ಬೆಂಗಳೂರು: ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಮೂವರು ಅಪ್ರಾಪ್ತರು ಸೇರಿ 9 ಆರೋಪಿಗಳ ಬಂಧನ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು: ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಮೂವರು ಅಪ್ರಾಪ್ತರು ಸೇರಿ 9 ಆರೋಪಿಗಳ ಬಂಧನ

ಬೆಂಗಳೂರು: ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಮೂವರು ಅಪ್ರಾಪ್ತರು ಸೇರಿ 9 ಆರೋಪಿಗಳ ಬಂಧನ

ಬೆಂಗಳೂರು ಅಪರಾಧ ಸುದ್ದಿ; ನಗರದ ವಿವಿಧೆಡೆ ಮೊಬೈಲ್ ಫೋನ್‌ ಕಳವು ಮಾಡುತ್ತಿದ್ದ ಮೂವರು ಅಪ್ರಾಪ್ತರು ಸೇರಿ 9 ಆರೋಪಿಗಳ ಬಂಧನವಾಗಿದೆ. ಅವರಿಂದ 23 ಲಕ್ಷ ರೂ. ಮೌಲ್ಯದ ಮೊಬೈಲ್, ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿಮಾಡಿದ್ದಾರೆ. (ವರದಿ- ಎಚ್. ಮಾರುತಿ, ಬೆಂಗಳೂರು)

ಬೆಂಗಳೂರು ಅಪರಾಧ ಸುದ್ದಿ; ಬೆಂಗಳೂರು: ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಮೂವರು ಅಪ್ರಾಪ್ತರು ಸೇರಿ 9 ಆರೋಪಿಗಳ ಬಂಧನವಾಗಿದೆ. (ಸಾಂಕೇತಿಕ ಚಿತ್ರ)
ಬೆಂಗಳೂರು ಅಪರಾಧ ಸುದ್ದಿ; ಬೆಂಗಳೂರು: ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಮೂವರು ಅಪ್ರಾಪ್ತರು ಸೇರಿ 9 ಆರೋಪಿಗಳ ಬಂಧನವಾಗಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಮೊಬೈಲ್ ಫೋನ್‌ ಗಳ ಕಳವು ಮಾಡುತ್ತಿದ್ದ ವಿವಿಧ ಪ್ರಕರಣಗಳಲ್ಲಿ ಮೂವರು ಅಪ್ರಾಪ್ತ ವಯಸ್ಸಿನ ಬಾಲಕರು ಸೇರಿದಂತೆ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಿಮ್ಹಾನ್ಸ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಬಿ.ಎಂ.ಟಿ.ಸಿ ಬಸ್ ಹತ್ತಿ ರಿಚ್‌ಮಂಡ್ ಸರ್ಕಲ್‌ನ ಹತ್ತಿರ ಇಳಿದಾಗ ಬ್ಯಾಗ್‌ನಲ್ಲಿದ್ದ ಮೊಬೈಲ್ ಫೋನ್‌ ಕಳುವಾಗಿದೆ ಎಂದು ಸಾರ್ವಜನಿರೊಬ್ಬರು ದೂರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾಗ ಸೋಮೇಶ್ವರ ನಗರ ಮುಖ್ಯ ರಸ್ತೆಯಲ್ಲಿ ಓರ್ವ ವ್ಯಕ್ತಿಯೊಬ್ಬ ಮೊಬೈಲ್ ಫೋನ್‌ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದದ್ದು ಕಂಡು ಬಂದಿರುತ್ತದೆ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಳ್ಳುತ್ತಾನೆ.

ತಾನು ಮತ್ತು ತನ್ನ ಮೂವರು ಸಹಚರರು ಬೆಂಗಳೂರಿನ ಜಯನಗರ, ಶಿವಾಜಿನಗರ, ಕಬ್ಬನ್‌ಪಾರ್ಕ್, ಲಾಲ್‌ಬಾಗ್ ಹಾಗೂ ಇನ್ನಿತರೆ ಜನಸಂದಣಿ ಇರುವ ಪ್ರದೇಶ ಮತ್ತು ಬಸ್‌ಗಳಲ್ಲಿ ಸಾರ್ವಜನಿಕರಂತೆ ವರ್ತಿಸಿ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡುತ್ತಿದ್ದುದ್ದಾಗಿ ವಿಚಾರಣೆಯ ವೇಳೆ ತಿಳಿಸಿದ್ದಾನೆ.

