BESCOM Updates; ಬೆಂಗಳೂರಲ್ಲಿ ಮಂಗಳವಾರ ಪವರ್ ಕಟ್‌, ನಿಮ್ಮ ಏರಿಯಾದಲ್ಲೂ ಕರೆಂಟ್ ಇದೆಯೋ ಇಲ್ವೋ ಅಂತ ಚೆಕ್ ಮಾಡಿ-bengaluru news bescom scheduled interruptions as on august 13 check area details uks ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Bescom Updates; ಬೆಂಗಳೂರಲ್ಲಿ ಮಂಗಳವಾರ ಪವರ್ ಕಟ್‌, ನಿಮ್ಮ ಏರಿಯಾದಲ್ಲೂ ಕರೆಂಟ್ ಇದೆಯೋ ಇಲ್ವೋ ಅಂತ ಚೆಕ್ ಮಾಡಿ

BESCOM Updates; ಬೆಂಗಳೂರಲ್ಲಿ ಮಂಗಳವಾರ ಪವರ್ ಕಟ್‌, ನಿಮ್ಮ ಏರಿಯಾದಲ್ಲೂ ಕರೆಂಟ್ ಇದೆಯೋ ಇಲ್ವೋ ಅಂತ ಚೆಕ್ ಮಾಡಿ

Bengaluru Power Cut; ಬೆಸ್ಕಾಂ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಕರೆಂಟ್ ಇರಲ್ಲ. ಹೌದು, ಬೆಂಗಳೂರಲ್ಲಿ ಮಂಗಳವಾರ ಪವರ್ ಕಟ್‌ ಇರಲಿದೆ. ಹಾಗಾಗಿ, ನಿಮ್ಮ ಏರಿಯಾದಲ್ಲೂ ಕರೆಂಟ್ ಇದೆಯೋ ಇಲ್ವೋ ಅಂತ ಚೆಕ್ ಮಾಡಿ. ಇಲ್ಲಿದೆ ಆ ವಿವರ.

BESCOM Updates; ಬೆಂಗಳೂರಲ್ಲಿ ಮಂಗಳವಾರ ಪವರ್ ಕಟ್‌, ನಿಮ್ಮ ಏರಿಯಾದಲ್ಲೂ ಕರೆಂಟ್ ಇದೆಯೋ ಇಲ್ವೋ ಅಂತ ಚೆಕ್ ಮಾಡಿ
BESCOM Updates; ಬೆಂಗಳೂರಲ್ಲಿ ಮಂಗಳವಾರ ಪವರ್ ಕಟ್‌, ನಿಮ್ಮ ಏರಿಯಾದಲ್ಲೂ ಕರೆಂಟ್ ಇದೆಯೋ ಇಲ್ವೋ ಅಂತ ಚೆಕ್ ಮಾಡಿ

ಬೆಂಗಳೂರು: ರಾಜ್ಯ ರಾಜಧಾನಿಯ ಜನರನ್ನು ನಾಳೆ (ಆಗಸ್ಟ್ 13) ಮಳೆಯೊಂದಿಗೆ ಇನ್ನೊಂದು ಸಮಸ್ಯೆಯೂ ಕಾಡಲಿದೆ. ಹೌದು ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ತನಕ ಬೆಂಗಳೂರು ಮಹಾನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರಲ್ಲ.

ಬೆಸ್ಕಾಂ ಈ ವಿಚಾರ ಪ್ರಕಟಿಸಿದ್ದು, ಮಂಗಳವಾರ (ಆಗಸ್ಟ್ 13) ಬಾಣಸವಾಡಿಯ 66/11 ಕೆವಿ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸ ಇರುವ ಕಾರಣ ಅಲ್ಲಿಂದ ವಿದ್ಯುತ್ ಪೂರೈಕೆಯಾಗುವಂತಹ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ತನಕ ಈ ರೀತಿ ಅಡಚಣೆ ಉಂಟಾಗಲಿದೆ ಎಂದು ತಿಳಿಸಿದೆ.

ಯಾವ ಏರಿಯಾಗಳಲ್ಲಿ ಪವರ್‌ ಕಟ್‌

ಬೆಸ್ಕಾಂ ನೀಡಿರುವ ಮಾಹಿತಿ ಪ್ರಕಾರ, ಕಲ್ಯಾಣನಗರ, ಬಿ.ಡಬ್ಲೂ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲನಿ, ಆಶೀರ್ವಾದ ಕಾಲನಿ, ಜ್ಯೋತಿನಗರ, ಅಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇ ಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲನಿ, ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಪ್ರದೇಶಗಳಲ್ಲಿ ನಾಳೆ ಪವರ್‌ಕಟ್‌ ಇರಲಿದೆ.

ಅದೇ ರೀತಿ, ರಿಚಸ್‌ಗಾರ್ಡನ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇ ಔಟ್, ಸಮದ್ ಲೇಔಟ್, ಯಾಸಿನ್‌ ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯ ರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇ ಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇ ಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನ ಪಾಳ್ಯ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.

ಅದೇ ರೀತಿ, ಬೆಂಗಳೂರು ನಗರ ವ್ಯಾಪ್ತಿಯ ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇ ಔಟ್ ಫ್ಲವರ್‌ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇ ಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯ ಎನ್‌ಕ್ಲೇವ್, ಪ್ರಕೃತಿ ಲೇ ಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಎನ್.ಆರ್.ಐ ಲೇಔಟ್‌ಗಳಲ್ಲಿ ಮಂಗಳವಾರ ಬೆಳಗ್ಗೆ 10 ರಿಂದ ಸಂಜೆ 4ರ ತನಕ ವಿದ್ಯುತ್ ವ್ಯತ್ಯಯ ಆಗಲಿದೆ.

ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ಮಲ್ಲಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ವಾಟರ್‌ ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಎಂದು ವರದಿ ತಿಳಿಸಿದೆ.