸಂಪಿಗೆಹಳ್ಳಿ, ವಿವಿ.ಪುರಂ ಮತ್ತು ಕಾಟನ್‌ ಪೇಟೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ನಡೆಸಿದ ಕಾರ್ಯಾಚರಣೆ ನಡೆಸಿ ನಿಷೇದಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ, ಕ್ರಿಸ್ಟಲ್, ಕೊಕೇನ್ ಮೊದಲಾದ ನಿಷೇಧಿತ ಮಾದಕ ವಸ್ತುಗಳನ್ನು ಜಪ್ತಿ ಮಾಡಿದೆ. ಕೊತ್ತನೂರು ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.

ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದುಕೊಂಡೇ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಈತನಿಂದ ಸುಮಾರು 2 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಹ್ಯಾಶಿಸ್ ಅಯಿಲ್ ಮತ್ತು 716 ಗ್ರಾಂ ತೂಕದ ಚರಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಈತ ಆಂಧ್ರಪ್ರದೇಶದಿಂದ ತನ್ನ ಸ್ನೇಹಿತನಿಂದ ನಿಷೇಧಿತ ಮಾದಕ ವಸ್ತುಗಳನ್ನು ತರಿಸಿಕೊಂಡು ಪರಿಚಯಸ್ಥರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುತ್ತಾನೆ. ಆರೋಪಿ ವಿರುದ್ಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದು, ತನಿಖೆ ಮುಂದುವರೆದಿದೆ.

ಸಂಪಿಗೆಹಳ್ಳಿ ಪೊಲೀಸ್ ಠಾಣೆ ಪ್ರಕರಣ

ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಭ್ಯವಾದ ಖಚಿತ ಮಾಹಿತಿ ಆಧರಿಸಿ ನಡೆಸಿದ ಕಾರ್ಯಾಚರಣೆಯಲ್ಲಿ ಡ್ರಗ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ಮೂವರು ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆದುಕೊಂಡು ಅವರಿಂದ 50 ಲಕ್ಷ ಬೆಲೆಬಾಳುವ ನಿಷೇದಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ, ಕ್ರಿಸ್ಟಲ್, ಕೊಕೇನ್, ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಮೂವರು ವಿದೇಶಿ ಪ್ರಜೆಗಳು ವ್ಯಾಪಾರ ಹಾಗೂ ಮೆಡಿಕಲ್ ವೀಸಾದಡಿ ಭಾರತಕ್ಕೆ ಆಗಮಿಸಿ ಬೆಂಗಳೂರಿನಲ್ಲಿ ವಾಸವಾಗಿದ್ದುಕೊಂಡು ಮೋಜಿನ ಜೀವನ ನಡೆಸಲು ಹಾಗೂ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಗೋವಾ, ಮುಂಬೈ ಮತ್ತು ದೆಹಲಿಯಲ್ಲಿ ವಾಸವಾಗಿರುವ ಅವರ ದೇಶದ ಪ್ರಜೆಗಳಿಂದ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ, ಕ್ರಿಸ್ಟಲ್, ಕೊಕೇನ್ ಅನ್ನು ಕಡಿಮೆ ಬೆಲೆಗೆ ಖರೀದಿಸುತ್ತಿದ್ದರು. ನಂತರ ಗ್ರಾಹಕರಿಗೆ ಈ ಮಾದಕ ವಸ್ತುಗಳನ್ನು 1 ಗ್ರಾಂ ಗೆ ರೂ. 10,000 ದಿಂದ 12,000 ರೂಪಾಯಿವರೆಗೆ ಮಾರಾಟ ಮಾಡುತ್ತಿದ್ದರು. ಇವರ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಹಾಗೂ ವಿದೇಶಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಮೂವರು ವಿದೇಶಿ ಪ್ರಜೆಗಳ ಪೈಕಿ ಓರ್ವನ ವಿರುದ್ಧ ಸೈಬರ್ ವಂಚನೆ ಹಾಗೂ ಐಟಿ ಪ್ರಕರಣಗಳು ಸೇರಿದಂತೆ ಒಟ್ಟು 28 ಪ್ರಕರಣಗಳು ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿರುತ್ತವೆ.

ವಿವಿ.ಪುರಂ ಪೊಲೀಸ್‌ ಠಾಣೆಯಲ್ಲಿ ಇನ್ನೊಂದು ಪ್ರಕರಣ

ಬಾತ್ಮಿದಾರರಿಂದ ಲಭ್ಯವಾದ ಖಚಿತ ಮಾಹಿತಿಯನ್ನು ಆಧರಿಸಿ ವಿವಿ.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಓರ್ವ ಸ್ಥಳೀಯ ಡ್ರಗ್ ಪೆಡ್ಲರ್ ನನ್ನು ಬಂಧಿಸಿ ಆತನಿಂದ 10 ಲಕ್ಷ ರೂಪಾಯಿ ಮೌಲ್ಯದ 5 ಕೆಜಿ ಗಾಂಜಾ, 7 ಎಲ್‌ಎಸ್‌ಡಿ ಸ್ಟ್ರಿಪ್ಸ್ ಗಳು, 25 ಗ್ರಾಂ ಚರಸ್, 1 ಮೊಬೈಲ್ ಫೋನ್ ಮತ್ತು ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈತ ವಿದೇಶದಲ್ಲಿರುವ ತನ್ನ ಸ್ನೇಹಿತನಿಂದ ಮತ್ತು ಸ್ಥಳೀಯ ಡ್ರಗ್ ಪೆಡ್ಲರ್ ಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ಖರೀಧಿಸಿ ಪರಿಚಯವಿರುವ ಗ್ರಾಹಕರಿಗೆ ಮಾತ್ರ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಅಕ್ರಮ ಹಣದ ಸಂಪಾದನೆಯಲ್ಲಿ ತೊಡಗಿರುತ್ತಾನೆ. ಈತನ ವಿರುದ್ಧ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಕಾಟನ್‌ ಪೇಟೆ ಪೊಲೀಸ್ ಠಾಣೆಯ ಪಕರಣ

ಕಾಟನ್‌ ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲೂ ಖಚಿತ ಮಾಹಿತಿಯ ಮೇರೆಗೆ ಓರ್ವ ಸ್ಥಳೀಯ ಡ್ರಗ್ ಪೆಡ್ಲರ್ ನನ್ನು ಬಂಧಿಸಲಾಗಿದೆ. ಈತ ಕಡಿಮೆ ಅವಧಿಯಲ್ಲಿ ಹೆಚ್ಚಿನ ಹಣ ಸಂಪಾದಿಸುವ ಉದ್ದೇಶದಿಂದ ಮತ್ತು ವಿಲಾಸಿ ಜೀವನ ನಡೆಸಲು ತನ್ನ ಸ್ನೇಹಿತರಿಂದ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಖರೀದಿಸಿ ಐಟಿ/ಬಿಟಿ ಉದ್ಯೋಗಿಗಳು ಮತ್ತು ಸ್ಥಳೀಯ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುತ್ತಾನೆ.

ಈತ ಈ ಹಿಂದೆ ಆಟೋ ಡ್ರೈವರ್ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನಿಂದ 14 ಲಕ್ಷ ರೂಪಾಯಿ ಮೌಲ್ಯದ 7 ಕೆಜಿ ಗಾಂಜಾ ಮತ್ತು ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲ ಕಾರ್ಯಾಚರಣೆಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ನಡೆಸಿದೆ.

(ವರದಿ- ಎಚ್. ಮಾರುತಿ, ಬೆಂಗಳೂರು)

Whats_app_banner