ನಂತರ ತಾವು ವಾಸವಿದ್ದ ಗೆಸ್ಟ್‌ಹೌಸ್‌ನಲ್ಲಿ ಕಳುವು ಮಾಡಿದ ಮೊಬೈಲ್‌ಗಳನ್ನು ಸಂಗ್ರಹಿಸಿರುವುದಾಗಿ ಮಾಹಿತಿ ನೀಡುತ್ತಾನೆ. ಆತನಿಂದ 19.50 ಲಕ್ಷ ರೂಪಾಯಿ ಬೆಲೆ ಬಾಳುವ 32 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಮೂವರು ಸಹಚರರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ರಾಜಾಜಿನಗರ ಇಂಡಸ್ಟ್ರಿಯಲ್ ಟೌನ್ ನಲ್ಲಿ ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ಅಂಗಡಿ ಕೆಲಸಕ್ಕೆ ನಡೆದುಕೊಂಡು ಹೋಗುವಾಗ 3 ದ್ವಿಚಕ್ರ ವಾಹನಗಳಲ್ಲಿ ಬಂದ 5 ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಹೊಡೆದು ಮೊಬೈಲ್ ಪೋನ್‌ನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ರಾಮ್ ಸುಂದರ್‌ ಎಂಬುವರು ದೂರು ನೀಡಿದ್ದರು. ಈ ಪ್ರಕರಣದ ಆರೋಪಿ ವೇಣು ಜೊತೆಗೆ ಮೂವರು ಅಪ್ರಾಪ್ತ ಬಾಲಕರು ಕಳ್ಳತನದಲ್ಲಿ ಭಾಗಿಯಾಗಿದ್ದರು. ಇವರು

ನೀಡಿದ ಮಾಹಿತಿ ಮೇರೆಗೆ ವಿವಿಧ ಭಾಗಗಳಲ್ಲಿ ಕಳ್ಳತನ ಮಾಡಿದ್ದ 90,000 ರೂ. ಬೆಲೆಯ 6 ಮೊಬೈಲ್ ಫೋನ್‌ಗಳು, 2 ಲಕ್ಷ ರೂಪಾಯಿ ಬೆಲೆ ಬಾಳುವ 5 ದ್ವಿಚಕ್ರ ವಾಹನಗಳು ಮತ್ತು ಒಂದು ತಲ್ವಾರ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಒಬ್ಬ ಆರೋಪಿಯ ಪತ್ತೆ ಕಾರ್ಯ ಮುಂದುವರೆದಿದೆ. ಮಾಗಡಿ ರಸ್ತೆ, ಬಸವೇಶ್ವರನಗರ, ಬ್ಯಾಡರಹಳ್ಳಿ ರಾಜಗೋಪಾಲನಗರ ಮತ್ತು ಹನುಮಂತನಗರ ಪೊಲೀಸ್ ಠಾಣಾ ಹನುಮಂತನಗರ ಪೊಲೀಸ್ ಠಾಣೆಗಳಲ್ಲಿ ಇವರು ಕಳ್ಳತನ ಮಾಡಿದ್ದರು.

ಯುವತಿಯ ಫೋಟೋ ಮಾರ್ಫ್‌ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದವರ ಸೆರೆ

ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಫ್‌ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರು ಆರೋಪಿಗಳನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಬಾಗಲೂರು ನಿವಾಸಿ. ಉಳಿದಿಬ್ಬರು ಬಾಲಕರಾಗಿದ್ದು, ಅವರನ್ನು ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಲಾಗಿದೆ. ಮೂವರ ಬಳಿ ಇದ್ದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂವರ ಪೈಕಿ ಒಬ್ಬಾತ ಕಾಲೇಜು ವಿದ್ಯಾರ್ಥಿಯಾದರೆ ಇನ್ನಿಬ್ಬರು ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು. ಇವರು ಕ್ರೇಝ್‌ಗಾಗಿ ಈ ಕೃತ್ಯ ಮಾಡುತ್ತಿರುವುದಾಗಿ ತನಿಖೆ ವೇಳೆ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಶಾಲಾ ಬಾಲಕಿಯೊಬ್ಬಳ ಫೋಟೋವನ್ನು ಇನ್‌ಸ್ಟಾಗ್ರಾಂನಿಂದ ಡೌನ್‌ಲೋಡ್ ಮಾಡಿ ಅಶ್ಲೀಲವಾಗಿ ಮಾರ್ಫ್ ಮಾಡಿ ಶೇರ್ ಮಾಡಿದ್ದರು. ಈ ಸಂಬಂಧ ದೂರು ದಾಖಲಾದ ಕಾರಣ, ತನಿಖೆ ನಡೆಸಿದ ಪೊಲೀಸರಿಗೆ ಈ ಬಾಲಕರ ಮತ್ತು ಯುವಕನ ಕೃತ್ಯ ಎಂಬುದು ಮನದಟ್ಟಾಗಿದೆ. ಹೀಗಾಗಿ ಅವರನ್ನು ಬಂಧಿಸಿದ್ದಾರೆ.

Whats_app_banner