ಬಿರುಗಾಳಿ ಸಹಿತ ಭಾರಿ ಮಳೆ ಎಫೆಕ್ಟ್; ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ 17 ವಿಮಾನಗಳು ಚೆನ್ನೈ ಏರ್ಪೋರ್ಟ್‌ನಲ್ಲಿ ಲ್ಯಾಂಡಿಂಗ್
ಕನ್ನಡ ಸುದ್ದಿ  /  ಕರ್ನಾಟಕ  /  ಬಿರುಗಾಳಿ ಸಹಿತ ಭಾರಿ ಮಳೆ ಎಫೆಕ್ಟ್; ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ 17 ವಿಮಾನಗಳು ಚೆನ್ನೈ ಏರ್ಪೋರ್ಟ್‌ನಲ್ಲಿ ಲ್ಯಾಂಡಿಂಗ್

ಬಿರುಗಾಳಿ ಸಹಿತ ಭಾರಿ ಮಳೆ ಎಫೆಕ್ಟ್; ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ 17 ವಿಮಾನಗಳು ಚೆನ್ನೈ ಏರ್ಪೋರ್ಟ್‌ನಲ್ಲಿ ಲ್ಯಾಂಡಿಂಗ್

ಮೇ 9ರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆ ವಿಮಾನಗಳ ಹಾರಾಟದ ಮೇಲೂ ಪರಿಣಾಮ ಬೀರಿದೆ. ರಾತ್ರಿ 9.35 ರಿಂದ 10.29ರ ವರೆಗೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳನ್ನು ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೆ ಚೆನ್ನೈಗೆ ತಿರುಗಿಸಲಾಗಿದೆ.

ಹವಾಮಾನ ವೈಪರೀತ್ಯದಿಂದ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ 17 ವಿಮಾನಗಳನ್ನು ಚೆನ್ನೈ ಏರ್ಪೋರ್ಟ್‌ಗೆ ತಿರುಗಿಸಲಾಗಿದೆ. ಮೇ 9ರ ಗುರುವಾರ ರಾತ್ರಿ ಈ ಘಟನೆ ನಡೆದಿದೆ.
ಹವಾಮಾನ ವೈಪರೀತ್ಯದಿಂದ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ 17 ವಿಮಾನಗಳನ್ನು ಚೆನ್ನೈ ಏರ್ಪೋರ್ಟ್‌ಗೆ ತಿರುಗಿಸಲಾಗಿದೆ. ಮೇ 9ರ ಗುರುವಾರ ರಾತ್ರಿ ಈ ಘಟನೆ ನಡೆದಿದೆ. (AFP)

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore Rain) ಗುರುವಾರ (ಮೇ 9) ಸುರಿದ ಬಿರುಗಾಳಿ ಸಹಿತ ಮಳೆ ಭಾರಿ ಅವಾಂತರಗಳನ್ನು ಸೃಷ್ಟಿಮಾಡಿತ್ತು. ರಸ್ತೆಗಳಲ್ಲಿ ಮಳೆ ನೀರು ಉಕ್ಕಿ ಹರಿದ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು. ಧಾರಾಕಾರವಾಗಿ ಸುರಿದ ಮಳೆ ವಾಹನಗಳಿಗೆ ಮಾತ್ರವಲ್ಲದೆ, ವಿಮಾನಗಳ ಹಾರಾಟಕ್ಕೂ ಅಡ್ಡಿಯುಂಟು ಮಾಡಿದೆ. ಹವಾಮಾನ ವೈಪರೀತ್ಯದಿಂದ ರಾತ್ರಿ (ಮೇ 9, ಗುರುವಾರ) 9.35 ರಿಂದ 10.29 ರವರೆಗಿನ ಅವಧಿಯಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಲ್ಲಿ (Kempegowda International Airport) ಇಳಿಯಬೇಕಾಗಿದ್ದ 17 ವಿಮಾನಗಳನ್ನು (17 Flights Diverted) ಚೆನ್ನೈ ಏರ್ಪೋರ್ಟ್‌ಗೆ (Chennai Airport) ತಿರುಗಿಸಲಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬಿರುಗಾಳಿ ಸಹಿತ ಭಾರಿ ಮಳೆಯಾದ ಕಾರಣ ವಿಮಾನಗಳು ಲ್ಯಾಂಡಿಂಗ್ ಆಗಲು ಪರದಾಟ ನಡೆಸಿವೆ. ಅಂತಿಮವಾಗಿ ನಿಲ್ದಾಣದಲ್ಲಿ ಇಳಿಸಲಾಗದೆ ಚೆನ್ನೈಗೆ ಡೈವರ್ಟ್ ಮಾಡಲಾಯಿತು ಎಂದು ವರದಿಯಾಗಿದೆ. ಬೆಂಗಳೂರಿನಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ತಿರುಗಿಸಲಾದ ವಿಮಾನಗಳ ಪೈಕಿ 13 ದೇಶಿಯ ವಿಮಾನಗಳು, 3 ಅಂತಾರಾಷ್ಟೀಯ ಪ್ರಯಾಣಿಕ ವಿಮಾನಗಳು ಹಾಗೂ 1 ಸರಕು ತುಂಬಿದ್ದ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನವಾಗಿದೆ ಎಂದು ಕೆಐಎಎಲ್ ವಕ್ತಾರರು ಮಾಹಿತಿ ನೀಡಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರು ಏಪ್ರಿಲ್ ತಿಂಗಳಲ್ಲಿ ದಾಖಲೆಯ ಪ್ರಮಾಣದ ತಾಪಮಾನವನ್ನು ಕಂಡಿತ್ತು. ರಣ ಬಿಸಿಲಿಗೆ ಜನ ತತ್ತರಿಸಿದ್ದರು. ಆದರೆ ಕಳೆದ ನಾಲ್ಕೈದು ದಿನಗಳಿಂದ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಸಂಜೆಯ ವೇಳೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲಸ ಮುಗಿಸಿಕೊಂಡು ಮನೆಗಳಿಗೆ ತಲುಪಲು ಜನ ಪರದಾಡುವಂತಾಗಿದೆ.

ಮಳೆಯಿಂದ ಕೆಲವೊಂದು ರಸ್ತೆಗಳಲ್ಲಿ ಮಳೆ ನೀರು ಉಕ್ಕಿ ಹರಿದಿದೆ. ಬಿರುಗಾಳಿಗೆ ನಗರದಲ್ಲಿನ ನೂರಾರು ಮರದ ಕೊಂಬೆಗಳು ಮುರಿದು ರಸ್ತೆ ಮೇಲೆ ಬಿದ್ದಿವೆ. ಬಿಬಿಎಂಪಿ ಸಿಬ್ಬಂದಿ ಇವುಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಇಂದು (ಮೇ 10, ಶುಕ್ರವಾರ) ಮತ್ತು ನಾಳೆ (ಮೇ 11, ಶನಿವಾರ) ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

Whats_app_banner