ಕನ್ನಡ ಸುದ್ದಿ  /  ಕರ್ನಾಟಕ  /  ಮುಂಗಾರು ಆರಂಭ ಹಿನ್ನೆಲೆ; ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಟಾಸ್ಕ್ ಫೋರ್ಸ್ ರಚನೆ, ಸುಧಾರಿಸಲಿವೆಯೇ ಬೆಂಗಳೂರಿನ ರಸ್ತೆಗಳು

ಮುಂಗಾರು ಆರಂಭ ಹಿನ್ನೆಲೆ; ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಟಾಸ್ಕ್ ಫೋರ್ಸ್ ರಚನೆ, ಸುಧಾರಿಸಲಿವೆಯೇ ಬೆಂಗಳೂರಿನ ರಸ್ತೆಗಳು

ಮುಂಗಾರು ಆರಂಭ ಹಿನ್ನೆಲೆ ಕಾರಣ ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಟಾಸ್ಕ್ ಫೋರ್ಸ್ ಸಮಿತಿ ರಚನೆಯಾಗಿವೆ. ಈ ಪ್ರಯತ್ನದ ಮೂಲಕವಾದರೂ ಬೆಂಗಳೂರಿನ ರಸ್ತೆಗಳು ಸುಧಾರಿಸಲಿವೆಯೇ ಎಂಬುದು ವಾಹನ ಸವಾರರ ಕುತೂಹಲ. (ವರದಿ- ಎಚ್. ಮಾರುತಿ, ಬೆಂಗಳೂರು)

ಮುಂಗಾರು ಆರಂಭ ಹಿನ್ನೆಲೆ; ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಟಾಸ್ಕ್ ಫೋರ್ಸ್ ರಚನೆಯಾಗಿದೆ. (ಸಾಂಕೇತಿಕ ಚಿತ್ರ)
ಮುಂಗಾರು ಆರಂಭ ಹಿನ್ನೆಲೆ; ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಟಾಸ್ಕ್ ಫೋರ್ಸ್ ರಚನೆಯಾಗಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ವಲಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಲಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಿ ಆದೇಶಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12,878 ಕಿ.ಮೀ ರಸ್ತೆ ಜಾಲವಿದ್ದು, ಈ ರಸ್ತೆಗಳ ಪೈಕಿ 13,44.84 ಕಿ.ಮೀ ಉದ್ದದ ರಸ್ತೆಗಳನ್ನು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳೆಂದು ಪರಿಗಣಿಸಲಾಗಿದೆ. ಈ ರಸ್ತೆಗಳನ್ನು ರಸ್ತೆ ಮೂಲಭೂತ ಸೌಕರ್ಯ ಶಾಖೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಉಳಿದ 11,533.16 ಕಿ.ಮೀ ರಸ್ತೆಗಳನ್ನು ವಲಯ ಮಟ್ಟದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ.

