ಕನ್ನಡ ಸುದ್ದಿ  /  ಕರ್ನಾಟಕ  /  Bangalore Mysore Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ 6 ಮುಖ್ಯ ಪಥ, 2 ಸರ್ವೀಸ್ ರಸ್ತೆಗಳಿವೆ: ನಿತಿನ್ ಗಡ್ಕರಿ ಟ್ವೀಟ್

Bangalore Mysore Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ 6 ಮುಖ್ಯ ಪಥ, 2 ಸರ್ವೀಸ್ ರಸ್ತೆಗಳಿವೆ: ನಿತಿನ್ ಗಡ್ಕರಿ ಟ್ವೀಟ್

ಭಾರತ ಮಾಲಾ ಹೆದ್ದಾರಿ ಯೋಜನೆಯಡಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು 8 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 12 ರಂದು ಲೋಕಾರ್ಪಣೆ ಮಾಡಲಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ 10 ಪಥಗಳಿದ್ದ ಎರಡು ಭಾಗಗಳಾಗಿ ವಿಂಡಗಿಸಲಾಗಿದೆ. (ಫೋಟೋ-Twitter/ @nitin_gadkari)
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ 10 ಪಥಗಳಿದ್ದ ಎರಡು ಭಾಗಗಳಾಗಿ ವಿಂಡಗಿಸಲಾಗಿದೆ. (ಫೋಟೋ-Twitter/ @nitin_gadkari)

ನವದೆಹಲಿ: ಹೊಸದಾಗಿ ನಿರ್ಮಾಣ ಮಾಡಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ 6 ಮುಖ್ಯ ಪಥಗಳು ಹಾಗೂ ಎರಡು ಸರ್ವೀಸ್ ರಸ್ತೆಗಳು ಇವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಈ ಬಗ್ಗೆ ಟ್ವೀಟ್ ಮಾಡಿ ಎಕ್ಸ್‌ಪ್ರೆಸ್‌ವೇ ನ ಫೋಟೋಗಳನ್ನು ಹಂಚಿಕೊಂಡಿರುವ ಸಚಿವರು, 118 ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ 6 ಮುಖ್ಯ ಕ್ಯಾರೇಜ್‌ವೇ ಲೇನ್‌ಗಳನ್ನು ಮತ್ತು ಎರಡೂ ಬದಿಗಳಲ್ಲಿ 2 ಸರ್ವಿಸ್ ರಸ್ತೆ ಲೇನ್‌ಗಳನ್ನು ಒಳಗೊಂಡಿದೆ. ಇದನ್ನು ಭಾರತಮಾಲಾ ಪರಿಯೋಜನಾ ಅಡಿಯಲ್ಲಿ8,478 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದಿದ್ದಾರೆ.

ಈ ಹೊಸ ಹೆದ್ದಾರಿಯಿಂದ ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಮೂರು ಗಂಟೆಗಳಿಂದ ಸುಮಾರು 75 ನಿಮಿಷಗಳಿಗೆ ಕಡಿಮೆ ಮಾಡುವ ನಿರೀಕ್ಷೆಯಿದೆ ಎಂದು ಸಚಿವರು ಅಂದಾಜಿಸಿದ್ದಾರೆ.

ಭಾರತಮಾಲಾ ಪರಿಯೋಜನಾ ಅಡಿಯಲ್ಲಿ 8,478 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಎಕ್ಸ್‌ಪ್ರೆಸ್‌ವೇಯನ್ನು ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ 10-ಲೇನ್ ಯೋಜನೆಯಾಗಿದ್ದು, ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಒಂದು ಬೆಂಗಳೂರಿನಿಂದ ನಿಡಗಟ್ಟಾ ಮತ್ತು ನಿಡಗಟ್ಟಾದಿಂದ ಮೈಸೂರಿಗೆ. ಮೊದಲ ಹಂತದಲ್ಲಿ, 52 ಕಿಮೀ ಗ್ರೀನ್‌ಫೀಲ್ಡ್ ಇದ್ದು, ಐದು ಬೈಪಾಸ್‌ಗಳನ್ನು ಒಳಗೊಂಡಿದೆ. ಈ ಬೈಪಾಸ್ ಬೆಂಗಳೂರಿನ ಟ್ರಾಫಿಕ್ ಬ್ಲಾಕ್‌ಗಳನ್ನು ಕಡಿಮೆ ಮಾಡುತ್ತದೆ. ಜೊತೆಗೆ ಎಲ್ಲಾ ಪ್ರಯಾಣಿಕರಿಗೆ ತೊಂದರೆ ಮುಕ್ತ ಪ್ರಯಾಣವನ್ನು ನೀಡಲಿದೆ ಎಂದು ಹೇಳಲಾಗಿದೆ.

