ಬೆಂಗಳೂರು ಸಂಚಾರ ಸಲಹೆ; ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ, ಕೆಆರ್‌ಪುರ ಅಪ್ ರ‍್ಯಾಂಪ್ ಬಂದ್, 5 ಪರ್ಯಾಯ ಮಾರ್ಗಗಳ ವಿವರ ಹೀಗಿದೆ
ಬೆಂಗಳೂರು ಸಂಚಾರ ಸಲಹೆ; ಬೆಂಗಳೂರಿನ ಪ್ರಮುಖ ರಸ್ತೆ ಸಂಪರ್ಕವಾಗಿರುವ ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಹೀಗಾಗಿ ಮಂಗಳವಾರ (ಮೇ 14) ದಿಂದ ಕೆಆರ್‌ಪುರ ಅಪ್ ರ‍್ಯಾಂಪ್ ಬಂದ್ ಆಗಿದೆ. ವಾಹನ ಸವಾರರು ನಗರ ಪ್ರವೇಶಿಸಲು ಬಳಸಬಹುದಾದ 5 ಪರ್ಯಾಯ ಮಾರ್ಗಗಳ ವಿವರ ಹೀಗಿದೆ.
ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಗೆ (Hebbal flyover) ಎರಡು ಹೊಸ ಟ್ರ್ಯಾಕ್‌ಗಳನ್ನು ಅಳವಡಿಸುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಾಮಗಾರಿಯ ಹಿನ್ನೆಲೆಯಲ್ಲಿ ಕೆ.ಆರ್.ಪುರ ಕಡೆಯಿಂದ ಬರುವ ಅಪ್ ರ‍್ಯಾಂಪ್ ಅನ್ನು ಮಂಗಳವಾರದಿಂದ (ಮೇ 14) ಮುಚ್ಚಲಾಗಿದೆ. ಹೀಗಾಗಿ ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲ ಮಾದರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಏಪ್ರಿಲ್ 17ರಿಂದ ಕೆ.ಆರ್.ಪುರ ಲೂಪ್ ಸೇರುವ ಟ್ರ್ಯಾಕ್‌ನಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲ ವಾಹನ ಸಂಚಾರ ನಿರ್ಬ೦ಧಿಸಲಾಗಿತ್ತು. ಇದೀಗ ನಾಗವಾರ ಕಡೆಯಿಂದ ಹೆಬ್ಬಾಳ ಮೇಲೇತುವೆ ಕಡೆಗೆ ಬರುವ ಎಲ್ಲ ಮಾದರಿ ವಾಹನಗಳ ಸಂಚಾರವನ್ನು ನಿಬಂಧಿಸಿ, ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.
ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ; 5 ಪರ್ಯಾಯ ಮಾರ್ಗಗಳ ವಿವರ
1. ನಾಗವಾರ(ಔಟರ್‌ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇ ಸರ್ಕಲ್ ಮುಖಾಂತರ ಸಂಚರಿಸುವ ವಾಹನಗಳು ಹೆಬ್ಬಾಳ ಸರ್ಕಲ್‌ನಲ್ಲಿ ಫೈ ಓವರ್ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೇಹಳ್ಳಿ ಜಂಕ್ಷನ್ ಬಳಿ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಫೈಓವರ್‌ನ ರಾಂಪ್ ಮುಖೇನ ನಗರದ ಕಡೆಗೆ ಚಲಿಸಬಹುದಾಗಿರುತ್ತದೆ.
2. ಕೆ.ಆರ್. ಪುರಂ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ಈ ಕೆಳಕಂಡ ರಸ್ತೆಗಳ ಮೂಲಕ ಅಂದರೆ ಐ.ಓ.ಸಿ.-ಮುಕುಂದ ಥಿಯೇಟರ್ ರಸ್ತೆ, ಲಿಂಗರಾಜಪುರ ಮೇಲೇತುವೆ ಮಾರ್ಗ, ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ ನಗರ ಪ್ರವೇಶಿಸಬಹುದಾಗಿದೆ.
3. ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನಗಳು ಜಿ.ಕೆ.ವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.
4. ಕೆ.ಆರ್.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಪ್ರೈಓವರ್ ಕೆಳಗಡೆ ನೇರವಾಗಿ ಬಿ.ಇ.ಎಲ್. ಸರ್ಕಲ್ ತಲುಪಿ ಎಡತಿರುವು ಪಡೆದು ಸದಾಶಿವನಗರ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಐ.ಐ.ಎಸ್.ಸಿ. ಮುಖಾಂತರ ಚಲಿಸಬಹುದಾಗಿದೆ.
5. ಕೆ.ಆರ್.ಪುರಂ, ಹೆಣ್ಣೂರು, ಹೆಚ್.ಆರ್.ಬಿ.ಆರ್. ಲೇಔಟ್, ಕೆ.ಜಿ.ಹಳ್ಳಿ, ಬಾಣಸವಾಡಿ ಕಡೆಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಂಚರಿಸುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯ ಮುಖಾಂತರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬಹುದಾಗಿದೆ.
ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ; ಕೆಆರ್‌ಪುರ ಅಪ್ ರ‍್ಯಾಂಪ್ ಬಂದ್ ಕುರಿತು ಸಂಚಾರ ಸಲಹೆ ವಿಡಿಯೋ
ಬೆಂಗಳೂರು ಸಂಚಾರ ಪೊಲೀಸ್ ಜಂಟಿ ಪೊಲೀಸ್ ಆಯುಕ್ತ ಎಂ ಎನ್ ಅನುಚೇತ್ ಕೂಡ ನಿನ್ನೆ (ಮೇ 14) ಕೆಆರ್‌ಪುರ ಅಪ್ ರ‍್ಯಾಂಪ್ ಬಂದ್ ಕುರಿತು ಮಾತನಾಡಿ ಪರ್ಯಾಯ ಮಾರ್ಗಗಳ ಕುರಿತಾಗಿ ಸ್ಪಷ್ಟ ವಿವರ ನೀಡಿದರು.
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.