ಕನ್ನಡ ಸುದ್ದಿ  /  ಕರ್ನಾಟಕ  /  ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಪ್ರಾಣಿ ಆರೈಕೆ ಮತ್ತು ನಿರ್ವಹಣೆ ಕುರಿತು 10 ತಿಂಗಳ ಡಿಪ್ಲೊಮಾ ಕೋರ್ಸ್

ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಪ್ರಾಣಿ ಆರೈಕೆ ಮತ್ತು ನಿರ್ವಹಣೆ ಕುರಿತು 10 ತಿಂಗಳ ಡಿಪ್ಲೊಮಾ ಕೋರ್ಸ್

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಪ್ರಾಣಿ ಆರೈಕೆ ಮತ್ತು ನಿರ್ವಹಣೆ ಕುರಿತು 10 ತಿಂಗಳ ಡಿಪ್ಲೊಮಾ ಕೋರ್ಸ್ ಶುರುಮಾಡುವ ಪ್ರಸ್ತಾವನೆಯನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಂಗೀಕರಿಸಿದ್ದಾರೆ. ಬೆಂಗಳೂರು ವಿವಿಯ ಮಾನ್ಯತೆ ಇದಕ್ಕೆ ಇರಲಿದೆ. ವಿವರ ಇಲ್ಲಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಪ್ರಾಣಿ ಆರೈಕೆ ಮತ್ತು ನಿರ್ವಹಣೆ ಕುರಿತು 10 ತಿಂಗಳ ಡಿಪ್ಲೊಮಾ ಕೋರ್ಸ್
ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಪ್ರಾಣಿ ಆರೈಕೆ ಮತ್ತು ನಿರ್ವಹಣೆ ಕುರಿತು 10 ತಿಂಗಳ ಡಿಪ್ಲೊಮಾ ಕೋರ್ಸ್

ಬೆಂಗಳೂರು: ವನ್ಯಜೀವಿ ಸಂರಕ್ಷಣೆಯಲ್ಲಿ ಹೆಚ್ಚುತ್ತಿರುವ ಜನರ ಆಸಕ್ತಿಯನ್ನು ಬಳಸಿಕೊಳ್ಳಲು ಅರಣ್ಯ, ಪರಿಸರ ಮತ್ತು ಪರಿಸರ ಇಲಾಖೆಯು ನಿರ್ಧರಿಸಿದೆ. ಹೀಗಾಗಿ, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (ಬಿಬಿಪಿ) ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆಯ ಕುರಿತಾದ ಡಿಪ್ಲೊಮಾ ಕೋರ್ಸ್ ನೀಡುವ ಪ್ರಸ್ತಾವನೆಯನ್ನು ಇಲಾಖೆಯು ಪರಿಶೀಲಿಸುತ್ತಿದೆ.

ಟ್ರೆಂಡಿಂಗ್​ ಸುದ್ದಿ

ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದವರು ಉದ್ಯೋಗಕ್ಕೆ ಅರ್ಹರಾಗುತ್ತಾರೆ ಎಂದು ಹೇಳಿದ ಖಂಡ್ರೆ, ಕೋರ್ಸ್ ಪೂರ್ಣಗೊಳಿಸಿದವರಿಗೆ ಉದ್ಯೋಗ ಸಿಗುವಂತೆ ಪಠ್ಯಕ್ರಮ ಮತ್ತು ಪ್ರಾಯೋಗಿಕ ಪಾಠಗಳನ್ನು ರೂಪಿಸಬೇಕು, ವಿವಿಧ ಅಂಶಗಳನ್ನು ಪರಿಶೀಲಿಸಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮುಂದಿನ ಸಭೆಯಲ್ಲಿ ವರದಿ ಸಲ್ಲಿಸುವಂತೆ ಹೇಳಿದರು.

10 ತಿಂಗಳ ಕೋರ್ಸ್‌ಗೆ ಬೆಂಗಳೂರು ವಿವಿ ಮಾನ್ಯತೆ

ಅನಿಮಲ್ ಕೇರ್ ಅಂಡ್ ಮ್ಯಾನೇಜ್‌ಮೆಂಟ್‌ನ 10 ತಿಂಗಳ ಕೋರ್ಸ್ ಅನ್ನು ಪ್ರಾರಂಭಿಸುವ ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಸ್ತಾವನೆಗೆ ಸಚಿವ ಈಶ್ವರ್ ಬಿ ಖಂಡ್ರೆ ಅವರು ತಾತ್ವಿಕ ಅನುಮೋದನೆ ನೀಡಿದರು. ಬಿಬಿಪಿ ಮತ್ತು ಬೆಂಗಳೂರು ಲೈಫ್ ಸೈನ್ಸಸ್ ಎಜುಕೇಶನ್ ಟ್ರಸ್ಟ್ ಜಂಟಿಯಾಗಿ ಈ ಕೋರ್ಸ್ ಅನ್ನು ಒದಗಿಸುತ್ತಿವೆ. ಇದಕ್ಕೆ ಬೆಂಗಳೂರು ವಿಶ್ವವಿದ್ಯಾಲಯ (ಬಿಯು)ದ ಮಾನ್ಯತೆಯೂ ಇದೆ.

ಪ್ರಾಣಿಗಳ ವೈಜ್ಞಾನಿಕ ಆರೈಕೆ ಮತ್ತು ನಿರ್ವಹಣೆಯಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಕೋರ್ಸ್ ಯೋಜಿಸಲಾಗಿದೆ. ಡಿಪ್ಲೊಮಾ ಹೊಂದಿರುವವರು ಪ್ರಾಣಿಸಂಗ್ರಹಾಲಯಗಳು ಮತ್ತು ಪ್ರಾಣಿಗಳ ಪುನರ್ವಸತಿ ಕೇಂದ್ರಗಳು ಅಥವಾ ಖಾಸಗಿ ಪ್ರಾಣಿಗಳ ಆರೈಕೆ ಸಂಸ್ಥೆಗಳಲ್ಲಿ ಉದ್ಯೋಗ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬನ್ನೇರಘಟ್ಟ ಉದ್ಯಾನಕ್ಕೆ ಹಲವು ಸೌಲಭ್ಯ; ಪ್ರಸ್ತಾವನೆಗಳಿಗೆ ಸಚಿವರ ಅನುಮೋದನೆ

ಬನ್ನೇರಘಟ್ಟದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜತೆಗೆ ಈ ತಿಂಗಳ ಕೊನೆಯೊಳಗೆ ಚಿರತೆ ಸಫಾರಿ ಆರಂಭಿಸಬೇಕು ಎಂದು ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು, ಇದರಿಂದ ದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗಲಿದೆ. ಇದರಂತೆ, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸು ಕ್ರಮ ಕೈಗೊಳ್ಳಲು ಸಮ್ಮತಿ ಸಿಕ್ಕಿದೆ.

ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆಯನ್ನೂ ಸಚಿವರು ನೀಡಿದ್ದಾರೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ ನೀಡುವುದಕ್ಕೂ ಸಚಿವರು ಅನುಮತಿಯನ್ನು ನೀಡಿದರು.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024