ಕನ್ನಡ ಸುದ್ದಿ  /  ಕರ್ನಾಟಕ  /  35 ಸಿಮ್ ಕಾರ್ಡ್‌, ನಕಲಿ ಆಧಾರ್, ಡ್ರೈವಿಂಗ್ ಲೈಸೆನ್ಸ್ ಬಳಕೆ; ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿಗಳಿಂದ ಬಗೆದಷ್ಟು ಮಾಹಿತಿ

35 ಸಿಮ್ ಕಾರ್ಡ್‌, ನಕಲಿ ಆಧಾರ್, ಡ್ರೈವಿಂಗ್ ಲೈಸೆನ್ಸ್ ಬಳಕೆ; ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿಗಳಿಂದ ಬಗೆದಷ್ಟು ಮಾಹಿತಿ

ಸುಳಿವು ಸಿಗದಿರಲು ಆರೋಪಿಗಳು ಎಲ್ಲೂ ಕೂಡ ಡಿಜಿಟಲ್ ಪೇಮೆಂಟ್ ಮಾಡದೆ ನಗದು ವ್ಯವಹಾರ ಮಾತ್ರ ಮಾಡಿದ್ದಾರೆ. ಜೊತೆಗೆ ನಕಲಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಅನ್ನು ಪಡೆದಿದ್ದಾರೆ. ಎನ್‌ಐಎ ತನಿಖೆ ಮುಂದುವರಿಸಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಕೃತ್ಯದ ಸಂಚನ್ನು ಬಾಯ್ಬಿಟ್ಟಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಕೃತ್ಯದ ಸಂಚನ್ನು ಬಾಯ್ಬಿಟ್ಟಿದ್ದಾರೆ.

ಬೆಂಗಳೂರು: ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ (Bangalore Rameshwaram Cafe Blast Case) ಬಂಧಿತ ಆರೋಪಿಗಳಾದ ಮುಸಾವಿರ್ ಹುಸೇನ್ ಶಾಜಿಬ್ ಹಾಗೂ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ವಶದಲ್ಲಿರುವ ಈ ಆರೋಪಿಗಳು ಸ್ಫೋಟಕ್ಕೆ ಸಂಚು ರೂಪಿಸಿದ್ದರು, ಡಿಜಿಟಲ್ ಪೇಮೆಂಟ್ ಬಳಸದೆ ಇರುವುದು, ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಬಗ್ಗೆ ಬಾಯ್ಬಿಟ್ಟಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಆರೋಪಿಗಳು ಬರೋಬ್ಬರಿ 35 ಸಿಮ್ ಕಾರ್ಡ್‌ಗಳನ್ನು ಬಳಸಿದ್ದಾರೆ. ಇಷ್ಟೊಂದು ಕಾರ್ಡ್‌ಗಳು ಹೇಗೆ ಪಡೆದಿದ್ದಾರೆ ಅಂತ ನೋಡಿದಾಗ ಕರ್ನಾಟಕ, ಮಹಾರಾಷ್ಟ್ರ ಹಾಗೂ ತಮಿಳುನಾಡಿನವರೆಗೆ ಹಲವು ವಿಳಾಸಗಳನ್ನು ನೀಡಿ ನಕಲಿ ಆಧಾರ್ ಕಾರ್ಡ್ ಹಾಗೂ ಡ್ರೈವಿಂಗ್ ಲೈಸೆನ್ಸ್‌ಗಳನ್ನು ಪಡೆದು ಹೋಟೆಲ್‌ನಲ್ಲಿ ವಾಸ್ತವ್ಯ, ವಿವಿಧ ಕಡೆಗಳಲ್ಲಿ ತಿರುಗಾಡಿದ್ದಾರೆ. ಸುಳಿವು ಸಿಗದಿರಲಿ ಅಂತ ಎಲ್ಲೂ ಕೂಡ ಡಿಜಿಟಲ್ ಪೇಮೆಂಟ್‌ಗಳನ್ನು ಮಾಡದೆ ನಗದು ವ್ಯವಾಹರವನ್ನೇ ಮಾಡಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಐಇಡಿ ಅಳವಡಿಸಿದ್ದ ಆರೋಪದಲ್ಲಿ ಮುಸಾವಿರ್ ಹುಸೇನ್ ಶಾಜಿಬ್ ಎನ್‌ಐಎ ಶುಕ್ರವಾರ (ಏಪ್ರಿಲ್ 12) ಬಂಧಿಸಿತ್ತು. ಮಾರ್ಚ್ 1 ನಡೆದಿದ್ದ ಸ್ಫೋಟದ ಬಳಿಕ ಪ್ರಮುಕ ಆರೋಪಿ ಅದ್ಬುಲ್ ಮಥೀನ್ ತಾಹಾ ತಪ್ಪಿಸಿಕೊಂಡಿದ್ದ. ಈತನನ್ನು ಕೋಲ್ಕತ್ತಾದಿಂದ 180 ಕಿಲೋ ಮೀಟರ್ ದೂರದಲ್ಲಿರುವ ಪುರ್ಬಾ ಮೇದಿನಿಪುರದ ದಿಘಾದಲ್ಲಿ ಅರೆಸ್ಟ್ ಮಾಡಲಾಗಿತ್ತು.

ಪಶ್ಚಿಮ ಬಂಗಾಳದಲ್ಲಿ ಸೆರೆಸಿಕ್ಕ ಆರೋಪಿಗಳು 10 ದಿನ ಎನ್ಐಎ ವಶಕ್ಕೆ

ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಮುಸಾವಿರ್ ಹುಸೇನ್ ಶಾಜಿಬ್ ಹಾಗೂ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಅವರನ್ನು ಹತ್ತು ದಿನಗಳ ಕಾಲ ರಾಷ್ಟ್ರೀಯ ತನಿಖಾ ತಂಡದ (ಎನ್ಐಎ) ವಶಕ್ಕೆ ಒಪ್ಪಿಸಿ ಬೆಂಗಳೂರು ನಗರದ ಎನ್ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಇಬ್ಬರೂ ಆರೋಪಿಗಳನ್ನು ಕಾರ್ಯಾಚರಣೆ ನಡೆಸಿ ಏಪ್ರಿಲ್ 12 ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರದಲ್ಲಿ ಬಂಧಿಸಲಾಗಿತ್ತು. ಇವರಲ್ಲಿ ಮುಸಾವಿರ್ ಹುಸೇನ್ ಶಾಜಿಬ್ ಹೋಟೆಲ್‌ನಲ್ಲಿ ಬಾಂಬ್ ಇರಿಸಿದ್ದ ಎನ್ನುವುದಕ್ಕೆ ಬಲವಾದ ಸಾಕ್ಷ್ಯಗಳಿವೆ. ಎನ್ಐಎ ತನಿಖಾಧಿಕಾರಿಗಳು ಶನಿವಾರ (ಏಪ್ರಿಲ್ 13) ಬೆಳಗ್ಗೆ 11.30ಕ್ಕೆ ನಗರದ ಎನ್ ಜಿ ವಿ ಕಾಂಪ್ಲೆಕ್ಸ್‌ ನಲ್ಲಿರುವ ಎನ್ಐಎ ವಿಶೇಷ ನ್ಯಾಯಾಲಯದ ಉಸ್ತುವಾರಿ ನ್ಯಾಯಾಧೀಶ ಸಿ.ಬಿ.ಸಂತೋಷ್ ಅವರ ಗೃಹ ಕಚೇರಿಯಲ್ಲಿ ಹಾಜರು ಪಡಿಸಲಾಯಿತು.

ಎನ್ಐಎ ಪರವಾಗಿ ಹಾಜರಾಗಿ ವಾದ ಮಂಡಿಸಿದ ವಕೀಲ ಪಿ.ಪ್ರಸನ್ನಕುಮಾರ್ ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾ ಮಹಾನಗರಕ್ಕೆ ಹೊಂದಿಕೊಂಡಿರುವ ಪೂರ್ವ ಮೇದಿನಿಪುರ ಜಿಲ್ಲೆಯ ಹೋಟೆಲ್‌ವೊಂದರಲ್ಲಿ ಆರೋಪಿಗಳು ವಾಸ್ತವ್ಯ ಹೂಡಿದ್ದರು. ಇವರನ್ನು ಗುರುವಾರ (ಏಪ್ರಿಲ್ 11) ರಾತ್ರಿ ಅಲ್ಲಿಯೇ ಬಂಧಿಸಲಾಯಿತು ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ಆರೋಪಿಗಳ ವಿರುದ್ಧ ಗಂಭೀರ ಆರೋಪಗಳಿವೆ ಆದ್ದರಿಂದ ಇವರನ್ನು ಹೆಚ್ಚಿನ ವಿಚಾರಣೆಗಾಗಿ ಎನ್ಐಎ ವಶಕ್ಕೆ ಒಪ್ಪಿಸಲು ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿಕೊಂಡರು.

ಆರೋಪಿ ಬಂಧನ ನಡೆಸಿದ ಕೃತ್ಯ ಕುರಿತು ಎನ್ಐಎ ಪರ ವಕೀಲರು ಸುಮಾರು ಒಂದು ಗಂಟೆ ಕಾಲ ವಾದಿಸಿದರು. ಅಂತಿಮವಾಗಿ ನ್ಯಾಯಾಧೀಶರು ಇಬ್ಬರೂ ಆರೋಪಿಗಳನ್ನು 10 ದಿನಗಳ ಕಾಲ ಎನ್ಐಎ ವಶಕ್ಕೆ ಒಪ್ಪಿಸಿ ಆದೇಶಿಸಿದರು. ಆರೋಪಿಗಳ ಬಂಧನ ಕುರಿತು ಅವರ ಕುಟುಂಬದ ಸದಸ್ಯರಿಗೆ ಶುಕ್ರವಾರವೇ ಮಾಹಿತಿ ನೀಡಲಾಗಿತ್ತು. ಆದರೆ ನ್ಯಾಯಾಲಯದಲ್ಲಿ ಆರೋಪಿಗಳ ಕುಟುಂಬದ ಸದ್ಯರಾಗಲೀ ಅಥವಾ ಅವರನ್ನು ಪ್ರತಿನಿಧಿಸುವ ವಕೀಲರಾಗಲೀ ವಿಚಾರಣೆ ವೇಳೆ ಹಾಜರಾಗಿರಲಿಲ್ಲ ಎಂದು ತಿಳಿದು ಬಂದಿದೆ.

IPL_Entry_Point