ಕನ್ನಡ ಸುದ್ದಿ  /  ಕರ್ನಾಟಕ  /  3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ 1ನೇ ತ್ವರಿತಗತಿ ನ್ಯಾಯಾಲಯ

3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ 1ನೇ ತ್ವರಿತಗತಿ ನ್ಯಾಯಾಲಯ

ಲಗ್ಗೆರೆಯ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಚೇತನ್‌ ಎಂಬ ಆರೋಪಿಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮತ್ತೊಂದು ಪ್ರಕರಣದಲ್ಲಿ ಮಾರುತಿ ನಗರದ ಕಬ್ಬಾಳಮ್ಮ ದೇವಿಯ ದೇವಾಲಯದಲ್ಲಿ ಬೆಳ್ಳಿ ಮತ್ತು ಇತರ ವಸ್ತುಗಳನ್ನು ಕಳವು ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ 1ನೇ ತ್ವರಿತಗತಿ ನ್ಯಾಯಾಲಯ
3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ 1ನೇ ತ್ವರಿತಗತಿ ನ್ಯಾಯಾಲಯ

ಬೆಂಗಳೂರು: ಲಗ್ಗೆರೆಯ 3 ವರ್ಷದ ಮಗುವಿನ ಮೇಲೆ ಚೇತನ್ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದ. ಮಗುವಿನ ತಂದೆ ನೀಡಿದ ದೂರನ್ನು ಆಧರಿಸಿ ಚೇತನ್‌ನನ್ನು 2022ರ ಜುಲೈ 7ರಂದು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ 15 ಮಂದಿ ಸಾಕ್ಷಿದಾರರನ್ನು ವಿಚಾರಣೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 

ಪ್ರಕರಣದಲ್ಲಿ ವಾದ ಪ್ರತಿವಾದ ಅಲಿಸಿದ 1ನೇ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎನ್.ರೂಪಾ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ವಕೀಲರಾಗಿ ಪಿ.ಕೃಷ್ಣವೇಣಿ ಅವರು ಅಪರಾಧಿಗೆ ಶಿಕ್ಷೆಯಾಗುವಂತೆ ಸಮರ್ಥವಾಗಿ ವಾದ ಮಂಡಿಸಿದ್ದರು.

ಕಳವು ಪ್ರಕರಣ, ನಾಲ್ವರು ಕಳ್ಳರ ಬಂಧನ 

ಎರಡು ಪ್ರತ್ಯೇಕ ಕಳವು ಪ್ರಕರಣಗಳಲ್ಲಿ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ಪೊಲೀಸರು ನಾಲ್ವರು ಕಳ್ಳರನ್ನು ಬಂಧಿಸಿದ್ದಾರೆ. ಈಜುಕೊಳದ ಉಡುಪು ಬದಲಾಯಿಸುವ ಕೋಣೆಯ ಲಾಕರ್‌ನಲ್ಲಿಟ್ಟಿದ್ದ ಚಿನ್ನಾಭರಣ ಕಳವು ಮಾಡಿದ್ದ ಈಜು ತರಬೇತುದಾರ ಹಾಗೂ ಕಳವು ಮಾಲು ಪಡೆದಿದ್ದ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ತಲಘಟ್ಟಪುರ ನಿವಾಸಿ 35 ವಷ್ದ ಮಮತಾ ಮತ್ತು 45 ವರ್ಷದ ಸ್ವಾಮಿ ಬಂಧಿತ ಆರೋಪಿಗಳು. ಇವರಿಂದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನಾಭರಣಗಳ್ನು ವಶಪಡಿಸಿಕೊಳ್ಳಲಾಗಿದೆ. 

ಟ್ರೆಂಡಿಂಗ್​ ಸುದ್ದಿ

ಆರೋಪಿಗಳು ಕೆಂಬತ್ತಹಳ್ಳಿಯಲ್ಲಿರುವ ಈಜುಕೊಳದಲ್ಲಿ ಚಿನ್ನಾಭರಣ ಕಳವು ಮಾಡಿದ್ದರು. ಅಲ್ಲಿ ಈಜು ಕಲಿಯಲು ಬಂದಿದ್ದ ಮಹಿಳೆಯೊಬ್ಬರು ಉಡುಪು ಬದಲಾಯಿಸುವ ಕೊಠಡಿಯಲ್ಲಿದ್ದ ಲಾಕರ್‌ನಲ್ಲಿ ಚಿನ್ನದ ಆಭರಣಗಳನ್ನಿಟ್ಟಿದ್ದರು. ಇದನ್ನು ಗಮನಿಸಿದ್ದ ಮಮತಾ ಈ ಚಿನ್ನಾಭರಣಗಳನ್ನು ಕಳವು ಮಾಡಿ ತನ್ನ ಪತಿಯ ಸ್ನೇಹಿತ ಸ್ವಾಮಿ ಎಂಬಾತನಿಗೆ ನೀಡಿ ಮಾರಾಟ ಮಾಡುವಂತೆ ತಿಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮಾರುತಿ ನಗರದ ಕಬ್ಬಾಳಮ್ಮ ದೇವಿಯ ದೇವಾಲಯದಲ್ಲಿ ಬೆಳ್ಳಿ ಮತ್ತು ಇತರ ವಸ್ತುಗಳನ್ನು ಕಳವು ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಯಾರಬ್ ನಗರದ ತೌಸಿಫ್ ಮತ್ತು ಜಮೀರ್ ಎಂಬುವರನ್ನು ಪೊಲೀಸರು ಬಂಧಿಸಿ ದೇವಸ್ಥಾನದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಇವರು ಕಳವು ಮಾಡಿದ್ದ 5 ಬೈಕ್‌ಗಳನ್ನೂ ಜಪ್ತಿ ಮಾಡಲಾಗಿದೆ ಎಂದು ತಲಘಟ್ಟಪುರ ಪೊಲೀಸರು ಹೇಳಿದ್ದಾರೆ.

ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದ 33 ವಾಹನಗಳ ವಶ

ರಾಜ್ಯ ಸರ್ಕಾರಕ್ಕೆ ತೆರಿಗೆ ಪಾವತಿಸದೆ ಸಂಚಾರಿಸುತ್ತಿದ್ದ ಹೊರ ರಾಜ್ಯಗಳ 33 ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು, 242 ಪ್ರಕರಣಗಳನ್ನು ದಾಖಲಿಸಿದ್ದಾರೆ. ಬುಧವಾರ ಹೆಚ್ಚುವರಿ ಸಾರಿಗೆ ಆಯುಕ್ತ ಸಿ.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ದೀಪಕ್ ಮತ್ತು ಕಾರ್ಯ ನಿರ್ವಾಹಕ ಅಧಿಕಾರಿಗಳನ್ನೊಳಗೊಂಡ 10 ತಂಡಗಳು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ್ದವು. ಒಂದೇ ದಿನದಲ್ಲಿ 1452 ವಾಹನಗಳನ್ನು ತಪಾಸಣೆ ನಡೆಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಇಲಾಖೆ ಮಾಹಿತಿ ನೀಡಿದೆ.

ವರದಿ: ಮಾರುತಿ ಹನುಮಂತಯ್ಯ, ಬೆಂಗಳೂರು

ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