ಕನ್ನಡ ಸುದ್ದಿ  /  Karnataka  /  Bengaluru Logs Over 100 Covid Cases In A Single Day, Highest In The State

Bengaluru Covid cases: ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ ನೂರಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣ, ರಾಜ್ಯದಲ್ಲಿಯೇ ಅತ್ಯಧಿಕ

ಭಾನುವಾರ ಬೆಂಗಳೂರಿನಲ್ಲಿ 100 ಹೊಸ ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಕೋವಿಡ್‌ ಪ್ರಕರಣಗಳು 400 ದಾಟಿದೆ ಎನ್ನುವ ಮಾಹಿತಿ ಕರ್ನಾಟಕ ಆರೋಗ್ಯ ಇಲಾಖೆಯಿಂದ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ ನೂರಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣ, ರಾಜ್ಯದಲ್ಲಿಯೇ ಅಧಿಕ
ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ ನೂರಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣ, ರಾಜ್ಯದಲ್ಲಿಯೇ ಅಧಿಕ

ಬೆಂಗಳೂರು: ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1800ಕ್ಕೂ ಹೆಚ್ಚು ಹೊಸ ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳು 10,000 ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಸೋಮವಾರದ ಪರಿಷ್ಕೃತ ಅಂಕಿಅಂಶಗಳಿಂದ ತಿಳಿದುಬಂದಿದೆ.

ಭಾನುವಾರ ಬೆಂಗಳೂರಿನಲ್ಲಿ 100 ಹೊಸ ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಕೋವಿಡ್‌ ಪ್ರಕರಣಗಳು 400 ದಾಟಿದೆ ಎನ್ನುವ ಮಾಹಿತಿ ಕರ್ನಾಟಕ ಆರೋಗ್ಯ ಇಲಾಖೆ ಪ್ರಕಟಿಸಿದ ಹೆಲ್ತ್‌ ಬುಲೆಟಿನ್‌ನಿಂದ ತಿಳಿದುಬಂದಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಸಂಬಂಧಿತ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಭಾನುವಾರ ಬೆಂಗಳೂರು ನಗರದಲ್ಲಿ 120 ಜನರಲ್ಲಿ ಕೊರೊನಾ ಪಾಸಿಟೀವ್‌ ಕಂಡುಬಂದಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರದಲ್ಲಿ 7 ಜನರಲ್ಲಿ ಕೊರೊನಾ ಪಾಸಿಟೀವ್‌ ವರದಿಯಾಗಿದೆ. ಬೆಂಗಳೂರು ನಗರದಲ್ಲಿ 383 ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ 6 ಸಕ್ರಿಯ ಪ್ರಕರಣಗಳಿವೆ.

ನಿನ್ನೆ ಕರ್ನಾಟಕ ರಾಜ್ಯದಲ್ಲಿ ಬೆಂಗಳೂರಿನಲ್ಲಿಯೇ ಅತ್ಯಧಿಕ ಕೋವಿಡ್‌-19 ಪ್ರಕರಣಗಳು ವರದಿಯಾಗಿವೆ. ಕಳೆದ ಕೆಲವು ತಿಂಗಳಿನಿಂದ ಬೆಂಗಳೂರಿನಲ್ಲಿ 100ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿರುವುದು ಇದೇ ಮೊದಲು.

ಇದಕ್ಕೂ ಹಿಂದಿನ ದಿನ ಅಂದರೆ ಶನಿವಾರ ರಾಜ್ಯದಲ್ಲಿ 155 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದವು. ಈ ಸಮಯದಲ್ಲಿ ಬೆಂಗಳೂರಿನಲ್ಲಿ 58 ಪ್ರಕರಣಗಳು ವರದಿಯಾಗಿದ್ದವು. ಮೊನ್ನೆಗಿಂತ ನಿನ್ನೆ ಎರಡು ಪಟ್ಟು ಪ್ರಕರಣಗಳು ಹೆಚ್ಚಾಗಿವೆ. ಮೊನ್ನೆ ಶಿವಮೊಗ್ಗದಲ್ಲಿ 41, ಬಳ್ಳಾರಿ 9, ಹಾಸನ, ಕಲಬುರಗಿ ತಲಾ 7,ಬೆಂಗಳೂರು ಗ್ರಾಮಾಂತರ 5, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಹಾವೇರಿ ತಲಾ 2 ಕೋವಿಡ್‌ ಪ್ರಕರಣ ಸೇರಿದಂತೆ ಒಟ್ಟು 155 ಹೊಸ ಕೋವಿಡ್‌ ಸೋಂಕು ವರದಿಯಾಗಿತ್ತು.

ದೇಶದಲ್ಲಿ ಕೋವಿಡ್- 19 ಮತ್ತು ಇನ್ಫ್ಲುಯೆಂಜಾ ಪ್ರಕರಣಗಳ ಏರಿಕೆ ಕಾಣುತ್ತಿರುವುದರಿಂದ ಆಸ್ಪತ್ರೆಗಳಲ್ಲಿನ ಸಿದ್ಧತೆ ಕುರಿತು ಪರಿಶೀಲಿಸಲು ಏಪ್ರಿಲ್ 10 ಮತ್ತು 10 ರಂದು ದೇಶಾದ್ಯಂತ ಕೋವಿಡ್ ನಿರ್ವಹಣಾ ಪೂರ್ವ ಸಿದ್ಧತಾ ಪರಿಶೀಲನೆ ನಡೆಸಲು ಕೇಂದ್ರ ಸರಕಾರ ಯೋಜಿಸಿದೆ.

ಆಸ್ಪತ್ರೆಗಳಲ್ಲಿರುವ ಹಾಸಿಗೆಗಳು, ವೈದ್ಯಕೀಯ ಸಲಕರಣೆಗಳು ಮತ್ತು ವೈದ್ಯಕೀಯ ಆಕ್ಸಿಜನ್ , ಔಷಧಗಳ ಲಭ್ಯತೆಯನ್ನು ಪರಿಶೀಲಿಸುವ ಸಲುವಾಗಿ ದೇಶಾದ್ಯಂತ ಕೋವಿಡ್ ನಿರ್ವಹಣಾ ಪೂರ್ವ ಸಿದ್ಧತಾ ಪರಿಶೀಲನೆ ನಡೆಸಲು ಉದ್ದೇಶಿಸಲಾಗಿದೆ.

ಇದಕ್ಕೆ ಸಂಬಂಧಪಟ್ಟಂತೆ ಮಾರ್ಚ್ 27 ರಂದು ನಡೆಯಲಿರುವ ವರ್ಚುಯಲ್ ಸಭೆಯಲ್ಲಿ ಅಣಕು ಕಾರ್ಯಾಚರಣೆ ಕುರಿತು ಎಲ್ಲಾ ರಾಜ್ಯಗಳಿಗೆ ಸಮಗ್ರ ಮಾಹಿತಿಯನ್ನು ಒದಗಿಸಲಾಗುವುದು ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದೆ.

ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ನಿರಂತರ ಮೇಲ್ವಿಚಾರಣೆ ಮತ್ತು ಸೋಂಕು ತಡೆಗಟ್ಟುವ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಿದೆ.

IPL_Entry_Point