ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 5 ಅಂಶಗಳಿಗೆ ಆದ್ಯತೆ ನೀಡಿರುವ ಯೋಜನೆ; ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವರಣೆ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 5 ಅಂಶಗಳಿಗೆ ಆದ್ಯತೆ ನೀಡಿರುವ ಯೋಜನೆ; ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವರಣೆ

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 5 ಅಂಶಗಳಿಗೆ ಆದ್ಯತೆ ನೀಡಿರುವ ಯೋಜನೆ; ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವರಣೆ

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 5 ಅಂಶಗಳಿಗೆ ಆದ್ಯತೆ ನೀಡಿರುವ ಯೋಜನೆಯನ್ನು ಸರ್ಕಾರ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನ ಅನೇಕ ಭಾಗಗಳಿಗೆ ಭೇಟಿ ನೀಡಿದ ಬಳಿಕ ಈ ಉಪಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಿವಕುಮಾರ್ ವಿವರಿಸಿದ್ದಾರೆ.

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 5 ಅಂಶಗಳಿಗೆ ಆದ್ಯತೆ ನೀಡಿರುವ ಯೋಜನೆ ರೂಪಿಸಿರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವರಣೆ ನೀಡಿದ್ದಾರೆ.
ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 5 ಅಂಶಗಳಿಗೆ ಆದ್ಯತೆ ನೀಡಿರುವ ಯೋಜನೆ ರೂಪಿಸಿರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವರಣೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರು ಎದುರಿಸುತ್ತಿರುವ ಮೂಲಸೌಕರ್ಯ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಐದು ಅಂಶಗಳ ಕಾರ್ಯಕ್ರಮವನ್ನು ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

"ಮೂಲಸೌಕರ್ಯ ಕಾಮಗಾರಿಗಳು ಮತ್ತು ಪ್ರವಾಹ ತಡೆಗಟ್ಟುವ ಕಾರ್ಯಗಳನ್ನು ಪರಿಶೀಲಿಸಲು ಮುಖ್ಯಮಂತ್ರಿ ಮತ್ತು ನಾನು ಬೆಂಗಳೂರಿನ ಅನೇಕ ಭಾಗಗಳಿಗೆ ಭೇಟಿ ನೀಡಿದ್ದೇವೆ" ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

"ಬೆಂಗಳೂರಿನ ನಾಗರಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಚರ್ಚಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ನಗರದ ಎಲ್ಲಾ ನಿಷ್ಕ್ರಿಯ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡಲು ಮತ್ತು ಗುಣಮಟ್ಟದ ಪರೀಕ್ಷೆಗಳನ್ನು ನಡೆಸಲು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ. ಬಿಬಿಎಂಪಿಯು ಪರೀಕ್ಷಾ ವರದಿಗಳನ್ನು ಬಿಡಬ್ಲ್ಯೂಎಸ್ಎಸ್‌ಬಿಗೆ ಸಲ್ಲಿಸಬೇಕಾಗುತ್ತದೆ" ಎಂದು ಅವರು ಹೇಳಿದರು.

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 5 ಅಂಶಗಳ ಯೋಜನೆ

ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಐದು ಅಂಶಗಳ ಕಾರ್ಯಕ್ರಮ ಒಳಗೊಂಡ ಯೋಜನೆಯನ್ನು ರೂಪಿಸಿದೆ. ಅವುಗಳಲ್ಲಿ ಆದ್ಯತೆ ನೀಡಿರುವ 5 ಅಂಶಗಳು ಹೀಗಿವೆ-

1) ಕುಡಿಯುವ ನೀರು

2) ರಸ್ತೆ ಗುಂಡಿ ಮುಚ್ಚುವುದು

3) ಆಸ್ತಿ ತೆರಿಗೆ ಜಾಲ ವಿಸ್ತರಣೆ

4) ಆಸ್ತಿ ತೆರಿಗೆ ಸಂಗ್ರಹ

5) ರಾಜಕಾಲುವೆ ಒತ್ತುವರಿ ತೆರವು (ಕಾಲುವೆಗಳು ಅಥವಾ ಇತರ ಜಲಮೂಲಗಳು ಮತ್ತು ಕೆರೆಗಳು ಸೇರಿದಂತೆ ಜಲ ಸಂಪನ್ಮೂಲಗಳು)

