ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ಇಂದು ಕರ್ನಾಟಕ ಸರ್ಕಾರದ ಪ್ರತಿಭಟನೆ; 135 ಕಾಂಗ್ರೆಸ್ ಶಾಸಕರು ಸೇರಿ ಹಲವರು ಭಾಗಿ
ಕನ್ನಡ ಸುದ್ದಿ  /  ಕರ್ನಾಟಕ  /  ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ಇಂದು ಕರ್ನಾಟಕ ಸರ್ಕಾರದ ಪ್ರತಿಭಟನೆ; 135 ಕಾಂಗ್ರೆಸ್ ಶಾಸಕರು ಸೇರಿ ಹಲವರು ಭಾಗಿ

ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ಇಂದು ಕರ್ನಾಟಕ ಸರ್ಕಾರದ ಪ್ರತಿಭಟನೆ; 135 ಕಾಂಗ್ರೆಸ್ ಶಾಸಕರು ಸೇರಿ ಹಲವರು ಭಾಗಿ

ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ಇಂದು (ಫೆ.7) ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆ ನಡೆಯಲಿದ್ದು, 135 ಶಾಸಕರು ಸೇರಿ ಹಲವರು ಭಾಗಿಯಾಗುತ್ತಿದ್ದಾರೆ. ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ಇಂದು (ಫೆ.7) ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆ ಆಯೋಜಿಸಿದ್ದು, 135 ಶಾಸಕರು ಸೇರಿ ಹಲವರು ಭಾಗಿಯಾಗುತ್ತಿದ್ದಾರೆ. (ಕಡತ ಚಿತ್ರ)
ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ಇಂದು (ಫೆ.7) ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆ ಆಯೋಜಿಸಿದ್ದು, 135 ಶಾಸಕರು ಸೇರಿ ಹಲವರು ಭಾಗಿಯಾಗುತ್ತಿದ್ದಾರೆ. (ಕಡತ ಚಿತ್ರ)

ಕೇಂದ್ರ ಸರ್ಕಾರದಿಂದ ತೆರಿಗೆ ಪಾಲು ಆಗ್ರಹಿಸಿ ಕರ್ನಾಟಕ ಸರ್ಕಾರ ಇಂದು (ಫೆ.7) ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಿದೆ. ಕರ್ನಾಟಕದ 135 ಕಾಂಗ್ರೆಸ್‌ ಶಾಸಕರು, 28 ವಿಧಾನ ಪರಿಷತ್ ಸದಸ್ಯರು, ಒಬ್ಬ ಲೋಕಸಭಾ ಸದಸ್ಯ, 5 ರಾಜ್ಯಸಭಾ ಸದಸ್ಯರು ಮತ್ತು ಇತರೆ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಪಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆಯೇ (ಫೆ.6) ದೆಹಲಿಗೆ ತಲುಪಿದ್ದು, ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ತಯಾರಿ ಪರಿಶೀಲನೆ ನಡೆಸಿದ್ದರು. ಕಾಂಗ್ರೆಸ್ ಶಾಸಕರು, ಸಂಸದರು, ನಾಯಕರು ಕೂಡ ನಿನ್ನೆ ರಾತ್ರಿ ದೆಹಲಿಗೆ ತಲುಪಿದ್ದಾರೆ. ಕಾಂಗ್ರೆಸ್ ಬೆಂಬಲಿತ ಸ್ವತಂತ್ರ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಯುವ ಕಾಂಗ್ರೆಸ್ ಸದಸ್ಯರು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಕರ್ನಾಟಕದ ಎಲ್ಲ ಸಂಸದರಿಗೆ, ಕೇಂದ್ರ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಎಲ್ಲ ಕೇಂದ್ರ ಸಚಿವರು ಮತ್ತು ಸಂಸದರು ಪ್ರತಿಭಟನೆಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಫೆಬ್ರವರಿ 5 ರಂದು ಬರೆದ ಪತ್ರಗಳಲ್ಲಿ, ಸಿದ್ದರಾಮಯ್ಯ ಅವರು ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ನಡೆಯುತ್ತಿರುವ ಅನ್ಯಾಯ ಮತ್ತು ನಿರ್ಲಕ್ಷ್ಯಕ್ಕೆ ಪ್ರತಿಕ್ರಿಯೆಯಾಗಿ "ಚಲೋ ದೆಹಲಿ" ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಉಲ್ಲೇಖಿಸಿದ್ದಾರೆ. ಇದಕ್ಕೆ ಬೆಂಬಲ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ ನಾರಾಯಣಸ್ವಾಮಿ ಸೇರಿ ಅನೇಕರನ್ನು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದರಿಗೆ ಬರೆದ ಪತ್ರದಲ್ಲಿ ಏನಿದೆ

