ಬೆಂಗಳೂರಿಗರೆ ನಿಮ್ಮ ಖಾಲಿ ನಿವೇಶನ ಸ್ವಚ್ಛವಾಗಿದೆಯಾ, ಇಲ್ಲ ಅಂದ್ರೆ ಬಿಬಿಎಂಪಿಗೆ ದಂಡ ಕಟ್ಟೋದಕ್ಕೆ ರೆಡಿಯಾಗಿ-bengaluru news bbmp alert notice for bengalureans is your vacant plots clean or not get ready to pay fine to bbmp ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರಿಗರೆ ನಿಮ್ಮ ಖಾಲಿ ನಿವೇಶನ ಸ್ವಚ್ಛವಾಗಿದೆಯಾ, ಇಲ್ಲ ಅಂದ್ರೆ ಬಿಬಿಎಂಪಿಗೆ ದಂಡ ಕಟ್ಟೋದಕ್ಕೆ ರೆಡಿಯಾಗಿ

ಬೆಂಗಳೂರಿಗರೆ ನಿಮ್ಮ ಖಾಲಿ ನಿವೇಶನ ಸ್ವಚ್ಛವಾಗಿದೆಯಾ, ಇಲ್ಲ ಅಂದ್ರೆ ಬಿಬಿಎಂಪಿಗೆ ದಂಡ ಕಟ್ಟೋದಕ್ಕೆ ರೆಡಿಯಾಗಿ

ಬೆಂಗಳೂರಿಗರಿಗೆ ಒಂದು ಅಲರ್ಟ್ ಮೆಸೇಜ್‌ ಇದೆ. ನಿಮ್ಮ ಖಾಲಿ ನಿವೇಶನ ಸ್ವಚ್ಛವಾಗಿದೆಯಾ, ಇಲ್ಲ ಅಂದ್ರೆ ಬಿಬಿಎಂಪಿಗೆ ದಂಡ ಕಟ್ಟೋದಕ್ಕೆ ರೆಡಿಯಾಗಿ ಎಂಬ ಸಂದೇಶ ಮುಖ್ಯ ಆಯುಕ್ತ ತುಷಾರಗಿರಿನಾಥ್ ಅವರ ಕಡೆಯಿಂದ ರವಾನೆಯಾಗಿದೆ. ಅವರು ಇಂದು ಅಧಿಕಾರಿಗಳ ಸಭೆ ನಡೆಸಿ ಕೆಲವು ಮುಖ್ಯ ಸೂಚನೆಗಳನ್ನು ನೀಡಿದ್ದು, ಅದರ ವಿವರ ಇಲ್ಲಿದೆ.

ಬೆಂಗಳೂರಿಗರೆ ನಿಮ್ಮ ಖಾಲಿ ನಿವೇಶನ ಸ್ವಚ್ಛವಾಗಿದೆಯಾ, ಇಲ್ಲ ಅಂದ್ರೆ ಬಿಬಿಎಂಪಿಗೆ ದಂಡ ಕಟ್ಟೋದಕ್ಕೆ ರೆಡಿಯಾಗಿ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರಗಿರಿನಾಥ್ ಅವರು ಮಹತ್ವದ ಆದೇಶ ನೀಡಿದ್ದಾರೆ.
ಬೆಂಗಳೂರಿಗರೆ ನಿಮ್ಮ ಖಾಲಿ ನಿವೇಶನ ಸ್ವಚ್ಛವಾಗಿದೆಯಾ, ಇಲ್ಲ ಅಂದ್ರೆ ಬಿಬಿಎಂಪಿಗೆ ದಂಡ ಕಟ್ಟೋದಕ್ಕೆ ರೆಡಿಯಾಗಿ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರಗಿರಿನಾಥ್ ಅವರು ಮಹತ್ವದ ಆದೇಶ ನೀಡಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸ್ಥಳೀಯಾಡಳಿತ ಸಂಸ್ಥೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬಿಬಿಪಿಎಂಪಿಯ ಮುಖ್ಯ ಆಯುಕ್ತ ತುಷಾರಗಿರಿ ನಾಥ್ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟೀಸ್ ನೀಡಿ ದಂಡ ವಿಧಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದೂ ಅಲ್ಲದೆ, ಆಸ್ತಿ ತೆರಿಗೆ ಪಾವತಿಯನ್ನೂ ಪರಿಶೀಲಿಸುವಂತೆ ಸೂಚಿಸಿದ್ದಾರೆ. ಹಾಗಾಗಿ ಬೆಂಗಳೂರಿಗರಿಗೆ ಒಂದು ಅಲರ್ಟ್ ಮೆಸೇಜ್ ಇದು.

ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಸೋಮವಾರ (ಆಗಸ್ಟ್ 5) ನಡೆದ ಸಭೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಪಟ್ಟಿ ಮಾಡಬೇಕು. ಅದರಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿ ಸ್ವಚ್ಛತೆ ಮಾಡಿ ದಂಡ ವಿಧಿಸುವುದರ ಜೊತೆಗೆ ಮತ್ತೆ ಈ ರೀತಿ ಮರುಕಳಿಸದಂತೆ ಎಚ್ಚರಿಕೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರಿನಲ್ಲಿ ಖಾಲಿ ನಿವೇಶನ/ಪ್ರದೇಶಗಳು ಆಸ್ತಿ ತೆರಿಗೆ ವ್ಯಾಪ್ತಿಗೆ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶಿಲಿಸಿ, ಆಸ್ತಿ ತೆರಿಗೆ ವ್ಯಾಪ್ತಿಗೆ ಬರದಿದ್ದಲ್ಲಿ ಕೂಡಲೆ ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅವರಿಂದ ಆಸ್ತಿ ತೆರಿಗೆಯನ್ನೂ ವಸೂಲಿ ಮಾಡಬೇಕು ಎಂದು ಬಿಬಿಪಿಎಂಪಿಯ ಮುಖ್ಯ ಆಯುಕ್ತ ತುಷಾರಗಿರಿ ನಾಥ್ ಸೂಚಿಸಿದರು.

ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ಕಾನೂನು ಕ್ರಮ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಆಯಾ ವಲಯ ವ್ಯಾಪ್ತಿಯಲ್ಲಿರುವ ಮುದ್ರಣಾಲಯಗಳಿಗೆ ನೋಟೀಸ್ ನೀಡಿ ಯಾವುದೇ ಅನಧಿಕೃತ ಜಾಹೀರಾತು ಹಾಗೂ ಪರಿಸರ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಉಲ್ಲಂಘಣೆ ಮಾಡುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತುಗಳು ಅಳವಡಿಸದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಬಿಬಿಪಿಎಂಪಿಯ ಮುಖ್ಯ ಆಯುಕ್ತ ತುಷಾರಗಿರಿ ನಾಥ್ ಸೂಚಿಸಿದರು.

ವೈಟ್ ಟಾಪಿಂಗ್ ಕಾಮಗಾರಿ: ನಗರದಲ್ಲಿ ಹೊಸದಾಗಿ ಕೈಗೆತ್ತಿಕೊಳ್ಳುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಸಂಚಾರಿ ಪೊಲೀಸ್ ಅಧಿಕಾರಿಗಳ ಸಹಯೋಗದೊಂದಿಗೆ ಕಾಮಗಾರಿಗಳ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಬಿಬಿಪಿಎಂಪಿಯ ಮುಖ್ಯ ಆಯುಕ್ತ ತುಷಾರಗಿರಿ ನಾಥ್ ಅಧಿಕಾರಿಗಳಿಗೆ ತಿಳಿಸಿದರು.

ಬೀದಿ ದೀಪಗಳ ನಿರ್ವಹಣೆ ಸರಿಯಾಗಿರಲಿ: ಬೆಂಗಳೂರು ನಗರದಲ್ಲಿ ಬೀದಿ ದೀಪಗಳು ಸರಿಯಾಗಿ ನಿರ್ವಹಣೆ ಮಾಡಬೇಕು. ವಿದ್ಯುತ್ ವಿಭಾಗದಲ್ಲಿ ಕಾರ್ಯನಿರ್ವಹಿಸುವವರಿಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಹಾಗೂ ಸಂಜೆ 5 ರಿಂದ ರಾತ್ರಿ 8.30 ಗಂಟೆಯವರೆಗೆ ಕಾರ್ಯನಿರ್ವಹಿಸಬೇಕಿದೆ. ಈ ಸಂಬಂಧ, ನಾಗರಿಕರು ‘ಸಹಾಯ’ದಲ್ಲಿ ನೀಡುವ ದೂರುಗಳನ್ನು ಕೂಡಲೆ ಸ್ಪಂದಿಸಿ ಬಗೆಹರಿಸಬೇಕು. ಬೀದಿ ದೀಪಗಳಿಲ್ಲದಿರುವ ಕಡೆ ಕೂಡಲೆ ಬೀದಿ ದೀಪಗಳನ್ನು ಅಳವಡಿಸಬೇಕೆಂದು ಬಿಬಿಪಿಎಂಪಿಯ ಮುಖ್ಯ ಆಯುಕ್ತ ತುಷಾರಗಿರಿ ನಾಥ್ಅ ಧಿಕಾರಿಗಳಿಗೆ ಸೂಚಿಸಿದದರು.

ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ಬೇಡ

ಪಾಲಿಕೆ ವ್ಯಾಪ್ತಿಯಲ್ಲಿ ಸರಾಸರಿ 160 ರಿಂದ 170 ಪ್ರಕರಣಗಳು ಕಂಡುಬರುತ್ತಿದೆ. ಡೆಂಘೀ ಕುರಿತು ಪರೀಕ್ಷಾ ಪ್ರಮಾಣವನ್ನು ಹೆಚ್ಛಳ ಮಾಡಲಾಗಿದೆ. 600 ಫಾಗಿಂಗ್ ಯಂತ್ರ ಹಾಗೂ 618 ಸ್ಪ್ರೇಯರ್ ಗಳ ಮೂಲಕ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲಾಗುತ್ತಿದೆ ಎಂದು ಬಿಬಿಪಿಎಂಪಿಯ ಮುಖ್ಯ ಆಯುಕ್ತ ತುಷಾರಗಿರಿ ನಾಥ್ ತಿಳಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ರಮೇಶ್, ಶಿವಾನಂದ್ ಕಪಾಶಿ, ಕರೀಗೌಡ, ರಮ್ಯಾ, ವಿನೋತ್ ಪ್ರಿಯಾ, ಪ್ರೀತಿ ಗೆಹ್ಲೋಟ್, ಪ್ರಧಾನ ಅಭಿಯಂತರರು, ವಲಯ ಮುಖ್ಯ ಅಭಿಯಂತರರು ಸೇರಿ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.