ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಟಿಜೆ ಅಬ್ರಹಾಂ ವಿರುದ್ಧ ಚಾರ್ಜ್‌ ಶೀಟ್‌-bengaluru news chargesheet in extortion case against activist tj abraham who flagged karnataka muda scam ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಟಿಜೆ ಅಬ್ರಹಾಂ ವಿರುದ್ಧ ಚಾರ್ಜ್‌ ಶೀಟ್‌

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಟಿಜೆ ಅಬ್ರಹಾಂ ವಿರುದ್ಧ ಚಾರ್ಜ್‌ ಶೀಟ್‌

Karnataka MUDA scam; ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಟಿಜೆ ಅಬ್ರಹಾಂ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸಿದ್ದಾರೆ. ಪೊಲೀಸರ ಈ ನಡೆ ಅನುಮಾನಕ್ಕೆ ಕಾರಣವಾಗಿದೆ. ಆದಾಗ್ಯೂ, ಅಧಿಕಾರಿಯೊಬ್ಬರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಹಳೆಯ ಪ್ರಕರಣ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ. (ವರದಿ-ಎಚ್.ಮಾರುತಿ, ಬೆಂಗಳೂರು).

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಟಿಜೆ ಅಬ್ರಹಾಂ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಟಿಜೆ ಅಬ್ರಹಾಂ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಿದೆ.

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ ಕೋರಿದ್ದ ಟಿ.ಜೆ.ಅಬ್ರಹಾಂ ವಿರುದ್ಧ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣವೊಂದರಲ್ಲಿ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ. ಅಬ್ರಹಾಂ ಅವರು ಮುಖ್ಯಮಂತ್ರಿಗಳ ವಿರುದ್ಧ ಮುಡಾ ಹಗರಣದಲ್ಲಿ ತಮ್ಮ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿದ್ದರು.

ಕೆಎಎಸ್‌ ಅಧಿಕಾರಿ ಸುಧಾ ಅವರಿಗೆ ಹಣ ನೀಡುವಂತೆ ಬೇಡಿಕೆ ಇರಿಸಿದ್ದ ಆರೋಪದಡಿಯಲ್ಲಿ ಟಿ.ಜೆ.ಅಬ್ರಹಾಂ ಮಗೂ ಮಧ್ಯವರ್ತಿ ಸುನೀಲ್‌ ಎಂಬುವರ ವಿರುದ್ಧ ತನಿಖೆ ನಡೆಸಿದ್ದ ಜೀವನ್‌ ಭೀಮಾ ನಗರ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಇವರು ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಕೆಎಎಸ್‌ ಅಧಿಕಾರಿ ಸುಧಾ ಅವರು ದೂರು ನೀಡಿದ್ದರು. ಇವರು ನೀಡಿದ ದೂರಿನನ್ವಯ ಇಬ್ಬರ ವಿರುದ್ಧವೂ ಎಫ್‌ಐಆರ್‌ ದಾಖಲಾಗಿತ್ತು.

ಕಳೆದ ವರ್ಷ ದಾಖಲಾಗಿದ್ದ ದೂರು, ಪ್ರತಿದೂರು

ಅಬ್ರಹಾಂ ಅವರು ಕೆಎಎಸ್‌ ಅಧಿಕಾರಿ ಸುಧಾ ಅವರ ವಿರುದ್ಧ ಭ್ರಷ್ಟಾಚಾರ ಆರೋಪದಡಿಯಲ್ಲಿ ಲೋಕಾಯುಕ್ತ ಮತ್ತು ಎಸಿಬಿಗೆ ದೂರು ನೀಡಿದ್ದರು. ನಂತರ ಪ್ರಕರಣವನ್ನು ಹಿಂಪಡೆಯಲು ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಸುಧಾ ಅವರು 2023ರ ಆಗಸ್ಟ್‌ 1ರಂದು ಜೀವನ್‌ ಬೀಮಾ ನಗರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ಬಂಧನದ ಬೀತಿಯಿಂದ ಆರೋಪಿಗಳಿಬ್ಬರೂ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.

ಇಬ್ಬರಿಗೂ ನೋಟಿಸ್‌ ನೀಡಿ ವಿಚಾರಣೆ ನಡೆಸಲಾಗಿತ್ತು. ತನಿಖೆಯ ಸಂದರ್ಭದಲ್ಲಿ ಸುಧಾ ಅವರಿಗೆ ಕರೆ ಮಾಡಿ ಹಣ ಕೇಳಿರುವ ಕಾಲ್‌ ರೆಕಾರ್ಡ್‌, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಖಾಸಗಿ ವಾಹಿನಿಯೊಂದು ನಡೆಸಿದ್ದ ರಹಸ್ಯ ಕಾರ್ಯಾಚರಣೆ ವಿಡಿಯೋಗಳು ಮತ್ತು ರಹಸ್ಯ ಕಾರ್ಯಾಚರಣೆಯ ದೃಶ್ಯಾವಳಿಗಳು ಮತ್ತು ಆರೋಪಿಗಳ ಧ್ವನಿ ಮಾದರಿಗಳನ್ನು ಸಂಗ್ರಹಿಸಲಾಗತ್ತು.

