ಇದು ರಿಪೀಟ್ ಆಗ್ಬಾರ್ದು, ಹುಷಾರ್​; ಕಷ್ಟ ಹೇಳ್ಕೊಳಲು ಬಂದವ್ರ ಮೇಲೆ ರೇಗಾಡಿದ್ದ ಇನ್‌ಸ್ಪೆಕ್ಟರ್​ಗೆ ಪರಮೇಶ್ವರ ತರಾಟೆ-bengaluru news home minister g parameshwara warns police inspector for irresponsible behavior with people prs ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಇದು ರಿಪೀಟ್ ಆಗ್ಬಾರ್ದು, ಹುಷಾರ್​; ಕಷ್ಟ ಹೇಳ್ಕೊಳಲು ಬಂದವ್ರ ಮೇಲೆ ರೇಗಾಡಿದ್ದ ಇನ್‌ಸ್ಪೆಕ್ಟರ್​ಗೆ ಪರಮೇಶ್ವರ ತರಾಟೆ

ಇದು ರಿಪೀಟ್ ಆಗ್ಬಾರ್ದು, ಹುಷಾರ್​; ಕಷ್ಟ ಹೇಳ್ಕೊಳಲು ಬಂದವ್ರ ಮೇಲೆ ರೇಗಾಡಿದ್ದ ಇನ್‌ಸ್ಪೆಕ್ಟರ್​ಗೆ ಪರಮೇಶ್ವರ ತರಾಟೆ

G Parameshwara: ದರ್ಶನ್ ಅವರನ್ನು ಎ1 ಆರೋಪಿ ಮಾಡುತ್ತಾರೆ ಎಂಬ ಊಹಾಪೋಹಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ ಪರಮೇಶ್ವರ ಅವರು ಸಾಕ್ಷ್ಯಾಧಾರ ಆಧರಿಸಿ ಯಾರನ್ನು ಎ1, ಎ2 ಆರೋಪಿಗಳನ್ನಾಗಿಸಬೇಕು ಎಂಬುದನ್ನು ತನಿಖಾಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.

ಕಷ್ಟ ಹೇಳ್ಕೊಳಲು ಬಂದವ್ರ ಮೇಲೆ ರೇಗಾಡಿದ್ದ ಇನ್‌ಸ್ಪೆಕ್ಟರ್​ಗೆ ಪರಮೇಶ್ವರ ತರಾಟೆ
ಕಷ್ಟ ಹೇಳ್ಕೊಳಲು ಬಂದವ್ರ ಮೇಲೆ ರೇಗಾಡಿದ್ದ ಇನ್‌ಸ್ಪೆಕ್ಟರ್​ಗೆ ಪರಮೇಶ್ವರ ತರಾಟೆ

ಬೆಂಗಳೂರು: ತಮ್ಮ ಕುಂದು-ಕೊರತೆ ಹಾಗೂ ಕಷ್ಟವನ್ನು ಹೇಳಿಕೊಳ್ಳಲು ಬಂದಿದ್ದ ಜನರ ಮೇಲೆ ದಬ್ಬಾಳಿಕೆ ಮಾಡಿದ್ದ ಮತ್ತು ರೇಗಾಡಿದ್ದ ಸದಾಶಿವನಗರ ಪೊಲೀಸ್​ ಇನ್‌ಸ್ಪೆಕ್ಟರ್​ ಗಿರೀಶ್​ಗೆ ಗೃಹ ಸಚಿವ ಜಿ ಪರಮೇಶ್ವರ ತರಾಟೆ ತೆಗೆದುಕೊಂಡಿದ್ದಾರೆ. ಇನ್ಮುಂದೆ ಈ ರೀತಿ ಮಾಡಬೇಡಿ ಹುಷಾರ್ ಎಂದು ಸೂಚಿಸಿದ್ದಾರೆ. ಗೃಹ ಸಚಿವ ಪರಮೇಶ್ವರ್ ಅವರ ಮನೆ ಬಳಿ ಈ ಘಟನೆ ನಡೆದಿದೆ.

