ಫೆ 7 ರಂದು ಕಾಂಗ್ರೆಸ್‌ನವರು ದೆಹಲಿಯಲ್ಲಿ, ಬಿಜೆಪಿಯವರು ಬೆಂಗಳೂರಲ್ಲಿ ಪ್ರತಿಭಟನೆ ಮಾಡ್ತಾರಂತೆ; ಕಾರಣ ಹೀಗಿದೆ ನೋಡಿ
ಕನ್ನಡ ಸುದ್ದಿ  /  ಕರ್ನಾಟಕ  /  ಫೆ 7 ರಂದು ಕಾಂಗ್ರೆಸ್‌ನವರು ದೆಹಲಿಯಲ್ಲಿ, ಬಿಜೆಪಿಯವರು ಬೆಂಗಳೂರಲ್ಲಿ ಪ್ರತಿಭಟನೆ ಮಾಡ್ತಾರಂತೆ; ಕಾರಣ ಹೀಗಿದೆ ನೋಡಿ

ಫೆ 7 ರಂದು ಕಾಂಗ್ರೆಸ್‌ನವರು ದೆಹಲಿಯಲ್ಲಿ, ಬಿಜೆಪಿಯವರು ಬೆಂಗಳೂರಲ್ಲಿ ಪ್ರತಿಭಟನೆ ಮಾಡ್ತಾರಂತೆ; ಕಾರಣ ಹೀಗಿದೆ ನೋಡಿ

ಅನುದಾನ ಹಂಚಿಕೆ, ಬರ ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿ ಮುಂದಿನ ಬುಧವಾರ ಆಡಳಿತ ಮತ್ತು ವಿಪಕ್ಷಗಳು ಪ್ರತಿಭಟನೆ ನಡೆಸಲಿವೆ. ಫೆ 7 ರಂದು ಕಾಂಗ್ರೆಸ್‌ನವರು ದೆಹಲಿಯಲ್ಲಿ, ಬಿಜೆಪಿಯವರು ಬೆಂಗಳೂರಲ್ಲಿ ಪ್ರತಿಭಟನೆ ಮಾಡ್ತಾರಂತೆ. ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕ ಸಿಟಿ ರವಿ ಕೊಟ್ಟ ಕಾರಣ ಹೀಗಿದೆ ನೋಡಿ.

ಫೆ 7 ರಂದು ಕಾಂಗ್ರೆಸ್‌ನವರು ದೆಹಲಿಯಲ್ಲಿ, ಬಿಜೆಪಿಯವರು ಬೆಂಗಳೂರಲ್ಲಿ ಪ್ರತಿಭಟನೆ ಮಾಡ್ತಾರಂತೆ. ಕಾರಣ ಹೀಗಿದೆ ನೋಡಿ- ಬಿಜೆಪಿ ನಾಯಕ ಸಿಟಿ ರವಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಭಟನೆಯ ಕಾರಣ ವಿವರಿಸಿದ್ದಾರೆ.
ಫೆ 7 ರಂದು ಕಾಂಗ್ರೆಸ್‌ನವರು ದೆಹಲಿಯಲ್ಲಿ, ಬಿಜೆಪಿಯವರು ಬೆಂಗಳೂರಲ್ಲಿ ಪ್ರತಿಭಟನೆ ಮಾಡ್ತಾರಂತೆ. ಕಾರಣ ಹೀಗಿದೆ ನೋಡಿ- ಬಿಜೆಪಿ ನಾಯಕ ಸಿಟಿ ರವಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಭಟನೆಯ ಕಾರಣ ವಿವರಿಸಿದ್ದಾರೆ.

ಬೆಂಗಳೂರು: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಮತ್ತು ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ಪ್ರತಿಭಟನೆ ಸದ್ಯ ಸುದ್ದಿಯಲ್ಲಿದೆ. ಫೆ 7 ರಂದು ಕಾಂಗ್ರೆಸ್‌ನವರು ದೆಹಲಿಯಲ್ಲಿ, ಬಿಜೆಪಿಯವರು ಬೆಂಗಳೂರಲ್ಲಿ ಪ್ರತಿಭಟನೆ ಮಾಡುವುದಾಗಿ ಘೋಷಿಸಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ಲೋಕಸಭೆಯಲ್ಲಿ ಮಂಡಿಸಿರುವ 2024ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಇದನ್ನು ವಿರೋಧಿಸಿ ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯನಗರದಲ್ಲಿ ಹೇಳಿದರು.

ಇದೇ ವೇಳೆ, ಕರ್ನಾಟಕ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಫೆ.7 ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯ ದರ್ಶಿ ಸಿ.ಟಿ. ರವಿ ಹೇಳಿದರು.

ವಿಜಯನಗರದಲ್ಲಿ ಸಿಎಂ ಸಿದ್ದರಾಮಯ್ಯ ಫೆ.7 ರ ಪ್ರತಿಭಟನೆ ಕುರಿತು ಹೇಳಿದ್ದಿಷ್ಟು

ಹಂಪಿ ಕನ್ನಡ ವಿವಿ ಹೆಲಿಪ್ಯಾಡ್‌ನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ. 15ನೇ ಹಣಕಾಸು ಯೋಜನೆಯಡಿ 5495 ಕೋಟಿ ರೂಪಾಯಿ ರಾಜ್ಯಕ್ಕೆ ಬರಬೇಕಿತ್ತು. ಜೊತೆಗೆ ಬೇರೆ ಯೋಜನೆಗಳಿಗೆ 6000 ಕೋಟಿ ರೂಪಾಯಿ ಕೂಡ ನೀಡಬೇಕಿತ್ತು.

