ಬಿಜೆಪಿ ಮಾನಹಾನಿ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು, ಬೆಂಗಳೂರು ವಿಶೇಷ ಕೋರ್ಟ್‌ನಲ್ಲಿ ವಿಚಾರಣೆ
ಬಿಜೆಪಿ ಮಾನಹಾನಿ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಬೆಂಗಳೂರು ವಿಶೇಷ ಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು, ರಾಹುಲ್ ಗಾಂಧಿ ಖುದ್ದು ಹಾಜರಾಗಿದ್ದರು. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕಾಂಗ್ರೆಸ್ ಅಪಪ್ರಚಾರ ಮಾಡಿದ್ದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗಿತ್ತು ಎಂದು ಕರ್ನಾಟಕ ಬಿಜೆಪಿ ಘಟಕ ಹೂಡಿದ ದಾವೆ ಇದು.

ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಬೆಂಗಳೂರಿನ ವಿಶೇಷ ಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರಾದರು.
ಕೇಸ್‌ನ ವಿಚಾರಣೆ ಕೈಗತ್ತಿಕೊಂಡ ನ್ಯಾಯಪೀಠ, ರಾಹುಲ್ ಗಾಂಧಿ ಅವರ ಜಾಮೀನು ಅರ್ಜಿ ಪರಿಶೀಲಿಸಿ ಕೂಡಲೆ ಜಾಮೀನು ನೀಡಿದೆ. ಇದಕ್ಕೆ ಡಿಕೆ ಸುರೇಶ್ ಅವರು ಶ್ಯೂರಿಟಿ ನೀಡಿದ್ದಾರೆ. ಜಾಮೀನು ನೀಡಿದ ಬಳಿಕ ನ್ಯಾಯಪೀಠ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.
ಸುದ್ದಿ ಅಪ್ಡೇಟ್ ಆಗ್ತಾ ಇದೆ
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.