ಕನ್ನಡ ಸುದ್ದಿ  /  Karnataka  /  Bengaluru News Elderly Man Denied Entry To Namma Metro Over Dirty Clothes Netizens Angry Bangalore Metro Bmrcl Mrt

ಬಟ್ಟೆ ಕೊಳಕಾಗಿದ್ದರೆ ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸಬಾರದೆ, ನಮ್ಮ ಮೆಟ್ರೋ ಭದ್ರತಾ ಸಿಬ್ಬಂದಿ ವರ್ತನೆಗೆ ಆಕ್ರೋಶ

Bengaluru News: ಬಟ್ಟೆ ಕೊಳಕಾಗಿದ್ದರೆ ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸಬಾರದೆ ಎಂದು ನಮ್ಮ ಮೆಟ್ರೋ ಭದ್ರತಾ ಸಿಬ್ಬಂದಿ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ವಿಷಾದ ವ್ಯಕ್ತಪಡಿಸಿದ ನಮ್ಮ ಮೆಟ್ರೊ ಭದ್ರತಾ ಸೂಪರ್‌ವೈಸರ್ ಅನ್ನು ಕೆಲಸದಿಂದ ವಜಾಗೊಳಿಸಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)

ಬಟ್ಟೆ ಕೊಳಕಾಗಿದ್ದರೆ ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸಬಾರದೆ ಎಂದು ನಮ್ಮ ಮೆಟ್ರೋ ಭದ್ರತಾ ಸಿಬ್ಬಂದಿ ವರ್ತನೆಗೆ ಆಕ್ರೋಶ ವ್ಯಕ್ತವಾಗಿತ್ತು. ಹಿರಿಯ ನಾಗರಿಕರೊಬ್ಬರಿಗೆ ಕೊಳಕು ಉಡುಪು ಎಂಬ ಕಾರಣಕ್ಕೆ ಪ್ರಯಾಣಾವಕಾಶ ನಿರಾಕರಿಸಿದ್ದು ಇದಕ್ಕೆ ಕಾರಣ.
ಬಟ್ಟೆ ಕೊಳಕಾಗಿದ್ದರೆ ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸಬಾರದೆ ಎಂದು ನಮ್ಮ ಮೆಟ್ರೋ ಭದ್ರತಾ ಸಿಬ್ಬಂದಿ ವರ್ತನೆಗೆ ಆಕ್ರೋಶ ವ್ಯಕ್ತವಾಗಿತ್ತು. ಹಿರಿಯ ನಾಗರಿಕರೊಬ್ಬರಿಗೆ ಕೊಳಕು ಉಡುಪು ಎಂಬ ಕಾರಣಕ್ಕೆ ಪ್ರಯಾಣಾವಕಾಶ ನಿರಾಕರಿಸಿದ್ದು ಇದಕ್ಕೆ ಕಾರಣ.

ಬೆಂಗಳೂರು: ಕೊಳಕು ಬಟ್ಟೆ ಧರಿಸಿದ್ದಾರೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ನಮ್ಮ ಮೆಟ್ರೊದ ಭದ್ರತಾ ಸಿಬ್ಬಂದಿ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇವರು ವೃತ್ತಿಯಿಂದ ರೈತರು ಎಂದು ತಿಳಿದು ಬಂದಿದೆ.

ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹರಿದಾಡುತ್ತಿದೆ. ಘಟನೆ ಬಗ್ಗೆ ಸೋಮವಾರ (ಫೆ.26) ಸ್ಪಷ್ಟನೆ ನೀಡಿರುವ ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ, ಭದ್ರತಾ ಮೇಲ್ವಿಚಾರಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ ಎಂದು ಎಕ್ಸ್‌ ತಾಣದಲ್ಲಿ ಮಾಹಿತಿ ನೀಡಿದೆ.

ವೈರಲ್‌ ವಿಡಿಯೊದಲ್ಲಿ ಏನಿದೆ?

ರೈತನೆಂದು ಹೇಳಲಾದ ವ್ಯಕ್ತಿ ತಲೆಮೇಲೆ ಗಂಟು ಹೊತ್ತುಕೊಂಡು ಮೆಟ್ರೊ ನಿಲ್ದಾಣ ಪ್ರವೇಶಿಸಿದ್ದರು. ಈ ವ್ಯಕ್ತಿ ಕೊಳೆಯಾಗಿರುವ ಬಟ್ಟೆ ಧರಿಸಿದ್ದಾರೆಂದು ಭದ್ರತಾ ಸಿಬ್ಬಂದಿ ಮೆಟ್ರೊದಲ್ಲಿ ಪ್ರಯಾಣಿಸಲು ಅವಕಾಶ ನೀಡುತ್ತಿಲ್ಲ ಎಂದು ವ್ಯಕ್ತಿಯೊಬ್ಬರು ಸ್ಥಳದಿಂದ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದರು.

ದೀಪಕ್ ಎನ್ ಎಂಬುವವರು ಶೇರ್ ಮಾಡಿದ ವಿಡಿಯೋದಲ್ಲಿ, ಹಿರಿಯ ವ್ಯಕ್ತಿಯ ಪರವಾಗಿ ಕಾರ್ತಿಕ್ ಸಿ ಐರಾಣಿ ಎಂಬುವವರು ನಮ್ಮ ಮೆಟ್ರೋ ಭದ್ರತಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿರುವುದು ಕಂಡುಬಂದಿದೆ.

ಇವರ ಬಟ್ಟೆ ಗಲೀಜಾಗಿದೆ ಎಂಬ ಕಾರಣಕ್ಕೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಬಿಡುತ್ತಿಲ್ಲ. ಲಗೇಜ್ ಕೂಡ ಚೆಕ್ ಮಾಡಿದ್ದಾರೆ. ಅದರಲ್ಲಿ ಆಕ್ಷೇಪಾರ್ಹವೆನಿಸುವ, ನಿಷೇಧಿತ ವಸ್ತುಗಳೇನೂ ಇಲ್ಲ. ಅವರು ಮೆಟ್ರೋ ರೈಲಿನ ಟಿಕೆಟ್ ಪಡೆದುಕೊಂಡಿದ್ದಾರೆ. ಆದರೆ ಒಳ ಪ್ರವೇಶಿಸಲು ಭದ್ರತಾ ಸಿಬ್ಬಂದಿ ಬಿಡುತ್ತಿಲ್ಲ ಎಂದರೇನು?

ಅವರು ಕೊಳಕು ಬಟ್ಟೆ ಧರಿಸಿದ್ದಾರೆ ಎಂದು ಭದ್ರತಾ ಸಿಬ್ಬಂದಿ ಹೇಳುತ್ತಿರುವುದು, ಅದಕ್ಕೆ ಪ್ರತಿಯಾಗಿ, ಅವರ ಬಳಿ ದುಡ್ಡಿಲ್ಲದೆ ಇರಬಹುದು. ಹಾಗಂತ ಪ್ರಯಾಣ ನಿರಾಕರಿಸುವುದು ಸರಿಯೇ ಎಂದು ತರಾಟೆಗೆ ತೆಗೆದುಕೊಂಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಈ ವ್ಯಕ್ತಿಯನ್ನು ಒಳಗೆ ಬಿಡಬೇಕು ಎಂದು ವಿಡಿಯೊ ಮಾಡುತ್ತಿದ್ದವರು ಹಾಗೂ ಸ್ಥಳದಲ್ಲಿದ್ದ ಇತರ ಪ್ರಯಾಣಿಕರು ಭದ್ರತಾ ಸಿಬ್ಬಂದಿಯನ್ನು ಅಗ್ರಹಪಡಿಸಿದ್ದರು. ಒತ್ತಡಕ್ಕೆ ಮಣಿದ ಭದ್ರತಾ ಸಿಬ್ಬಂದಿ ಅವರಿಗೆ ಮೆಟ್ರೊದಲ್ಲಿ ಪ್ರಯಾಣಿಸಲು ಬಿಟ್ಟಿದ್ದರು.

ವಿಡಿಯೋ ಬಗ್ಗೆ ಪ್ರತಿಕ್ರಿಯೆ ಏನು

ಈ ವಿಡಿಯೋವನ್ನು 40 ಸಾವಿರಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದು, 300ಕ್ಕೂ ಹೆಚ್ಚು ಜನ ಪ್ರತಿಕ್ರಿಯೆ ನೀಡಿದ್ದಾರೆ. ಅನೇಕರು ಆ ವಯೋವೃದ್ಧ ವ್ಯಕ್ತಿಗೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವುದಕ್ಕೆ ಅವಕಾಶ ಸಿಕ್ಕಿತಾ ಇಲ್ಲವಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಕಾರ್ತಿಕ್ ಸಿ ಐರಾಣಿ ನಡೆಯನ್ನು ಬಹಳ ಜನ ಶ್ಲಾಘಿಸಿದ್ದಾರೆ. ಅಲ್ಲದೆ, ಮೆಟ್ರೋ ಭದ್ರತಾ ಸಿಬ್ಬಂದಿ ವರ್ತನೆಯನ್ನು ಖಂಡಿಸಿದ್ದಾರೆ. ರೈತ ಪರ ಧ್ವನಿಯೂ ವ್ಯಕ್ತವಾಗಿದೆ.

ಈ ಘಟನೆ ಬಗ್ಗೆ ನಮ್ಮ ಮೆಟ್ರೊದ ಭದ್ರತಾ ಸಿಬ್ಬಂದಿ ವರ್ತನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊನೆಗೆ ಮೆಟ್ರೋ ವಿಷಾದ ವ್ಯಕ್ತಪಡಿಸಿದೆ.

(ವರದಿ- ಎಚ್. ಮಾರುತಿ, ಬೆಂಗಳೂರು)

(This copy first appeared in Hindustan Times Kannada website. To read more like this please logon to kannada.hindustantimes.com)