ರಸ್ತೆ ಗುಂಡಿ ಮುಚ್ಚುವ ಕಾರ್ಯದ ಉಸ್ತುವಾರಿಗೆ ಟಾಸ್ಕ್‌ಫೋರ್ಸ್‌

ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಮತ್ತು ನಿಗದಿತ ಅವಧಿಯಲ್ಲಿ ನಿರ್ವಹಣೆ ಮಾಡಲು ವಲಯ ಮಟ್ಟದಲ್ಲಿ ವಲಯವಾರು ಟಾಸ್ಕ್ ಫೋರ್ಸ್ ರಚನೆ ಉತ್ತಮ ಮಾರ್ಗ ಎಂದು ಪರಿಗಣಿಸಿ ಈ ಟಾಸ್ಕ್ ಫೋರ್ಸ್‌ ಅನ್ನು ವಲಯ ಮಟ್ಟದ ವಲಯ ಆಯುಕ್ತರರ ನೇತೃತ್ವದಲ್ಲಿ ರಚಿಸಲಾಗಿದೆ. ಬಿಬಿಎಂಪಿ ತನ್ನ ವ್ಯಾಪ್ತಿಯ ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂಬ ಸಾರ್ವಜನಿಕ ಅಭಿಪ್ರಾಯ ಕೇಳಿ ಬಂದ ಹಿನ್ನಲೆಯಲ್ಲಿ ಟಾಸ್ಕ್ ಫೋರ್ಸ್‌ ಗಳನ್ನು ರಚಿಸಲಾಗಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ಲಭ್ಯವಾಗುವ ಅನುದಾನದ ಅನುಮೋದನೆ ಮತ್ತು ರಸ್ತೆ ಗುಂಡಿಗಳನ್ನು ಮುಚ್ಚಲು ಟೆಂಡರ್ ಆಹ್ವಾನಿಸುವ ಅಧಿಕಾರವನ್ನು ನೀಡಲು ನಿರ್ಧರಿಸಲಾಗಿದೆ. ಈ ಸಮಿತಿಗಳು ರಸ್ತೆ ಗುಂಡಿಗಳನ್ನು ಸ್ವಯಂ ಗುರುತಿಸಬೇಕು, ಸಂಚಾರಿ ಪೊಲೀಸರು ಮತ್ತು ಸಾರ್ವಜನಿಕರು ನೀಡುವ ದೂರುಗಳನ್ನು ಆಧರಿಸಿ ಗುಂಡಿಗಳನ್ನು ಮುಚ್ಚಬೇಕಾಗುತ್ತದೆ. ಇದು ಒಂದು ರೀತಿಯಲ್ಲಿ ಅಧಿಕಾರ ವಿಕೇಂದ್ರೀಕರಣ ಮಾದರಿಯಾಗಿದ್ದು, ಮಳೆಗಾಲದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ತುರ್ತಾಗಿ ಮತ್ತು ವಲಯ ಮಟ್ಟದಲ್ಲೇ ನಿರ್ಧಾರ ತೆಗೆದುಕೊಳ್ಳಲು ಅವಕಾಶ ಕಲ್ಪಿಸಿರುವುದು ಉತ್ತಮ ನಿರ್ಧಾರ ಎಂದು ಹೇಳಬಹುದು. ಆದರೆ ತಳಮಟ್ಟದಲ್ಲಿ ಗುಂಡಿಗಳನ್ನು ಮುಚ್ಚಲು ಎಷ್ಟರ ಮಟ್ಟಿಗೆ ಈ ಸಮಿತಿಗಳು ಕೆಲಸ ಮಾಡಲಿವೆ ಎಂದು ಕಾದು ನೋಡಬೇಕಿದೆ.

ಟಾಸ್ಕ್‌ಫೋರ್ಸ್‌ನಲ್ಲಿ ಯಾರಿದ್ದಾರೆ

ವಲಯ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗೆ ವಲಯ ಆಯುಕ್ತರು ಅಧ್ಯಕ್ಷರಾಗಿರುತ್ತಾರೆ. ವಲಯ ಜಂಟಿ ಆಯುಕ್ತರು, ವಲಯ ಮುಖ್ಯ ಅಭಿಯಂತರರು, ವಲಯ ಸಹಾಯಕ ಸಂಚಾರ ಪೊಲೀಸ್ ಆಯುಕ್ತರು, ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರು ಮತ್ತು ವಲಯ ವ್ಯಾಪ್ತಿಗೆ ಒಳಪಡುವ ಸಂಬಂಧಪಟ್ಟ ವಿಭಾಗದ ಕಾರ್ಯಪಾಲಕ ಅಭಿಯಂತರರು ಸದಸ್ಯರಾಗಿರುತ್ತಾರೆ. ವಲಯ ಆಯುಕ್ತರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಉಪ ನಿಯಂತ್ರಕರು(ಹಣಕಾಸು) ಸದಸ್ಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ.

ಬೆಂಗಳೂರಿನ ಎಂಟೂ ವಲಯಗಳ ವ್ಯಾಪ್ತಿಯಲ್ಲಿ ವಲಯ ಆಯುಕ್ತರನ್ನು ಒಳಗೊಂಡ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ.

(ವರದಿ- ಎಚ್. ಮಾರುತಿ, ಬೆಂಗಳೂರು)

ಟಿ20 ವರ್ಲ್ಡ್‌ಕಪ್ 2024