ಗೃಹ ಸಚಿವರ ಮನೆ ಬಳಿ ಮನವಿ ನೀಡಲು ಬಂದಿದ್ದರು. ಆದರೆ ಅವರನ್ನು ಇನ್​ಸ್ಪೆಕ್ಟರ್ ಕರೆದೊಯ್ದಲ್ಲದೆ, ಕೂಗಾಡಿದ್ದರು. ಅಮಾನವೀಯವಾಗಿ ನಡೆದುಕೊಂಡಿದ್ದು. ಈ ಬಗ್ಗೆ ಮಾಧ್ಯಮದವರು ಪ್ರಸ್ತಾಪಿಸುತ್ತಿದ್ದಂತೆ, ಪರಮೇಶ್ವರ ಅವರು ತನ್ನ ಹಿಂದೆಯೇ ಇದ್ದ ಗಿರೀಶ್​ಗೆ ತರಾಟೆಗೆ ತೆಗೆದುಕೊಂಡರು. ಜನರು ಆಹ್ವಾಲು ನೀಡಲು ಬಂದಾಗ ಸುಮ್ಮನೆ ನಿಂತುಕೊಂಡು ನೋಡಬೇಕು.‌ ಇನ್ನೊಮ್ಮೆ ಆ ರೀತಿ ನಡೆದುಕೊಳ್ಳದಂತೆ ಸೂಚಿಸಿದರು.

ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ, ಬಗೆಹರಿಯುತ್ತದೆ ಎಂಬ ಉದ್ದೇಶದಿಂದ ನಮ್ಮ ಭೇಟಿಗೆ ಬರುತ್ತಾರೆ. ನಮ್ಮ ಬಳಿಗೆ ಬಾರದಿದ್ದರೆ, ಇನ್ಯಾರ ಬಳಿ ಹೋಗಲು ಸಾಧ್ಯ. ಮುಂದೆ ಮತ್ತೆ ರಿಪೀಟ್ ಆಗಬಾರದು ಎಂದು ಸದಾಶಿವನಗರ ಠಾಣೆ ಇನ್‌ಸ್ಪೆಕ್ಟರ್‌ಗೆ ತಾಕೀತು ಮಾಡಿದರು. ಇನ್ಮುಂದೆ ಇದು ರಿಪೀಟ್ ಆಗಬಾರದು, ಎಚ್ಚರ ಎಂದು ಸೂಚಿಸಿದ್ದಾರೆ.

ದರ್ಶನ್ 1 ಆರೋಪಿ ಆಗ್ತಾರಾ?

ಇದೇ ವೇಳೆ ಸದಾಶಿವನಗರದ ನಿವಾಸದ ಬಳಿ ದರ್ಶನ್ ಅವರನ್ನು ಎ1 ಆರೋಪಿ ಮಾಡುತ್ತಾರೆ ಎಂಬ ಊಹಾಪೋಹಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ‌ ಪ್ರಕರಣದಲ್ಲಿ ಸಾಕ್ಷ್ಯಾಧಾರ ಆಧರಿಸಿ ಯಾರನ್ನು ಎ1, ಎ2 ಆರೋಪಿಗಳನ್ನಾಗಿಸಬೇಕು ಎಂಬುದನ್ನು ತನಿಖಾಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.

ರೇಣುಕಾಸ್ವಾಮಿ ಕುಟುಂಬಸ್ಥರು ನಮ್ಮಿಂದ ನ್ಯಾಯವನ್ನು ನಿರೀಕ್ಷೆ ಮಾಡಬಹುದು. ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಕೋರ್ಟ್‌ನಲ್ಲಿ ಸಹ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದೇ ವೇಳೆ ಸಿದ್ಧಾರ್ಥ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ಹಂಚಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಅನವಶ್ಯಕ ಆಪಾದನೆ ತಪ್ಪು ಎಂದ ಪರಂ

