ಕನ್ನಡ ಸುದ್ದಿ  /  ಕರ್ನಾಟಕ  /  ಬಿಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್;‌ ಮಾಜಿ ಸಿಎಂ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಣೆ

ಬಿಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್;‌ ಮಾಜಿ ಸಿಎಂ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಣೆ

ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೊ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್,‌ ಮಾಜಿ ಸಿಎಂ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಣೆ ಮಾಡಿದೆ. ಎರಡು ವಾರಗಳ ಕಾಲ ವಿಚಾರಣೆ ಮುಂದೂಡಿಕೆಯಾಗಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)

ಬಿಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್;‌ ಮಾಜಿ ಸಿಎಂ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಣೆ
ಬಿಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್;‌ ಮಾಜಿ ಸಿಎಂ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಣೆ

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ-2012) ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ. ಇದರಿಂದ ಯಡಿಯೂರಪ್ಪ ಅವರು ನಿಟ್ಟುಸಿರು ಬಿಡುವಂತಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ರದ್ದು ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಶುಕ್ರವಾರ ವಿಚಾರಣೆ ನಡೆಸಿತು. ಈ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ಬೇಕೆಂದು ಪ್ರಾಸಿಕ್ಯೂಷನ್‌ ಮನವಿ ಮಾಡಿದ ನಂತರ ಹೈಕೋರ್ಟ್‌ ಸಮಯಾವಕಾಶ ನೀಡಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಏನಾಯಿತು

ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಮತ್ತು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರು ಯಡಿಯೂರಪ್ಪ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದರು. ವಿಚಾರಣೆಯ ಸಂದರ್ಭದಲ್ಲಿ ಪ್ರಕರಣದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಅಗಿರುವ ವಕೀಲ ರವಿವರ್ಮ ಕುಮಾರ್‌ ಮತ್ತು ರಾಜ್ಯ ಪ್ರಾಸಿಕ್ಯೂಟರ್‌ ಬಿ.ಎನ್.ಜಗದೀಶ್‌ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಸಮಯಾವಕಾಶ ಬೇಕೆಂದು ನ್ಯಾಯಮೂರ್ತಿಗಳನ್ನು ಕೋರಿದರು.

ಟ್ರೆಂಡಿಂಗ್​ ಸುದ್ದಿ

ಪ್ರಾಸಿಕ್ಯೂಷನ್‌ ಮನವಿಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳು ಮುಂದಿನ ವಿಚಾರಣೆವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ತನಿಖಾಧಿಕಾರಿಗೆ ಸೂಚನೆ ನೀಡಿ ಇದೇ ತಿಂಗಳ 14ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿದರು.

ಇದೇ ಸಂದರ್ಭದಲ್ಲಿ ಸಂತ್ರಸ್ತ ಬಾಲಕಿಯ ಸಹೋದರ ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ಬಂಧಿಸಿಯೇ ವಿಚಾರಣೆಗೊಳಪಡಿಸಬೇಕು ಎಂಬ ಆಂಶಗಳಿಗೆ ಪೂರಕವಾದ ದಾಖಲೆಗಳನ್ನು ನ್ಯಾಯಾಲಯಕ್ಕೆ ಒದಗಿಸುವಂತೆ ಅರ್ಜಿದಾರರ ಪರ ವಕೀಲ ಎಸ್‌.ಬಾಲನ್‌ ಅವರಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದರು.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ-ಟೈಮ್‌ಲೈನ್‌

2024ರ ಫೆಬ್ರವರಿ 2 - ನ್ಯಾಯ ಒದಗಿಸಲು ಸಹಾಯ ಮಾಡುವಂತೆ ಸಂತ್ರಸ್ತೆ ಮತ್ತು ಆಕೆಯ ತಾಯಿ ಯಡಿಯೂರಪ್ಪ ಅವರ ಮನೆಗೆ ತೆರಳಿದ್ದರು.

ಮಾರ್ಚ್‌ 3 - ಸಂತ್ರಸ್ತೆಯ ತಾಯಿ ತಮ್ಮ ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸದಾಶಿವ ನಗರ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಮಾರ್ಚ್ 14- ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯಿದೆ ಅಡಿಯಲ್ಲಿ ದೂರು ದಾಖಲಾಗಿತ್ತು. ಸರಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು.

ಏಪ್ರಿಲ್‌ 12- ಯಡಿಯೂರಪ್ಪ ಅವರ ಧ್ವನಿಯ ಮಾದರಿಯನ್ನು ಸಂಗ್ರಹಿಸಿದ್ದರು.

ಏಪ್ರಿಲ್‌ 17 - ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದರು. ಮತ್ತೆ ಸಂತ್ರಸ್ತೆಯ ಸಹೋದರ ದೂರು ಸಲ್ಲಿಸಿದ್ದರು.

ಜೂನ್‌ 12 - ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರೆಂಟ್‌ ಹೊರಡಿಸಲಾಗಿತ್ತು.

ಜೂನ್‌ 14 -ಬಿಎಸ್‌ ವೈ ಅವರನ್ನು ಬಂಧಿಸದಂತೆ ಹೈಕೋರ್ಟ್‌ ಸೂಚಿಸಿತ್ತು.

ಜೂನ್‌ 17 - ಯಡಿಯೂರಪ್ಪ ಸಿಐಡಿ ವಿಚಾರಣೆಗೆ ಹಾಜರಾಗಿದ್ದರು.

ಈ ಪ್ರಕರಣದಲ್ಲಿ ಗುರುವಾರವಷ್ಟೇ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಿದ್ದರು. ಯಡಿಯೂರಪ್ಪ ಮೊದಲ ಆರೋಪಿಯಾಗಿದ್ದರೆ ಅವರ ಆಪ್ತರಾದ ವಕೀಲ ಅರುಣ್‌, ರುದ್ರೇಶ್‌ ಮತ್ತು ಮರಿಸ್ವಾಮಿ ಕ್ರಮವಾಗಿ 2ರಿಂದ ನಾಲ್ಕನೇ ಆರೋಪಿಗಳಾಗಿದ್ದಾರೆ. ಆರೋಪಿಯೂ ಸೇರಿದಂತೆ ಎಲ್ಲ ನಾಲ್ವರೂ ಸಾಕ್ಷ್ಯ ನಾಶ, ಪ್ರಕರಣ ಮುಚ್ಚಿ ಹಾಕಲು ಆಮಿಷವೊಡ್ಡಿರುವುದಕ್ಕೆಸಿಐಡಿ ಸಾಕ್ಷ್ಯಗಳನ್ನು ಸಂಗ್ರಹಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪದಿಂದ ಪಾರಾಗಲು ಸಂತ್ರಸ್ತ ಬಾಲಕಿಯ ತಾಯಿಯ ಬಳಿ ಇದ್ದ ವಿಡಿಯೋ ದಾಖಲೆಗಳನ್ನು ಇವರೆಲ್ಲರೂ ನಾಶ ಮಾಡಲು ಪ್ರಯತ್ನಿಸಿದ್ದರು ಎಂಬ ಆರೋಪವೂ ಇದೆ.

(ವರದಿ- ಎಚ್. ಮಾರುತಿ, ಬೆಂಗಳೂರು)