" 182 ಕೆರೆಗಳ ಪೈಕಿ 116 ಕೆರೆಗಳ ಒತ್ತುವರಿ ಸಮೀಕ್ಷೆ ನಡೆಸಬೇಕಿದೆ. ಬಿಬಿಎಂಪಿ ಅತಿಕ್ರಮಣಗೊಂಡ ಆಸ್ತಿಗಳನ್ನು ನಕ್ಷೆ ಮಾಡಿ ಅವುಗಳನ್ನು ತೆರವುಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಸಂಸ್ಕರಿಸಿದ ನೀರಿನಿಂದ ಕೆರೆಗಳನ್ನು ತುಂಬಿಸುವ ಜವಾಬ್ದಾರಿಯನ್ನು ಬಿಡಬ್ಲ್ಯೂಎಸ್ಎಸ್ಬಿಗೆ ನೀಡಲಾಗಿದೆ. ಇದು ಅಂತರ್ಜಲವನ್ನು ಮರುಪೂರಣ ಮಾಡುತ್ತದೆ ಮತ್ತು ಬೆಂಗಳೂರಿನ ನೀರಿನ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಎಂಬ ಕಾರಣಕ್ಕಾಗಿ ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ" ಎಂದು ಡಿಕೆ ಶಿವಕುಮಾರ್ ಹೇಳಿದರು.

'ರಾಜಕಾಲುವೆ' ಒತ್ತುವರಿ ತೆರವಿಗೆ ಕೋರ್ಟ್ ನಿರ್ದೇಶನ - ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟ ನುಡಿ

'ರಾಜಕಾಲುವೆ' ಒತ್ತುವರಿಯನ್ನು ತೆರವುಗೊಳಿಸುವಂತೆ ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನಿರ್ದೇಶನದಂತೆ ಸರ್ಕಾರ 2,626 ಅತಿಕ್ರಮಣಗಳನ್ನು ಗುರುತಿಸಿದೆ. 2022-23ರ ವೇಳೆಗೆ 556 ಅತಿಕ್ರಮಣಗಳನ್ನು ತೆರವುಗೊಳಿಸಲಾಗಿದೆ. ಹಳೆಯ ಅತಿಕ್ರಮಣಗಳಲ್ಲದೆ, 1,136 ಹೊಸ ಅತಿಕ್ರಮಣಗಳನ್ನು ಗುರುತಿಸಲಾಗಿದೆ. ಈ ಅತಿಕ್ರಮಣಗಳನ್ನು ತೆರವುಗೊಳಿಸಲು ಬಿಎಂಟಿಎಫ್ ಗೆ ಸೂಚನೆ ನೀಡಲಾಗಿದೆ" ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ 5 ಸಾವಿರಕ್ಕೂ ಹೆಚ್ಚು ಗುಂಡಿಗಳಿವೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ. ಮುಂದಿನ 15 ದಿನಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ. ಶೀಘ್ರದಲ್ಲೇ ಆ್ಯಪ್ ಬಿಡುಗಡೆ ಮಾಡಲಾಗುವುದು, ಅಲ್ಲಿ ನಾಗರಿಕರು ಫೋಟೋ ಮತ್ತು ಸ್ಥಳವನ್ನು ಅಪ್ಲೋಡ್ ಮಾಡುವ ಮೂಲಕ ಅಧಿಕಾರಿಗಳಿಗೆ ಗುಂಡಿಗಳನ್ನು ವರದಿ ಮಾಡಬಹುದು" ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾಗಿ ಎಎನ್‌ಐ ವರದಿ ಮಾಡಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner