Namma Metro: ಬೈಯ್ಯಪ್ಪನಹಳ್ಳಿ-ಕೆಆರ್‌ ಪುರಂ ಮೆಟ್ರೋ ಮಾರ್ಗ ಸೆಪ್ಟೆಂಬರ್‌ನಲ್ಲಿ ಉದ್ಘಾಟನೆ, ನೇರಳೆ ಮಾರ್ಗ ಪ್ರಯಾಣಿಕರಿಗೆ ಸಿಹಿಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Namma Metro: ಬೈಯ್ಯಪ್ಪನಹಳ್ಳಿ-ಕೆಆರ್‌ ಪುರಂ ಮೆಟ್ರೋ ಮಾರ್ಗ ಸೆಪ್ಟೆಂಬರ್‌ನಲ್ಲಿ ಉದ್ಘಾಟನೆ, ನೇರಳೆ ಮಾರ್ಗ ಪ್ರಯಾಣಿಕರಿಗೆ ಸಿಹಿಸುದ್ದಿ

Namma Metro: ಬೈಯ್ಯಪ್ಪನಹಳ್ಳಿ-ಕೆಆರ್‌ ಪುರಂ ಮೆಟ್ರೋ ಮಾರ್ಗ ಸೆಪ್ಟೆಂಬರ್‌ನಲ್ಲಿ ಉದ್ಘಾಟನೆ, ನೇರಳೆ ಮಾರ್ಗ ಪ್ರಯಾಣಿಕರಿಗೆ ಸಿಹಿಸುದ್ದಿ

BMRCL Metro: ಬೈಯ್ಯಪ್ಪನಹಳ್ಳಿ-ಕೆಆರ್‌ ಪುರಂ ಮೆಟ್ರೋ ರೈಲು ಮಾರ್ಗವು ಸೆಪ್ಟೆಂಬರ್‌ ತಿಂಗಳಲ್ಲಿ ಉದ್ಘಾಟನೆಗೊಳ್ಳಲಿದೆ. ಈ ಎರಡು ಕಿಲೋಮೀಟರ್‌ ರೈಲು ಮಾರ್ಗವು ಈ ಆಗಸ್ಟ್‌ ತಿಂಗಳಲ್ಲಿಯೇ ಉದ್ಘಾಟನೆಯಾಗಬೇಕಿತ್ತು. ಕಾರಣಾಂತರಗಳಿಂದ ವಿಳಂಬವಾಗಿತ್ತು.

Namma Metro: ಬೈಯ್ಯಪ್ಪನಹಳ್ಳಿ-ಕೆಆರ್‌ ಪುರಂ ಮೆಟ್ರೋ ಮಾರ್ಗ ಸೆಪ್ಟೆಂಬರ್‌ನಲ್ಲಿ ಉದ್ಘಾಟನೆ
Namma Metro: ಬೈಯ್ಯಪ್ಪನಹಳ್ಳಿ-ಕೆಆರ್‌ ಪುರಂ ಮೆಟ್ರೋ ಮಾರ್ಗ ಸೆಪ್ಟೆಂಬರ್‌ನಲ್ಲಿ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ ರೈಲು ಬೆಂಗಳೂರಿನಲ್ಲಿ ಈಗ ಹೆಚ್ಚು ಕಡೆ ಸಂಪರ್ಕಗೊಳ್ಳುತ್ತಿದ್ದು, ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ. ವಿಶೇಷವಾಗಿ ಪ್ರತಿನಿತ್ಯ ಉದ್ಯೋಗಕ್ಕೆ ಹೋಗುವ ಪ್ರಯಾಣಿಕರಿಗೆ ರಸ್ತೆ ಮಾರ್ಗದ ಟ್ರಾಫಿಕ್‌ ತಪ್ಪಿಸಿಕೊಂಡು ಬೇಗ ಆಫೀಸ್‌ಗೆ ಅಥವಾ ಮನೆಗೆ ತಲುಪಲು ನಮ್ಮ ಮೆಟ್ರೊ ರೈಲುಗಳು ನೆರವಾಗುತ್ತಿವೆ. ಇದೀಗ ಕೆಆರ್‌ ಪುರಂ ಅಥವಾ ಬೈಯಪ್ಪನಹಳ್ಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೈಯ್ಯಪ್ಪನಹಳ್ಳಿ-ಕೆಆರ್‌ ಪುರಂ ಮೆಟ್ರೋ ರೈಲು ಮಾರ್ಗವು ಸೆಪ್ಟೆಂಬರ್‌ ತಿಂಗಳಲ್ಲಿ ಉದ್ಘಾಟನೆಗೊಳ್ಳಲಿದೆ. ಈ ಎರಡು ಕಿಲೋಮೀಟರ್‌ ರೈಲು ಮಾರ್ಗವು ಈ ಆಗಸ್ಟ್‌ ತಿಂಗಳಲ್ಲಿಯೇ ಉದ್ಘಾಟನೆಯಾಗಬೇಕಿತ್ತು. ಕಾರಣಾಂತರಗಳಿಂದ ವಿಳಂಬವಾಗಿತ್ತು.