ಬಜೆಟ್‌ನಲ್ಲಿ ನಮಗೆ ಬರಬೇಕಿದ್ದ ಅನುದಾನದ ಹೊರತಾಗಿ ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಗಾಗಿ ಎನ್‌ಡಿಆರ್‌ಎಫ್ ಅನುದಾನ 4660 ಕೋಟಿ ರೂಪಾಯಿ ನೀಡುವಂತೆ ಕೋರಲಾಗಿತ್ತು. ನಾಲ್ಕು ತಿಂಗಳು ಕಳೆದರೂ ಕೇಂದ್ರದಿಂದ ಒಂದು ರೂಪಾಯಿಯೂ ಬಂದಿಲ್ಲ.

ಮಧ್ಯಂತರ ವರದಿಯಲ್ಲೇ ಅನುದಾನ ನೀಡಬೇಕು ಎಂದು ಹೇಳಿದ್ದೆ. ಆದರೆ, ಅವರು ಕೊಡಲಿಲ್ಲ. ರಾಜ್ಯದಿಂದಲೇ ರಾಜ್ಯಸಭೆ ಪ್ರವೇಶಿಸಿ ಕೇಂದ್ರ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಮನ್ ಅವರಿಂದಲೇ ಅನ್ಯಾಯವಾಗಿದೆ. ಇದನ್ನು ವಿರೋಧಿಸಿ ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅದರಲ್ಲಿ ನಾನೂ ಸಹ ಭಾಗವಹಿಸುವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಫೆ.7 ರಂದು ವಿಧಾನ ಸೌಧ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ

ಬೆಂಗಳೂರಿನ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಕೋರ್ ಕಮಿಟಿ ಸಭೆಯ ನಂತರ ಸಿ.ಟಿ.ರವಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ 220 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಆದರೂ ಕುಡಿಯುವ ನೀರಿನ ಸಮಸ್ಯೆಯೂ ಸೇರಿ ಬರಪರಿಹಾರದ ಯಾವುದೇ ಕ್ರಮಕೈಗೊಂಡಿಲ್ಲ. ಆದರಿಂದ ಅದನ್ನು ಖಂಡಿಸಿ ಬಜೆಟ್ ಅಧಿವೇಶನದ ವೇಳೆ, ಬಿಜೆಪಿ ಶಾಸಕರು ಸದನದ ಒಳಗೆ, ಹೊರಗೆ ಹೋರಾಟ ನಡೆಸಲಿದ್ದಾರೆ ಎಂದರು.

ಮುಂಬರುವ ವಿಧಾನಪರಿಷತ್‌, ರಾಜ್ಯಸಭೆ, ಲೋಕಸಭಾ ಚುನಾವಣೆಗಳ ಕುರಿತು ವಿಸ್ತೃತ ಚರ್ಚೆ ಮಾಡಿದ್ದು, ರಾಜ್ಯಸಭೆ ಅಭ್ಯರ್ಥಿಗಳ ಬಗ್ಗೆ ವರಿಷ್ಠರೊಂದಿಗೆ ಸಮಾಲೋಚಿಸಿ ತೀರ್ಮಾನಿಸುವ ಅಧಿಕಾರವನ್ನು ಪಕ್ಷದ ರಾಜ್ಯ ಅಧ್ಯಕ್ಷರಿಗೆ ಕೊಡಲಾಗಿದೆ ಎಂದು ಸಿಟಿ ರವಿ ತಿಳಿಸಿದರು.

ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿ, ಎರಡನೇ ಅಭ್ಯರ್ಥಿ ಹಾಕಬೇಕಾ ಬಿಡಬೇಕಾ? ಮೊದಲ ಅಭ್ಯರ್ಥಿ ಸಂಬಂಧಿಸಿ ಏನು ಮಾಡಬೇಕು? ಇವೆಲ್ಲದರ ಬಗ್ಗೆ ಚರ್ಚಿಸಿ ನಿರ್ಣಯ ಮಾಡುವ ಅಧಿಕಾರವನ್ನೂ ರಾಜ್ಯಾಧ್ಯಕ್ಷರಿಗೆ ಕೊಟ್ಟಿದ್ದೇವೆ. ಒಟ್ಟು 92 ಮತಗಳು ಬೇಕಾಗುತ್ತವೆ. ಬಿಜೆಪಿ-ಜೆಡಿಎಸ್‌ ಸೇರಿ 85 ರಿಂದ 86 ಮತಗಳಿವೆ. ಕೋರ್ ಕಮಿಟಿ ನೀಡಿದ ಅಧಿಕಾರದಂತೆ ಪಕ್ಷದ ರಾಜ್ಯಾಧ್ಯಕ್ಷರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಜೊತೆ ಸಮಾಲೋಚನೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅವರು ಸ್ಪಷ್ಟಪಡಿಸಿದರು.

Whats_app_banner