ಬೆಂಗಳೂರು: 5 ವರ್ಷದ ಮಗಳನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಮಹಿಳೆ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು: 5 ವರ್ಷದ ಮಗಳನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಮಹಿಳೆ

ಬೆಂಗಳೂರು: 5 ವರ್ಷದ ಮಗಳನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಮಹಿಳೆ

ಬೆಂಗಳೂರು: ಕಳವಳಕಾರಿ ಘಟನೆಯೊಂದರಲ್ಲಿ 5 ವರ್ಷದ ಮಗಳನ್ನು ಕೊಂದ ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಗುಂಟೆ ಸಮೀಪ ಈ ಘಟನೆ ನಡೆದಿದ್ದು, ಮೃತ ಮಹಿಳೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಎಂದು ತಿಳಿದುಬಂದಿದೆ

 ಬೆಂಗಳೂರು ಸಮೀಪ ಬಾಗಲಗುಂಟೆಯಲ್ಲಿ 5 ವರ್ಷದ ಮಗಳನ್ನು ಕೊಂದ ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ.,(ಆತ್ಮಹತ್ಯೆ ತಡೆಯ ಚಿತ್ರವನ್ನು ಸಾಂಕೇತಿಕವಾಗಿ ಬಳಸಲಾಗಿದೆ)
ಬೆಂಗಳೂರು ಸಮೀಪ ಬಾಗಲಗುಂಟೆಯಲ್ಲಿ 5 ವರ್ಷದ ಮಗಳನ್ನು ಕೊಂದ ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ.,(ಆತ್ಮಹತ್ಯೆ ತಡೆಯ ಚಿತ್ರವನ್ನು ಸಾಂಕೇತಿಕವಾಗಿ ಬಳಸಲಾಗಿದೆ) (Pexels)

ಬೆಂಗಳೂರು: ಪಾವಗಡ ಸಮೀಪದ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ತನ್ನ 5 ವರ್ಷದ ಮಗಳನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಾಗಲಗುಂಟೆ ಠಾಣಾ ವ್ಯಾಪ್ತಿಯ ರಾಮಯ್ಯ ಲೇಔಟ್‌ನ ಮನೆಯೊಂದರಲ್ಲಿ ಭಾನುವಾರ ಈ ಕಳವಳಕಾರಿ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತರನ್ನು ರೋಶಿನಿ (5) ಮತ್ತು ಶೃತಿ (33) ಎಂದು ಗುರುತಿಸಲಾಗಿದೆ.

5 ವರ್ಷದ ಮಗಳನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಪಾವಗಡ ಸಮೀಪದ ಗ್ರಾಮದಲ್ಲಿ ಗ್ರಾಪಂನ ಮಾಜಿ ಅಧ್ಯಕ್ಷೆಯಾಗಿದ್ದ ಶೃತಿ ಹಾಗೂ ಅದೇ ಗ್ರಾಪಂ ಕಚೇರಿಯಲ್ಲಿ ಆಡಿಟಿಂಗ್ ಕೆಲಸ ಮಾಡುತ್ತಿದ್ದ ಗೋಪಾಲಕೃಷ್ಣ ಅವರದ್ದು ಪ್ರೇಮ ವಿವಾಹ. 10 ವರ್ಷ ಹಿಂದೆ ವಿವಾಹವಾಗಿದ್ದ ಈ ದಂಪತಿಗೆ ಇಬ್ಬರು ಮಕ್ಕಳು. ಭಾನುವಾರ ಸಂಜೆ ಗೋಪಾಲಕೃಷ್ಣ ಮನೆಯಿಂದ ಹೊರಗೆ ಹೋಗಿದ್ದ ವೇಳೆ ಶೃತಿ ಈ ಕೃತ್ಯವೆಸಗಿದ್ದರು. ಮಗಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿದ ವೇಳೆ ದಂಪತಿಯ ಪುತ್ರ ಹೊರಗೆ ಆಟವಾಡಲು ಹೋಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಗ್ರಾಪಂ ಮಾಜಿ ಅಧ್ಯಕ್ಷೆ

ಬಾಗಲಗುಂಟೆ ಸಮೀಪದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಶೃತಿ ಡೆತ್‌ ನೋಟ್ ಬರೆದಿಟ್ಟಿದ್ದರು. ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೇಸ್‌ಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಪತಿ ಗೋಪಾಲಕೃಷ್ಣ ಅವರಿಗೆ ಅಕ್ರಮ ಸಂಬಂಧ ಇದೆ ಎಂದು ಶೃತಿ ತಾನು ಬರೆದಿಟ್ಟ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ತನ್ನ ಗೆಳೆಯರೊಂದಿಗೆ ಆಟವಾಡಲು ಹೋಗಿದ್ದ ಮಗ ವಾಪಸ್ ಮನೆಗೆ ಬಂದಾಗ ತಾಯಿ ಹಾಗೂ ತಂಗಿ ಮೃತಪಟ್ಟಿರುವುದು ಕಂಡುಬಂದಿದೆ. ಆತ ಕೂಡಲೇ ಅಕ್ಕಪಕ್ಕದ ಮನೆಯವರನ್ನು ಎಚ್ಚರಿಸಿದ್ದ. ಅವರು ಪೊಲೀಸರಿಗೆ ಹಾಗೂ ಗೋಪಾಲಕೃಷ್ಣ ಅವರಿಗೆ ಮಾಹಿತಿ ನೀಡಿದ್ದರು. ಈ ಘಟನೆ ಸಂಬಂಧ ಬಾಗಲಗುಂಟೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಕೌಟುಂಬಿಕ ಕಲಹದ ವಿಚಾರ ಗಮನಸೆಳೆದಿದೆ. ಸದ್ಯ ಶೃತಿ ಅವರ ಪತಿ ಗೋಪಾಲಕೃಷ್ಣ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ನೆರೆ ಹೊರೆಯವರನ್ನು ಕೂಡ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗಮನಿಸಿ: ಯಾವುದೆ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ

ಖಿನ್ನತೆ, ಆತ್ಮಹತ್ಯೆಯ ಆಲೋಚನೆಗಳು ಬಾಧಿಸುತ್ತಿದ್ದರೆ ನಿಮ್ಮ ಗೆಳತಿ / ಗೆಳೆಯರೊಂದಿಗೆ, ಹೆತ್ತವರೊಂದಿಗೆ, ಸಂಬಂಧಿಕರು, ಆಪ್ತರೊಂದಿಗೆ ಮುಕ್ತವಾಗಿ ಮಾತನಾಡಿ. ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ. ಪೊಲೀಸರ, ಆಪ್ತಸಮಾಲೋಚಕರ, ವೈದ್ಯರ ನೆರವು ಪಡೆಯಿರಿ. ಕರ್ನಾಟಕದಲ್ಲಿ ಆರೋಗ್ಯ ಸಹಾಯವಾಣಿ 104, ವೃದ್ಧರ ಸಹಾಯವಾಣಿ 1090, ಮಕ್ಕಳ ಸಹಾಯವಾಣಿ 1098 ಮತ್ತು ಸ-ಮುದ್ರ ಸಹಾಯವಾಣಿ 98803 96331 ಮೂಲಕ ಟೆಲಿ ಕೌನ್ಸೆಲಿಂಗ್ ನೆರವು ಪಡೆದುಕೊಳ್ಳಿ. ಕೊನೇ ನಿರ್ಧಾರಕ್ಕೆ ಮೊದಲು ನಿಮ್ಮವರ ಬಗ್ಗೆ ಒಂದು ಕ್ಷಣ ಯೋಚಿಸಿ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner