Gandhi Jayanti; ಬೆಂಗಳೂರು ನಗರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್, ಬಾಪೂಜಿ ಬಗ್ಗೆ ಪ್ರಬಂಧ ಬರೆದು ಆಕರ್ಷಕ ನಗದು ಬಹುಮಾನ ಗೆಲ್ಲಿ-bengaluru news good news for bengaluru urban students cash prizes awarded for best essays on bapuji gandhi jayanti uks ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Gandhi Jayanti; ಬೆಂಗಳೂರು ನಗರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್, ಬಾಪೂಜಿ ಬಗ್ಗೆ ಪ್ರಬಂಧ ಬರೆದು ಆಕರ್ಷಕ ನಗದು ಬಹುಮಾನ ಗೆಲ್ಲಿ

Gandhi Jayanti; ಬೆಂಗಳೂರು ನಗರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್, ಬಾಪೂಜಿ ಬಗ್ಗೆ ಪ್ರಬಂಧ ಬರೆದು ಆಕರ್ಷಕ ನಗದು ಬಹುಮಾನ ಗೆಲ್ಲಿ

Bengaluru News; ಬೆಂಗಳೂರು ನಗರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಒಂದು ಗುಡ್‌ ನ್ಯೂಸ್ ಇದೆ. ಗಾಂಧಿ ಜಯಂತಿ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಪ್ರಬಂಧ ಸ್ಪರ್ಧೆಗೆ ಬಾಪೂಜಿ ಬಗ್ಗೆ ಪ್ರಬಂಧ ಬರೆದು ಆಕರ್ಷಕ ನಗದು ಬಹುಮಾನ ಗೆಲ್ಲಿ. ಇಲ್ಲಿದೆ ಸ್ಪರ್ಧೆಯ ವಿವರ.

ಬೆಂಗಳೂರು ನಗರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಒಂದು ಗುಡ್‌ ನ್ಯೂಸ್, ಬಾಪೂಜಿ ಬಗ್ಗೆ ಪ್ರಬಂಧ ಬರೆದು ಆಕರ್ಷಕ ನಗದು ಬಹುಮಾನ ಗೆಲ್ಲಿ. (ಸಾಂಕೇತಿಕ ಚಿತ್ರ)
ಬೆಂಗಳೂರು ನಗರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಒಂದು ಗುಡ್‌ ನ್ಯೂಸ್, ಬಾಪೂಜಿ ಬಗ್ಗೆ ಪ್ರಬಂಧ ಬರೆದು ಆಕರ್ಷಕ ನಗದು ಬಹುಮಾನ ಗೆಲ್ಲಿ. (ಸಾಂಕೇತಿಕ ಚಿತ್ರ)

ಬೆಂಗಳೂರು: ಮಹಾತ್ಮ ಗಾಂಧಿ ಅವರ 155ನೇ ಜಯಂತಿ ಆಚರಣೆ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರ ನಗರ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂದ್ಧ ಸ್ಪರ್ಧೆಯನ್ನು ಹಮ್ಮಿಕೊಂಡಿದೆ.

ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧಿಯವರ ಬದುಕು, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು, ಸ್ವಾತಂತ್ರ್ಯ ಚಳುವಳಿ ಇತ್ಯಾದಿ ವಿಚಾರಗಳ ಬಗ್ಗೆ ಅರಿವು ಮೂಡಿಸಲು ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಮೂರು ಪ್ರತ್ಯೇಕ ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಂಡು ವಿಜೇತರಾದವರಿಗೆ ಜಿಲ್ಲಾಮಟ್ಟದಲ್ಲಿ ಪ್ರಥಮ ಬಹುಮಾನ 3,000 ರೂಪಾಯಿ, ದ್ವಿತೀಯ ಬಹುಮಾನ 2,000 ರೂಪಾಯಿ ಹಾಗೂ ತೃತೀಯ ಬಹುಮಾನ 1,000 ರೂಪಾಯಿ ನಗದು ಹಾಗೂ ಪ್ರಮಾಣ ಪತ್ರವನ್ನು ಅಕ್ಟೋಬರ್ 02 ರಂದು ನಡೆಯುವ ಜಿಲ್ಲಾ ಮಟ್ಟದ ಗಾಂಧೀ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ವಿತರಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಮೂರು ವಿಭಾಗಗಳ ಜಿಲ್ಲಾ ಮಟ್ಟದ ಅತ್ಯುತ್ತಮ ಪ್ರಬಂಧ ರಾಜ್ಯಮಟ್ಟದ ಸ್ಪರ್ಧೆಗೆ

ಪ್ರಬಂಧ ವಿಷಯಗಳಿವು

ಪ್ರೌಢ ಶಾಲಾ ವಿಭಾಗ :

1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ,

2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ,

3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ,

4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗ್ಗೆ

ಯಾವುದಾದರೂ ಒಂದು ವಿಷಯವನ್ನು ಆಯ್ದುಕೊಂಡು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ ರಚಿಸಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ :

1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ,

2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು,

3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ,

4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವುದು

ಯಾವುದಾದರೂ ಒಂದು ವಿಷಯವನ್ನು ಆಯ್ದುಕೊಂಡು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ:

1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ,

2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು,

3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು,

4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ,

5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು

ಈ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಸೆ.10ರೊಳಗೆ ನಡೆಯಲಿದೆ ಪ್ರಬಂಧ ಸ್ಪರ್ಧೆ

ಶಾಲಾ ಕಾಲೇಜುಗಳಲ್ಲಿ ಸೆಪ್ಟೆಂಬರ್ 10ರ ಒಳಗೆ ನಡೆಯುವ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿರುವ ಬೆಂಗಳೂರು ನಗರ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕಿ ಪಲ್ಲವಿ ಹೊನ್ನಾಪುರ, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಶಾಲಾ-ಕಾಲೇಜು ಮುಖ್ಯಸ್ಥರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.