ಬೆಂಗಳೂರು ಅಪರಾಧ ಸುದ್ದಿ; ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಅಮೀರ್ ಖಾನ್ ಬಂಧನ; ಆರೋಪಿ ವಿರುದ್ದ ಪಿಐಟಿ-ಎನ್‌ಡಿಪಿಎಸ್ ಕಾಯಿದೆ ದಾಖಲು
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು ಅಪರಾಧ ಸುದ್ದಿ; ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಅಮೀರ್ ಖಾನ್ ಬಂಧನ; ಆರೋಪಿ ವಿರುದ್ದ ಪಿಐಟಿ-ಎನ್‌ಡಿಪಿಎಸ್ ಕಾಯಿದೆ ದಾಖಲು

ಬೆಂಗಳೂರು ಅಪರಾಧ ಸುದ್ದಿ; ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಅಮೀರ್ ಖಾನ್ ಬಂಧನ; ಆರೋಪಿ ವಿರುದ್ದ ಪಿಐಟಿ-ಎನ್‌ಡಿಪಿಎಸ್ ಕಾಯಿದೆ ದಾಖಲು

ಬೆಂಗಳೂರು ಅಪರಾಧ ಸುದ್ದಿ: ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಅಮೀರ್ ಖಾನ್ ನನ್ನು ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ದ ಪಿಐಟಿ-ಎನ್‌ಡಿಪಿಎಸ್ ಕಾಯಿದೆ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ವರದಿ- ಎಚ್. ಮಾರುತಿ, ಬೆಂಗಳೂರು)

ಬೆಂಗಳೂರು ಅಪರಾಧ ಸುದ್ದಿ:  ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಅಮೀರ್ ಖಾನ್ ನನ್ನು ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ದ ಪಿಐಟಿ-ಎನ್‌ಡಿಪಿಎಸ್ ಕೇಸ್‌ ದಾಖಲಾಗಿದೆ.
ಬೆಂಗಳೂರು ಅಪರಾಧ ಸುದ್ದಿ: ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಅಮೀರ್ ಖಾನ್ ನನ್ನು ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ದ ಪಿಐಟಿ-ಎನ್‌ಡಿಪಿಎಸ್ ಕೇಸ್‌ ದಾಖಲಾಗಿದೆ.

ಬೆಂಗಳೂರು: ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ಡ್ರಗ್ಸ್‌ ಪೆಡ್ಲರ್‌ ಅಮೀರ್ ಖಾನ್ ನನ್ನು ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 35 ವರ್ಷದ ಈತ ರಿಚ್ಮಂಡ್ ಟೌನ್ ನಿವಾಸಿ. ಅಮೀರ್ ಖಾನ್ ವಿರುದ್ಧ ಮಾದಕ ವಸ್ತುಗಳ ಅಕ್ರಮ ಸಾಗಾಣೆ ತಡೆ ಕಾಯ್ದೆ (ಪಿಐಟಿ-ಎನ್‌ಡಿಪಿಎಸ್) ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಅಮೃತಹಳ್ಳಿ ಠಾಣೆ ಪೊಲೀಸರು ಹೇಳಿದ್ದಾರೆ.

ಆರೋಪಿಯು ಕಳೆದ ಮೂರು ವರ್ಷಗಳಿಂದ ಕೇರಳ ಮತ್ತು ಆಂಧ್ರಪ್ರದೇಶದಿಂದ ಗಾಂಜಾ ಮತ್ತು ಇತರೆ ಡ್ರಗ್ಸ್‌‌ಗಳನ್ನು ತಂದು ನಗರದಲ್ಲಿ ನಿರ್ದಿಷ್ಟ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ. ಈ ಹಿಂದೆಯೂ ಆರೋಪಿಯನ್ನು ಸಿಸಿಬಿ ಪೊಲೀಸರು ಮೂರು ಬಾರಿ ಮಾದಕ ವಸ್ತುಗಳ ಸಾಕ್ಷ್ಯ ಸಹಿತ ಬಂಧಿಸಿದ್ದರು.

ಈತನ ವಿರುದ್ಧ ಅಶೋಕನಗರ, ಪರಪ್ಪನ ಅಗ್ರಹಾರ, ಬೇಗೂರು, ಗೋವಿಂದಪುರ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನು ಪಡೆದು ಹೊರಗೆ ಬಂದ ಬಳಿಕವೂ ಅಮೀರ್ ಖಾನ್ ಮತ್ತೆ ಅದೇ ದಂಧೆಯಲ್ಲಿ ತೊಡಗುತ್ತಿದ್ದ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಹೇಳಿದರು.

ಇತ್ತೀಚೆಗೆ ಅಮೃತಹಳ್ಳಿ ಠಾಣೆ ಪೊಲೀಸರು ಆರೋಪಿ ಅಮೀರ್ ಖಾನ್‌ನನ್ನು ಬಂಧಿಸಿದ್ದರು. ಈ ವೇಳೆ ಆತ ಪದೇ ಪದೇ ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗುತ್ತಿರುವುದು ಪತ್ತೆಯಾಗಿತ್ತು. ಹೀಗಾಗಿ ಈತನ ವಿರುದ್ಧ ಪಿಐಟಿ– ಎನ್‌ಡಿಪಿಎಸ್ ಕಾಯ್ದೆ ಅಡಿ ಮತ್ತೆ ಬಂಧಿಸಲು ಅಗತ್ಯ ದಾಖಲೆಗಳೊಂದಿಗೆ ಪೊಲೀಸ್ ಕಮಿಷನರ್‌ಗೆ ಪ್ರಸ್ತಾಪ ಸಲ್ಲಿಸಲಾಗಿತ್ತು. ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಅಮೃತಹಳ್ಳಿ ಠಾಣೆ ಪೊಲೀಸರು ಫೆ.19ರಿಂದ ಅನ್ವಯವಾಗುವಂತೆ ಪಿಐಟಿ -ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರತಿಬಂಧಕ ಬಂಧನ ಜಾರಿಗೊಳಿಸಿದ್ದಾರೆ.

ಪದೇ ಪದೇ ಮಾದಕ ವಸ್ತುಗಳ ಮಾರಾಟ ದಂಧೆಯಲ್ಲಿ ತೊಡಗುವ ಡ್ರಗ್ಸ್‌ ಪೆಡ್ಲರ್‌ಗಳನ್ನು ನಿಯಂತ್ರಿಸಲು ಪೊಲೀಸರು ಪಿಐಟಿ-ಎನ್‌ಡಿಪಿಎಸ್ ಅಸ್ತ್ರ ಬಳಸುತ್ತಾರೆ. ಈ ಕಾಯಿದೆ ಅಡಿ ಬಂಧಿಸಿ ಜೈಲಿಗೆ ಕಳುಹಿಸಿದರೆ ಆರೋಪಿಗೆ ಕನಿಷ್ಠ 1 ವರ್ಷ ಜಾಮೀನು ಸಿಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರಿನ ವೈಟ್‌ಫೀಲ್ಡ್‌ ವಿಭಾಗದ ವಿವಿಧ ಬಡಾವಣೆಗಳಲ್ಲಿ ಮನೆ ಎದುರು ಹಾಗೂ ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಕಾರ್ಯಾಚರಣೆ ನಡೆಸಿದ ಮಾರತ್ತಹಳ್ಳಿ ಠಾಣೆ ಪೊಲೀಸರು, ಆಂಧ್ರಪ್ರದೇಶದ ಆನಂದ್(32) ಮತ್ತು ಸೇಠ್ ಮಿಲ್ ವಾಲಿ(35) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ರೂ. 35 ಲಕ್ಷ ಮೌಲ್ಯದ 40 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಬಂಧನದಿಂದ ಮಾರತ್ತಹಳ್ಳಿಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 3 ಮತ್ತು ಮಹದೇವಪುರ ಠಾಣೆಯಲ್ಲಿ ದಾಖಲಾಗಿದ್ದ 1 ಪ್ರಕರಣ ಪತ್ತೆಯಾಗಿದೆ.ಈ ಆರೋಪಿಗಳು ಕಳವು ಮಾಡಿದ ಬೈಕ್‌ಗಳನ್ನು ಕಡಿಮೆ ಮೊತ್ತಕ್ಕೆ ಮಾರಾಟ ಮಾಡಿ ಬಂದ ಹಣದಲ್ಲಿ ಮೋಜಿನ ಜೀವನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಬೈಕ್‌ ಕಳವು ಮಾಡಿದಾತನ ಬಂಧನ

ಮತ್ತೊಂದು ಪ್ರಕರಣದಲ್ಲಿ ಮನೆ ಮುಂದೆ ನಿಲುಗಡೆ ಮಾಡಿದ್ದ ಬೈಕ್ ಕಳವು ಮಾಡುತ್ತಿದ್ದ ಶರತ್ ಬಾಬು ಎಂಬ ಆರೋಪಿಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ ತಮಿಳುನಾಡು ಮೂಲದ ಆರೋಪಿ ಎಂದು ತಿಳಿದು ಬಂದಿದೆ.

ಈತನಿಂದ ರೂಪಾಯಿ 8 ಲಕ್ಷ ಮೌಲ್ಯದ 19 ಬೈಕ್‌ ಗಳನ್ನು ಜಪ್ತಿ ಮಾಡಲಾಗಿದೆ. ಈತನ ಬಂಧನದಿಂದ ಕಾಡುಗೋಡಿ ಪೊಲೀಸ್ ಠಾಣೆಯ 6, ವೈಟ್‌ಫೀಲ್ಡ್‌ ಮತ್ತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ತಲಾ 1 ಪ್ರಕರಣ ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

(ವರದಿ- ಎಚ್. ಮಾರುತಿ, ಬೆಂಗಳೂರು)

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner