ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ತಿಂಗಳಲ್ಲಿ 1 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ತಿಂಗಳಲ್ಲಿ 1 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ತಿಂಗಳಲ್ಲಿ 1 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯೊಂದರಲ್ಲೇ 5 ತಿಂಗಳಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಸಂಚಾರ ನಿಯಯ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ತಿಂಗಳಲ್ಲಿ 1 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್
ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ತಿಂಗಳಲ್ಲಿ 1 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್ (HT Photo)

ಬೆಂಗಳೂರು: ಟೆಕ್ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಮಯ ಘಟನೆಗಳ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕಳೆದ (2024) 5 ತಿಂಗಳಲ್ಲಿ 1.02 ಲಕ್ಷ ಸಂಚಾರ ನಿಯಮ ಉಲ್ಲಂಘನೆಯಾಗಿದೆ. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ಸಂಚಾರ ಪೊಲೀಸರು ಬಳಸುವ ಹ್ಯಾಂಡ್-ಹೆಲ್ಡ್ ಫೀಲ್ಡ್ ಟ್ರಾಫಿಕ್ ಉಲ್ಲಂಘನೆ ವರದಿ (ಎಫ್‌ಟಿವಿಆರ್) ಯಂತ್ರಗಳಿಂದ ಮಾತ್ರ ಈ ಉಲ್ಲಂಘನೆಗಳನ್ನು ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಕೈಯಲ್ಲಿ ಹಿಡಿಯಬಹುದಾದ ಎಫ್‌ಟಿವಿಆರ್ ಯಂತ್ರಗಳ ಜೊತೆಗೆ, ಸಿಸಿಟಿವಿ ಕ್ಯಾಮೆರಾಗಳು, ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಮತ್ತು ಕೆಂಪು-ಬೆಳಕಿನ ಉಲ್ಲಂಘನೆ ಪತ್ತೆ (ಆರ್‌ಎಲ್‌ವಿಡಿ) ಕ್ಯಾಮೆರಾಗಳು ಸಹ ರಸ್ತೆಯಲ್ಲಿ ಸಂಚಾರ ಉಲ್ಲಂಘನೆಗಳನ್ನು ದಾಖಲಿಸುತ್ತಿವೆ.

ದ್ವಿಚಕ್ರ ವಾಹನ ಚಾಲಕರನ್ನು ಒಳಗೊಂಡ ಮಾರಣಾಂತಿಕ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದು ಪೊಲೀಸರಿಗೆ ಕಳವಳದ ವಿಷಯವಾಗಿದೆ. "ದ್ವಿಚಕ್ರ ವಾಹನ ಬಳಕೆದಾರರಿಗೆ ಸಂಬಂಧಿಸಿದ ಸುರಕ್ಷತಾ ಕಾಳಜಿಗಳನ್ನು ಅತಿಯಾಗಿ ಒತ್ತಿಹೇಳಲು ಸಾಧ್ಯವಿಲ್ಲ. ಮಾರಣಾಂತಿಕ ಅಪಘಾತಕ್ಕೆ ಬಲಿಯಾದವರಲ್ಲಿ ಶೇಕಡಾ 60 ರಷ್ಟು ದ್ವಿಚಕ್ರ ವಾಹನ ಬಳಕೆದಾರಾಗಿದ್ದಾರೆ. ಇವರಲ್ಲಿ ಮೂರನೇ ಎರಡಷ್ಟು ಜನರು ಮಾತ್ರ ಹೆಲ್ಮೆಟ್ ಬಳಸುತ್ತಾರೆ. ಹೆಲ್ಮೆಟ್ ಧರಿಸದಿರುವುದು ಸಾವಿಗೆ ಕಾರಣವಾಗಿದೆ. ಸುರಕ್ಷಿತ ಚಾಲನೆ ನಿರ್ಲಕ್ಷ್ಯಿಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಹಿಂದೆ ಹೇಳಿದ್ದರು.

ಸಂಚಾರ ನಿಯಮಗಳನ್ನು ಉಲ್ಲಂಘಿಸುವವರನ್ನು ಪತ್ತೆಹಚ್ಚಲು ಮತ್ತು ಉಲ್ಲಂಘಿಸುವವರಿಗೆ ಚಲನ್ ನೀಡಲು ಬೆಂಗಳೂರು ಸಂಚಾರ ಪೊಲೀಸರು ನಗರದಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಐಟಿಎಂಎಸ್) ಅನ್ನು ಪರಿಚಯಿಸಿದ್ದಾರೆ. ಸಿಗ್ನಲ್ ಜಂಪ್ ಮಾಡುವುದು, ಹೆಲ್ಮೆಟ್ ಇಲ್ಲದೆ ಸವಾರಿ ಮಾಡುವುದು, ಟ್ರಿಪಲ್ ರೈಡಿಂಗ್ ಮತ್ತು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವುದು ಮುಂತಾದ ಉಲ್ಲಂಘನೆಗಳನ್ನು ಎಐ ವ್ಯವಸ್ಥೆಯು ಪತ್ತೆ ಮಾಡುತ್ತದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner