ಮೈಕ್ರೋಫೈನಾನ್ಸ್‌ ಹಾವಳಿ ನಿಯಂತ್ರಣಕ್ಕೆ ಹೊಸ ಕಾನೂನು; ಸುಗ್ರೀವಾಜ್ಞೆ ಮೂಲಕ ಜಾರಿಗೆ ಕ್ರಮ -ಸಿಎಂ ಸಿದ್ದರಾಮಯ್ಯ
ಕನ್ನಡ ಸುದ್ದಿ  /  ಕರ್ನಾಟಕ  /  ಮೈಕ್ರೋಫೈನಾನ್ಸ್‌ ಹಾವಳಿ ನಿಯಂತ್ರಣಕ್ಕೆ ಹೊಸ ಕಾನೂನು; ಸುಗ್ರೀವಾಜ್ಞೆ ಮೂಲಕ ಜಾರಿಗೆ ಕ್ರಮ -ಸಿಎಂ ಸಿದ್ದರಾಮಯ್ಯ

ಮೈಕ್ರೋಫೈನಾನ್ಸ್‌ ಹಾವಳಿ ನಿಯಂತ್ರಣಕ್ಕೆ ಹೊಸ ಕಾನೂನು; ಸುಗ್ರೀವಾಜ್ಞೆ ಮೂಲಕ ಜಾರಿಗೆ ಕ್ರಮ -ಸಿಎಂ ಸಿದ್ದರಾಮಯ್ಯ

ಮೈಕ್ರೋಫೈನಾನ್ಸ್‌ಗಳ ಕಿರುಕುಳ ಹೆಚ್ಚಾಗುತ್ತಿರುವ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ವಿಶೇಷ ಸಭೆ ನಡೆಸಿದ್ದಾರೆ. ಮೈಕ್ರೋಫೈನಾನ್ಸ್‌ ಕಂಪನಿಗಳ ಅಟ್ಟಹಾಸಕ್ಕೆ ಅಂಕುಶ ಹಾಕಲು ರಾಜ್ಯದಲ್ಲಿ ಶೀಘ್ರದಲ್ಲೇ ಹೊಸ ಕಾನೂನು ತರಲು ಸರ್ಕಾರ ನಿರ್ಧರಿಸಿದೆ.

ಮೈಕ್ರೋಫೈನಾನ್ಸ್‌ ಹಾವಳಿ ನಿಯಂತ್ರಣಕ್ಕೆ ಹೊಸ ಕಾನೂನು; ಸುಗ್ರೀವಾಜ್ಞೆ ಮೂಲಕ ಜಾರಿಗೆ ಕ್ರಮ
ಮೈಕ್ರೋಫೈನಾನ್ಸ್‌ ಹಾವಳಿ ನಿಯಂತ್ರಣಕ್ಕೆ ಹೊಸ ಕಾನೂನು; ಸುಗ್ರೀವಾಜ್ಞೆ ಮೂಲಕ ಜಾರಿಗೆ ಕ್ರಮ

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಹಲವರು ತೊಂದರೆ ಅನುಭವಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಮೈಕ್ರೋಫೈನಾನ್ಸ್‌ಗಳ ಕಿರುಕುಳ ಹೆಚ್ಚಾಗುತ್ತಿರುವ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ವಿಶೇಷ ಸಭೆ ನಡೆಸಿದ್ದಾರೆ. ಮೈಕ್ರೋಫೈನಾನ್ಸ್‌ ಕಂಪನಿಗಳ ಅಟ್ಟಹಾಸಕ್ಕೆ ಅಂಕುಶ ಹಾಕಲು ರಾಜ್ಯದಲ್ಲಿ ಶೀಘ್ರದಲ್ಲೇ ಹೊಸ ಕಾನೂನು ತರಲು ಸರ್ಕಾರ ನಿರ್ಧರಿಸಿದೆ. ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ತರಲು ಸಿದ್ಧರಾಮಯ್ಯ ಸರ್ಕಾರ ನಿರ್ಧಾರಕ್ಕೆ ಬಂದಿದೆ.

ಸಾಲ ವಸೂಲಿ ಸಂಬಂಧ ಮೈಕ್ರೋಫೈನಾನ್ಸ್‌ ಕಂಪನಿಗಳಿಗೆ ಹಲವು ಸೂಚನೆಗಳನ್ನು ನೀಡಿದೆ. ಆರ್‌ಬಿಐ ನಿಯಮದಡಿ ಅರ್ಹ ಪ್ರಮಾಣದಲ್ಲಿ ಮಾತ್ರವೇ ಬಡ್ಡಿ ವಿಧಿಸಬೇಕು. ಹೆಚ್ಚುವರಿ ಬಡ್ಡಿ ವಿಧಿಸುವಂತಿಲ್ಲ. ಸಂಜೆ 5 ಗಂಟೆ ಮೇಲೆ ಬಡ್ಡಿ ವಸೂಲಿಗೆ ಮನೆಮನೆಗೆ ಹೋಗುವಂತಿಲ್ಲ. ಯಾರಿಗೂ ಕಿರುಕುಳ ನೀಡುವಂತಿಲ್ಲ. ಒಂದು ವೇಳೆ ಕಿರುಕುಳ ನೀಡಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸೂಚನೆ ನೀಡಿದ್ದಾರೆ. ಮೈಕ್ರೋಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು ಹೀಗಿವೆ.

ಸಭೆಯ ಮುಖ್ಯಾಂಶಗಳು

  • ಮೈಕ್ರೋಫೈನಾನ್ಸ್‌ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತ ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ.
  • ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ.
  • ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು.
  • ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ. ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.
  • ಯಾರಾದರೂ ಮೈಕ್ರೋಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ, ಹಾಗೂ ಮೈಕ್ರೋಫೈನಾನ್ಸ್‌ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು.
  • ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚನೆ.

ಇದನ್ನೂ ಓದಿ | ಮೈಕ್ರೋಫೈನಾನ್ಸ್ ಕಿರುಕುಳ ವಿರೋಧಿಸಿ ಸರ್ಕಾರಕ್ಕೆ ಮಾಂಗಲ್ಯ ಸರ ರವಾನೆ, ಗಮನ ಸೆಳೆಯಿತು ವಿಶೇಷ ಅಭಿಯಾನ, ಜ 25ಕ್ಕೆ ಸಿಎಂ ನೇತೃತ್ವದಲ್ಲಿ ಸಭೆ

  • Banning of unregulated lending Activities ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
  • ಸಾಲ ವಸೂಲಾತಿ ಕುರಿತಾಗಿ ಆರ್‌ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5 ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು; ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು. ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ.
  • ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್‌ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಇದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆದಿದೆ.

ಇದನ್ನೂ ಓದಿ | ಮೈಕ್ರೋಫೈನಾನ್ಸ್ ವಿಶೇಷ ಸಭೆ; ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತೀರಾ, ಮೈಕ್ರೋಫೈನಾನ್ಸ್ ಕಂಪನಿ ಮುಖ್ಯಸ್ಥರಿಗೆ ಸಿಎಂ ಪ್ರಶ್ನೆ

Whats_app_banner