ಕರ್ನಾಟಕಕ್ಕೆ ತೆರಿಗೆ ಪಾಲು ಹಂಚಿಕೆಯಲ್ಲಿ ಆಗಿರುವ ಘೋರ ಅನ್ಯಾಯ, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ನಿರ್ಲಕ್ಷ್ಯ ಮತ್ತು ವಿಳಂಬದಿಂದ ರಾಜ್ಯದಲ್ಲಿ ಜನಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಿಗೆ ಇದರ ಅರಿವಿದೆ. ಆದ್ದರಿಂದ ಈ ಆಂದೋಲನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದ ಆರಂಭದಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ನಿವಾಸಿಗಳ ಜೀವನದ ಮೇಲೆ ಅಸಮಾನ ತೆರಿಗೆ ವಿತರಣೆ ಮತ್ತು ಯೋಜನೆಯ ಅನುಮೋದನೆಗಳಲ್ಲಿನ ವಿಳಂಬದ ಪರಿಣಾಮ. ರಾಜ್ಯದ ಹಿತಾಸಕ್ತಿಗಾಗಿ ಚುನಾಯಿತ ಪ್ರತಿನಿಧಿಗಳು ಒಂದಾಗಬೇಕು ಎಂದು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ತೆರಿಗೆ ಹಂಚಿಕೆಯಲ್ಲಿನ ಘೋರ ಅನ್ಯಾಯ, ಬರ ಪರಿಹಾರ ಬಿಡುಗಡೆ ಮಾಡದಿರುವುದು, ನಿರ್ಲಕ್ಷ್ಯ ಮತ್ತು ರಾಜ್ಯದ ವಿವಿಧ ಯೋಜನೆಗಳಿಗೆ ಮಂಜೂರಾತಿ ಮತ್ತು ಅನುದಾನ ನೀಡುವಲ್ಲಿ ವಿಳಂಬ ಇತ್ಯಾದಿಗಳಿಂದ ರಾಜ್ಯದ ಜನರ ಜೀವನ ತೀವ್ರವಾಗಿ ಬಾಧಿತವಾಗಿದೆ” ಎಂಬುದರ ಕಡೆಗೆ ಪತ್ರದಲ್ಲಿ ಗಮನಸೆಳೆದಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ವಿರೋಧಿಸಿ ಪಕ್ಷಾತೀತ ಪ್ರತಿಭಟನೆ

ಈ ಪ್ರತಿಭಟನೆಯು ಪಕ್ಷಾತೀತವಾಗಿದ್ದು, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಮತ್ತು ತಾರತಮ್ಯದ ವಿರುದ್ಧದ ಹೋರಾಟ ಎಂಬಂತೆ ರೂಪಿಸಲಾಗಿದೆ. ಕರ್ನಾಟಕದ ಅಭ್ಯುದಯಕ್ಕಾಗಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಫೆ.6) ಸುದ್ದಿಗಾರರ ಜತೆಗೆ ಮಾತನಾಡುತ್ತ ಹೇಳಿದರು.

“ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ. ಇದು ಅನ್ಯಾಯದ ವಿರುದ್ಧದ ಹೋರಾಟ. ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮತ್ತು ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಹಂಚಿಕೆಯಾಗಿದೆ. ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಜೀವನಕ್ಕಾಗಿ ನಾಳೆ (ಬುಧವಾರ) ಬೆಳಗ್ಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಿದ್ದೇವೆ" ಎಂದು ಸಿದ್ದರಾಮಯ್ಯ ಹೇಳಿದರು.

ತೆರಿಗೆ ಹಣದಲ್ಲಿ ಪ್ರತಿಭಟನೆ; ಈಶ್ವರಪ್ಪ ಟೀಕೆ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ತೆರಿಗೆದಾರರ ವೆಚ್ಚದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದೊಂದು ಚುನಾವಣಾ ಸ್ಟಂಟ್ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು.

ಈ ರೀತಿ ಪ್ರತಿಭಟನೆ ನಡೆಸುವ ಬದಲಿಗೆ ಕೇಂದ್ರ ಹಣಕಾಸು ಸಚಿವರೊಂದಿಗೆ ಮಾತುಕತೆ ನಡೆಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಈಶ್ವರಪ್ಪ ಸಲಹೆ ನೀಡಿದರು.

ಕಾಂಗ್ರೆಸ್ ಪಕ್ಷವು ಪ್ರತಿಭಟನೆಯನ್ನು ಆಯೋಜಿಸಿದ್ದರೆ ನನ್ನ ಅಭ್ಯಂತರವೇನೂ ಇರಲಿಲ್ಲ. ಆದರೆ, ಸರ್ಕಾರದ ಹಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ವಿಮಾನ ಹಾರಾಟದ ಶುಲ್ಕಗಳು, ತಂಗುವಿಕೆ, ಆಹಾರ ಮತ್ತು ಇತರ ವೆಚ್ಚಗಳನ್ನು ತೆರಿಗೆದಾರರ ಹಣದಿಂದ ಭರಿಸಲಾಗುತ್ತದೆ. ಇದೊಂದು ಚುನಾವಣಾ ಸ್ಟಂಟ್. ಸಮಸ್ಯೆಗಳಿದ್ದರೆ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಚರ್ಚಿಸಬಹುದಿತ್ತು ಎಂದು ಈಶ್ವರಪ್ಪ ಹೇಳಿದರು.

Whats_app_banner