ಎಕ್ಸ್‌ಪ್ರೆಸ್‌ವೇ ಐದು ಮುಖ್ಯ ಬೈಪಾಸ್‌ಗಳನ್ನು ಹೊಂದಿದೆ, ಅವುಗಳೆಂದರೆ ಶ್ರೀರಂಗಪಟ್ಟಣ ಬೈಪಾಸ್, ಮಂಡ್ಯ ಬೈಪಾಸ್, ಬಿಡದಿ ಬೈಪಾಸ್ ಗಳು. ರಾಮನಗರ, ಚನ್ನಪಟ್ಟಣ ಹಾಗೂ ಮದ್ದೂರು ಬೈಪಾಸ್ 22 ಕಿಲೋಮೀಟರ್ ಉದ್ದದ ವಿಸ್ತರಣೆಯಾಗಿದೆ.

ಬೆಂಗಳೂರು-ಮೈಸೂರು ಮಾರ್ಗದಲ್ಲಿ ನಗರ ಮತ್ತು ಪಟ್ಟಣಗಳಿಂದ ಬರುವ ಜನದಟ್ಟಣೆಯನ್ನು ತಪ್ಪಿಸಲು ಬೈಪಾಸ್‌ಗಳನ್ನು ನಿರ್ಮಿಸಲಾಗಿದ್ದು, ಇವುಗಳನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಪ್ರಕಾರ, 24 ಗಂಟೆಗಳ ಒಳಗೆ ಹಿಂದಿರುಗುವ ಪ್ರಯಾಣಕ್ಕೆ ಪ್ರತಿ ಕಾರಿಗೆ 205 ರೂಪಾಯಿ ಟೋಲ್ ಶುಲ್ಕ ವಿಧಿಸಲಿದೆ. ಆದರೆ ಮಿನಿ ಬಸ್‌ಗಳಿಗೆ ಏಕಮುಖ ಪ್ರಯಾಣಕ್ಕೆ 220 ರೂಪಾಯಿ ಇದ್ದರೆ, ಬಸ್ ಗಳಿಗೆ 460 ವಿಧಿಸಲಾಗುತ್ತದೆ.

118 ಕಿಮೀ ಎಕ್ಸ್‌ಪ್ರೆಸ್‌ವೇ ಎರಡು ಟೋಲ್-ಕಲೆಕ್ಷನ್ ಪಾಯಿಂಟ್‌ಗಳನ್ನು ಹೊಂದಿದೆ. ಇದು ಆರು ವರ್ಗದ ವಾಹನಗಳಿಗೆ ಟೋಲ್ ವಿಧಿಸುತ್ತದೆ. ಮೇಯಿಂದ ಟೋಲ್ ಸಂಗ್ರಹ ಶುರುವಾಗಲಿದೆ.

ರಸ್ತೆಗಳು, ಸಂಚಾರ ಮಾನದಂಡಗಳು ಕಾಲಕ್ಕೆ ತಕ್ಕಂತೆ ಬದಲಾಗಿವೆ. ಆದರೆ ಇಂದಿಗೂ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳ ವೇಗದ ಮಿತಿಗಳನ್ನು ಅದಕ್ಕೆ ಅನುಗುಣವಾಗಿ ನವೀಕರಿಸಲಾಗಿಲ್ಲ. ಅದಕ್ಕಾಗಿಯೇ ವೇಗದ ಮಿತಿಯನ್ನು ಮತ್ತೊಮ್ಮೆ ನಿಗದಿಪಡಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇತ್ತೀಚೆಗೆ ಹೇಳಿದ್ದರು.

ರಾಷ್ಟ್ರೀಯ ಹೆದ್ದಾರಿ ಮತ್ತು ಹೊಸ ಎಕ್ಸ್‌ಪ್ರೆಸ್‌ ವೇಗಳಲ್ಲಿ ವಾಹನದ ಮಿತಿಯನ್ನು ಹೆಚ್ಚಿಸುವ ಕುರಿತು ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದರು.

ಬೆಂಗಳೂರು-ಮೈಸೂರು ಹೆದ್ದಾರಿ ವಿಚಾರದಲ್ಲಿ ಆಡಳಿತ-ವಿಪಕ್ಷಗಳ ಫೈಟ್

ಇನ್ನ ಇದೇ ವಿಚಾರವಾಗಿ ಮಾತನಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಯೋಜನೆಯನ್ನು ಕಾಂಗ್ರೆಸ್ ಆಡಳಿತದಲ್ಲಿ ತರಲಾಗಿತ್ತು ಹೀಗಾಗಿ ಹೆದ್ದಾರಿ ನಿರ್ಮಾಣದ ಕ್ರೆಡಿಕ್ ಕಾಂಗ್ರೆಸ್ ಗೆ ಸಲ್ಲಬೇಕು ಎಂದು ಹೇಳಿದ್ದಾರೆ.

ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ವರ್ಷದಲ್ಲಿ ಪ್ರಧಾನಿ ಮೋದಿ 6ನೇ ಭೇಟಿ ಇದಾಗಿದೆ. ಮಂಡ್ಯ ಕಾರ್ಯಕ್ರಮ ಬಳಿಕ ಅವರು ಧಾರವಾಡಕ್ಕೆ ತೆರಳಲಿದ್ದಾರೆ.

IPL_Entry_Point

ವಿಭಾಗ