ಸೆಪ್ಟೆಂಬರ್‌ ತಿಂಗಳಲ್ಲಿ ಎರಡು ಕಿಲೋಮೀಟರ್‌ ದೂರದ ಬೈಯ್ಯಪ್ಪನಹಳ್ಳಿ-ಕೆಆರ್‌ ಪುರಂ ಮೆಟ್ರೊ ರೈಲು ಮಾರ್ಗವು ಉದ್ಘಾಟನೆಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೆಟ್ರೊ ಮಾರ್ಗವು ಆಗಸ್ಟ್‌ನಲ್ಲಿ ಉದ್ಘಾಟನೆಯಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಉದ್ಘಾಟನೆಯಾಗಿರಲಿಲ್ಲ. ಬೆಂಗಳೂರಿನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಿಂದ ಹೊರಗೆ ಹೆಚ್ಚು ಉದ್ಯೋಗಾವಕಾಶ ಸೃಜಿಸುವ ಮೂಲಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮತ್ತು ಸುಸ್ಥಿರ ಬದುಕು ರೂಪಿಸಲು ಸರ್ಕಾರವು ಮಿಲಿಯನ್ ಪ್ಲಸ್ ನಗರಗಳೆಂದು ಗುರುತಿಸಲಾದ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮತ್ತು ಬಳ್ಳಾರಿ ನಗರಗಳ ಉಪನಗರಗಳಾಗಿ ಕೈಗಾರಿಕಾ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಿದೆ. ಕೈಗಾರಿಕೆಗಳ ಸ್ಥಾಪನೆಯನ್ನು ಕೇಂದ್ರವಾಗಿಸಿಕೊಂಡ ಈ ಉಪನಗರಗಳು ಸುಸ್ಥಿರತೆಯನ್ನು ಹೊಂದಿದ್ದು, ನಾಗರಿಕ ಸೌಲಭ್ಯಗಳು, ಶಾಲೆ, ಆರೋಗ್ಯ ಸೇವಾ ಸೌಲಭ್ಯಗಳನ್ನು ಸ್ಥಳೀಯವಾಗಿಯೇ ಒದಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ರಸ್ತೆ, ವಿಮಾನ ನಿಲ್ದಾಣ ಹಾಗೂ ಬಂದರುಗಳ ಅಭಿವೃದ್ಧಿಗೂ ಆಯವ್ಯಯದಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ರಾಜ್ಯದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳು ಹಾಗೂ ಪ್ರಗತಿಯಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳನ್ನು ಸಂಪರ್ಕಿಸುವ ರಸ್ತೆಗಳು, ಅಂತರರಾಜ್ಯ ಸಂಪರ್ಕ ಕಲ್ಪಿಸುವ ರಸ್ತೆಗಳು ಮತ್ತು ಪ್ರವಾಸಿ ತಾಣಗಳ ರಸ್ತೆಗಳನ್ನು ಗುರುತಿಸಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ Hybrid Annuity Model ನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಹುಮನಾಬಾದ್-ಕಲಬುರಗಿ ಮತ್ತು ಚಳ್ಳಕೆರೆ ರಾಷ್ಟ್ರೀಯ ಹೆದ್ದಾರಿ ನಡುವೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಎಕ್ಸಪ್ರೆಸ್-ವೇ ನಿರ್ಮಿಸುವ ಮೂಲಕ ಕಲ್ಯಾಣ ಕರ್ನಾಟಕ ಮತ್ತು ಬೆಂಗಳೂರು ನಡುವಣ ರಸ್ತೆ ಸಂಪರ್ಕ ಇನ್ನಷ್ಟು ಉತ್ತಮ ಪಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

Whats_app_banner