ತಾಂತ್ರಿಕ ಸಾಕ್ಷ್ಯ ಮತ್ತು ಧ್ವನಿ ಮಾದರಿಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ಎಫ್‌ಎಸ್‌ಎಲ್‌ ವರದಿ ವಿಳಂಬವಾಗಿದ್ದರಿಂದ ಆರೋಪ ಪಟ್ಟಿ ಸಿದ್ದವಾಗಿರಲಿಲ್ಲ. ಇದೀಗ ಆರೋಪ ಪಟ್ಟಿ ಸಿದ್ದವಾಗಿದ್ದು ಮೂರು ದಿನಗಳ ಹಿಂದೆಯೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಗೃಹ ಇಲಾಖೆ ಮೂಲಗಳು ತಿಳಿಸಿವೆ.

ಅಬ್ರಹಾಂ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿರುವ ಸಂದರ್ಭ ಕುರಿತು ಅನುಮಾನಗಳು ವ್ಯಕ್ತವಾಗಿವೆ. ಆದರೆ ಪೊಲೀಸರು ಇದೊಂದು ಹಳೆಯ ಪ್ರಕರಣವಾಗಿದ್ದು, ಎಫ್‌ಎಸ್‌ಎಲ್‌ ವರದಿ ಬರುತ್ತಿದ್ದಂತೆ ಆಗಸ್ಟ್‌ 5ರಂದೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ವಿದ್ಯಾರ್ಥಿನಿಗೆ ಬ್ಲಾಕ್‌ ಮೇಲ್‌ ಮಾಡಿದ್ದ ಡೆಲಿವರಿ ಬಾಯ್‌ ಬಂಧನ

ವಿದ್ಯಾರ್ಥಿನಿಯೊಬ್ಬರಿಗೆ ಬ್ಲಾಕ್‌ ಮೇಲ್‌ ಮಾಡಿ ಚಿನ್ನಾಭರಣ ಮತ್ತು ನಗದು ಹಣವನ್ನು ಸುಲಿಗೆ ಮಾಡಿದ್ದ ಆರೋಪದಡಿಯಲ್ಲಿ ಡೆಲಿವರ್‌ ಬಾಯ್‌ ಒಬ್ಬನನ್ನು ಸುಬ್ರಮಣ್ಯಪುರ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಕಲ್ಲಸಂದ್ರದ ಕಾಕತೀಯನಗರ ನಿವಾಸಿ 19 ವರ್ಷದ ತೇಜಸ್‌ ಬಂಧಿತ ಆರೋಪಿ. ನಾಯ್ಡು ಲೇಔಟ್‌ ನಿವಾಸಿ ಹೇಮಾ ಅವರು ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ. ಈತನಿಂದ 3.40 ಲಕ್ಷ ರೂಪಾಯಿ ಮೌಲ್ಯದ 50 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯು ತನ್ನ ಸಹಪಾಠಿಯೊಬ್ಬನನ್ನು ಪ್ರೀತಿಸುತ್ತಿದ್ದರು. ಇವರ ಸಹಪಾಠಿಯೂ ಆಗಿದ್ದ ತೇಜಸ್‌ ಕಾಲೇಜು ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟು ಡೆಲಿವರಿ ಕೆಲಸ ಮಾಡುತ್ತಿದ್ದ. ಇವರ ಪ್ರೀತಿಯ ವಿಷಯ ತಿಳಿದಿದ್ದ ಈತ ವಿದ್ಯಾರ್ಥಿನಿಗೆ ಬೆದರಿಕೆ ಹಾಕುತ್ತಿದ್ದ ಎಂದು ತಿಳಿದು ಬಂದಿದೆ.

ಈ ವಿಷಯವನ್ನು ಪೋಷಕರಿಗೆ ತಿಳಿಸದೇ ಇರಲು ಡೆಲಿವರಿ ಬಾಯ್‌ ತೇಜಸ್‌ ವಿದ್ಯಾರ್ಥಿನಿಯಿಂದ 75 ಗ್ರಾಂ ಚಿನ್ನಾಭರಣ ಮತ್ತು 1.25 ಲಕ್ಷ ರೂ.ಹಣವನ್ನು ಸುಲಿಗೆ ಮಾಡಿದ್ದ. ವಿದ್ಯಾರ್ಥಿನಿಯು ತನ್ನ ಮನೆಯಲ್ಲಿದ್ದ ಚಿನ್ನ ಮತ್ತು ನಗದು ಹಣವನ್ನು ಯಾರಿಗೂ ತಿಳಿಯದಂತೆ ತೇಜಸ್‌ ಗೆ ತಂದುಕೊಟ್ಟಿದ್ದರು. ನಂತರ ವಿಷಯ ತಿಳಿದ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

(ವರದಿ-ಎಚ್.ಮಾರುತಿ, ಬೆಂಗಳೂರು)