ಕನ್ನಡ ಸುದ್ದಿ  /  ಕರ್ನಾಟಕ  /  ಬಿಜೆಪಿ ಮಾನಹಾನಿ ಕೇಸ್; ಬೆಂಗಳೂರು ವಿಶೇಷ ಕೋರ್ಟ್‌ಗೆ ಹಾಜರಾಗಲಿದ್ದಾರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಬಿಜೆಪಿ ಮಾನಹಾನಿ ಕೇಸ್; ಬೆಂಗಳೂರು ವಿಶೇಷ ಕೋರ್ಟ್‌ಗೆ ಹಾಜರಾಗಲಿದ್ದಾರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಬಿಜೆಪಿ ಮಾನಹಾನಿ ಕೇಸ್ ವಿಚಾರಣೆಗೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಜೂನ್ 7) ಬೆಂಗಳೂರು ವಿಶೇಷ ಕೋರ್ಟ್‌ಗೆ ಹಾಜರಾಗಲಿದ್ದಾರೆ. 2023ರಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತೆ ಸುಳ್ಳು ಪ್ರಚಾರ ಮಾಡಿದ್ದಕ್ಕಾಗಿ ಬಿಜೆಪಿ ಕರ್ನಾಟಕ ಘಟಕ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಸೇರಿ ರಾಜ್ಯ ಮುಖಂಡರ ವಿರುದ್ಧ ದಾವೆ ಹೂಡಿದೆ.

ಬಿಜೆಪಿ ಮಾನಹಾನಿ ಕೇಸ್; ಬೆಂಗಳೂರು ವಿಶೇಷ ಕೋರ್ಟ್‌ಗೆ ಹಾಜರಾಗಲಿದ್ದಾರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ. ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡರು.
ಬಿಜೆಪಿ ಮಾನಹಾನಿ ಕೇಸ್; ಬೆಂಗಳೂರು ವಿಶೇಷ ಕೋರ್ಟ್‌ಗೆ ಹಾಜರಾಗಲಿದ್ದಾರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ. ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡರು.

ನವದೆಹಲಿ/ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರಾಗಲಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿ ಶುಕ್ರವಾರ ಮುಂಜಾನೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅಲ್ಲಿಂದ ಬೆಂಗಳೂರಿಗೆ ವಿಮಾನದ ಮೂಲಕ ಪ್ರಯಾಣಿಸಿದರು. ಸದ್ಯ ಬೆಂಗಳೂರಿಗೆ ತಲುಪಿದ ಅವರನ್ನು ಸ್ಥಳೀಯ ಕಾಂಗ್ರೆಸ್ ನಾಯಕರು ಬರಮಾಡಿಕೊಂಡರು.

ಬೆಂಗಳೂರು ವಿಮಾ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

ದೆಹಲಿ ವಿಮಾನ ನಿಲ್ಧಾಣದಿಂದ ಹೊರಟು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು.

ರಾಹುಲ್ ಗಾಂಧಿಗೆ ಸಮನ್ಸ್, ಏನಿದು ಮಾನಹಾನಿ ಪ್ರಕರಣ

ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಮುಂಚಿತವಾಗಿ ಕಾಂಗ್ರೆಸ್ ಪಕ್ಷ ಸ್ಥಳೀಯ ಪತ್ರಿಕೆಗಳಲ್ಲ ನೀಡಿದ ಜಾಹೀರಾತು (ಪೇಸಿಎಂ ಮತ್ತು 40% ಕಮಿಷನ್‌) ಮತ್ತು ಕಾಂಗ್ರೆಸ್ ಪಕ್ಷ ನಡೆಸಿದ ಸುಳ್ಳು ಪ್ರಚಾರದಿಂದ ಬಿಜೆಪಿಯ ವರ್ಚಸ್ಸಿಗೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ದಾವೆ ಹೂಡಿದೆ. ಈ ದಾವೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಈ ಪ್ರಕರಣದಲ್ಲಿ, ಜೂನ್ 1 ರಂದು ನ್ಯಾಯಾಲಯಕ್ಕೆ ಹಾಜರಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗೆ ನ್ಯಾಯಾಲಯ ಜಾಮೀನು ನೀಡಿತ್ತು.

"ನ್ಯಾಯಾಲಯದ ಸೂಚನೆಯಂತೆ ನಾನು ಕಾನೂನು ಪೋಷಕರಾಗಿ ನ್ಯಾಯಾಧೀಶರ ಮುಂದೆ ಹಾಜರಾದೆ. ನನಗೆ ಜಾಮೀನು ಸಿಕ್ಕಿತು. ನನ್ನ, ಕೆಪಿಸಿಸಿ ಅಧ್ಯಕ್ಷ ಹಾಗೂ ರಾಹುಲ್ ಗಾಂಧಿ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿ ಕೂಡ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಎಂದು ಜಾಮೀನು ಪಡೆದ ನಂತರ ಸಿದ್ದರಾಮಯ್ಯ ಎಎನ್ಐಗೆ ತಿಳಿಸಿದ್ದರು.

ಇದು ನನ್ನ ಮೇಲೆ, ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದಾಖಲಿಸಿರುವ ಸುಳ್ಳು ಪ್ರಕರಣ ಎಂದು ಡಿ.ಕೆ.ಶಿವಕುಮಾರ್ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಮೇ 2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ ಪಕ್ಷವು 224 ಸದಸ್ಯರ ಕರ್ನಾಟಕ ವಿಧಾನಸಭೆಗೆ 135 ಸ್ಥಾನಗಳನ್ನು ಗಳಿಸಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿ ಪ್ರಚಂಡ ವಿಜಯವನ್ನು ದಾಖಲಿಸಿತು. ಬಿಜೆಪಿ 66 ಸ್ಥಾನಗಳನ್ನು ಗೆದ್ದರೆ, ಜೆಡಿಎಸ್ 19 ಸ್ಥಾನಗಳನ್ನು ಗಳಿಸಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024