ಪ್ರಾಸಿಕ್ಯೂಷನ್ ಅನುಮತಿಗೆ ತಡೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದೇವೆ, ನಾನು ಯಾವ ತಪ್ಪೂ ಮಾಡಿಲ್ಲ, ಇದೊಂದು ಪಿತೂರಿ: ಸಿಎಂ ಸಿದ್ದರಾಮಯ್ಯ-bengaluru news cm siddaramaiah reaction on muda case writ petition in karnataka high court uks ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಪ್ರಾಸಿಕ್ಯೂಷನ್ ಅನುಮತಿಗೆ ತಡೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದೇವೆ, ನಾನು ಯಾವ ತಪ್ಪೂ ಮಾಡಿಲ್ಲ, ಇದೊಂದು ಪಿತೂರಿ: ಸಿಎಂ ಸಿದ್ದರಾಮಯ್ಯ

ಪ್ರಾಸಿಕ್ಯೂಷನ್ ಅನುಮತಿಗೆ ತಡೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದೇವೆ, ನಾನು ಯಾವ ತಪ್ಪೂ ಮಾಡಿಲ್ಲ, ಇದೊಂದು ಪಿತೂರಿ: ಸಿಎಂ ಸಿದ್ದರಾಮಯ್ಯ

Siddramaiah News: ಮುಡಾ ಕೇಸ್‌ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, “ಪ್ರಾಸಿಕ್ಯೂಷನ್ ಅನುಮತಿಗೆ ತಡೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದೇವೆ, ನಾನು ಯಾವ ತಪ್ಪೂ ಮಾಡಿಲ್ಲ, ಇದೊಂದು ಪಿತೂರಿ” ಎಂದು ಹೇಳಿದರು.

ಬೆಂಗಳೂರಿನ ಚಿತ್ರಕಲಾ ಪರಿಷತ್‌ನಲ್ಲಿ ಫೋಟೋ ಜರ್ನಲಿಸ್ಟ್‌ಗಳ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.
ಬೆಂಗಳೂರಿನ ಚಿತ್ರಕಲಾ ಪರಿಷತ್‌ನಲ್ಲಿ ಫೋಟೋ ಜರ್ನಲಿಸ್ಟ್‌ಗಳ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ಬೆಂಗಳೂರು: ಮೈಸೂರು ಸೈಟು ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಮುಡಾ ಪ್ರಕರಣ (MUDA Case)ದಲ್ಲಿ ತನ್ನ ವಿರುದ್ಧ ವಿಚಾರಣೆಗೆ (ಪ್ರಾಸಿಕ್ಯೂಷನ್‌) ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ (Karnataka High Court)ನಲ್ಲಿ ರಿಟ್ ಅರ್ಜಿ (Writ Petetion) ಸಲ್ಲಿಸಲಾಗಿದೆ. ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೋಮವಾರ ತಿಳಿಸಿದರು.

ಅವರು ಇಂದು (ಆಗಸ್ಟ್ 19) ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಫೋಟೋ ಜರ್ನಲಿಸ್ಟ್‌ಗಳು ಆಯೋಜಿಸಿದ್ದ ಫೋಟೋ ಎಕ್ಸಿಬಿಷನ್ ಉದ್ಘಾಟಿಸಿದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದರು.

ನಾನು ಯಾವ ತಪ್ಪನ್ನೂ ಎಸಗಿಲ್ಲ, ಇದೊಂದು ಪಿತೂರಿ

ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ವಿಚಾರಣೆ ವೇಳೆ ದೇಶದ ಖ್ಯಾತ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳುತ್ತಿರುವ ನಾನು ಯಾವ ತಪ್ಪನ್ನೂ ಎಸಗಿಲ್ಲ. ಮಂತ್ರಿಯಾಗಿ 40 ವರ್ಷಗಳ ಕರ್ತವ್ಯ ನಿರ್ವಹಿಸಿರುವ ನನ್ನ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂಬುದು ಈ ರಾಜ್ಯದ ಜನರಿಗೂ ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ರಾಜಿನಾಮೆ ಬೇಡಿಕೆಯೊಂದಿಗೆ ಬಿಜೆಪಿಯವರು ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರ ಸರ್ಕಾರದವರು ರಾಜಭವನವನ್ನು ಬಳಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರದ್ದು ದುರುದ್ದೇಶದಿಂದ ಕೂಡಿದ ಪ್ರತಿಭಟನೆ. ಇದನ್ನು ರಾಜಕೀಯವಾಗಿ ಎದಿರುಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡುಬಂದಿದ್ದೇವೆ. ಈಗ ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ ಎಂದು ಹೇಳಿದರು.

ನನ್ನನ್ನು ರಾಜಕೀಯವಾಗಿ ಮುಗಿಸಬಹುದು ಎಂಬುದು ಭ್ರಮೆ

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷಗಳಿಗೆ ಸಿಎಂ ಅವರಿಂದ ಭಯ ಕಾಡುತ್ತಿದ್ದು, ಅವರನ್ನೇ ಗುರಿಮಾಡಿಕೊಂಡು ಆಪಾದನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳು ಮತ್ತು ಪ್ರತಿಪಕ್ಷ ನಾಯಕರ ಭಯಕ್ಕೆ ಕಾರಣ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆ ಪ್ರತಿಪಕ್ಷದವರಲ್ಲಿದೆ ಎಂದು ಹೇಳಿದರು.

ಇಂದು ಅಪರಾಹ್ನ 2.30ಕ್ಕೆ ಹೈಕೋರ್ಟ್‌ನಲ್ಲಿ ಈ ರಿಟ್‌ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ನ್ಯಾ.ಹೇಮಂತ್ ಚಂದನ್ ಗೌಡರ್ ಅವರ ಮುಂದೆ ಸಿಎಂ ಪರ ವಕೀಲರು ಮೆಮೋ ಸಲ್ಲಿಸಿದ್ದಾರೆ.

ಇದೇ ಪ್ರಕರಣದಲ್ಲಿ ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ಗೆ ‌ತಡೆ ನೀಡಬಾರದು ಎಂದು ಮುಡಾ ಹಗರಣದಲ್ಲಿ ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣಾ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಲು ಮುಂದಾಗಿದ್ದಾರೆ. ಇಂದು ಸಂಜೆ ಒಳಗೆ ಇದು ಕೂಡ ದಾಖಲಾಗಬಹುದು.

ಏನಿದು ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಪಾರ್ವತಿ ಅವರ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ವಿಚಾರದಲ್ಲಿ ಅಕ್ರಮಗಳು ನಡೆದಿದ್ದು, ಸಿಎಂ ಪ್ರಭಾವ ಬಳಸಿ ಅಕ್ರಮವಾಗಿ ಬದಲಿ ನಿವೇಶನ ಪಡೆದುಕೊಂಡಿದ್ದಾರೆ. ಅವರ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರಾಸಿಕೂಷನ್‌ಗೆ ಅನುಮತಿ ನೀಡುವಂತೆ ಕೆಲವು ಸಾಮಾಜಿಕ ಕಾರ್ಯಕರ್ತರು ಕೋರಿದ್ದರು.