ಸಿದ್ಧಾರ್ಥ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ಹಂಚಿಕೆ ಕುರಿತು ಸಚಿವ ಎಂಬಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಕಾನೂನು ಬಾಹಿರವಾಗಿ ಹಂಚಿಕೆ ಮಾಡಿಲ್ಲ. ಪರಿಶೀಲನೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕಾದವರು ರಾಜ್ಯಪಾಲರು. ಸಾವಿರಾರು ಜನ ದೂರು ಕೊಡುತ್ತಾರೆ. ಪರಿಶೀಲನೆ ನಡೆಸಿದ ಬಳಿಕ ಸತ್ಯಾಸತ್ಯತೆ ಗೊತ್ತಾಗುತ್ತದೆ. ಅನಾವಶ್ಯಕವಾಗಿ ಆಪಾದನೆ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮೊದಲಿಂದಲೂ ಹೇಳುತ್ತಿದ್ದೇವೆ. ರಾಜಕೀಯ ಉದ್ದೇಶ ಇಟ್ಟುಕೊಂಡು ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ನಾವು ಜನರ ಮುಂದೆ ಸತ್ಯಸತ್ಯಾತೆ ಇಡುತ್ತೇವೆ. ನಾವು ಯಾವುದನ್ನು ಕೂಡ ಕಾನೂನು ಬಾಹಿರವಾಗಿ ಮಾಡಿಲ್ಲ ಎಂಬುದನ್ನು ಈಗಾಗಲೇ ಕೋರ್ಟ್‌ಗೆ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

ಬಿಟ್ ಕಾಯಿನ್, ವಾಲ್ಮೀಕಿ, ಕೋವಿಡ್ ಸಂದರ್ಭದಲ್ಲಿ ನಡೆದ ಅಕ್ರಮ ಸೇರಿದಂತೆ ಎಲ್ಲ ಪ್ರಕರಣಗಳ ಪರಿಶೀಲನೆ ನಡೆಯುತ್ತಿದೆ. ಎಸ್‌ಐಟಿಗೆ ವಹಿಸಿರುವ ಮತ್ತು ಸಿಐಡಿ ಕೈಗೊಂಡಿರುವ ಪ್ರಕರಣಗಳ ತನಿಖೆ ಯಾವ ಹಂತದಲ್ಲಿವೆ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದೇನೆ. ಈ ಎಲ್ಲ ಪ್ರಕರಣಗಳ ರಿವ್ಯೂವ್ ನಡೆಸಲು ಮುಂದಿನ‌ ದಿನಗಳಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೈಕಮಾಂಡ್ ಭೇಟಿ ಅದೊಂದು ಸಂಪ್ರದಾಯ

ಸಚಿವ ಸತೀಶ್ ಜಾರಕಿಹೊಳಿ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ, ದೆಹಲಿಗೆ ಹೋದಾಗ ಹೈಕಮಾಂಡ್ ಭೇಟಿ ಮಾಡುವುದು ಪಕ್ಷದ ಸಂಪ್ರದಾಯ. ಆ ಸಂಪ್ರದಾಯಕ್ಕೆ ಹೋಗಿರುತ್ತಾರೆ. ಎಲ್ಲದಕ್ಕು ರಾಜಕೀಯ ಬಣ್ಣ ಕಟ್ಟುವ ಅಗತ್ಯವಿಲ್ಲ ಎಂದಿದ್ದಾರೆ.

ಹೈಕಮಾಂಡ್ ಬೇರೆಬೇರೆ ಕೆಲಸಗಳನ್ನು ಒಪ್ಪಿಸಿರುತ್ತದೆ‌. ನನಗೆ ಸೋಷಿಯಲ್ ಮೀಡಿಯಾ ಟ್ವೀಟರ್, ಫೇಸ್ಬುಕ್‌ನಲ್ಲಿ ವೈಯಕ್ತಿಕ ನಿಂದನೆಯ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಇದರಿಂದ ಗೌರವಕ್ಕೆ ಧಕ್ಕೆಯಾಗುತ್ತಿದೆ ಎಂದು ಹೇಳಿದ್ದರು. ಇದೇ ವಿಚಾರಕ್ಕೆ ನಾನು ಭೇಟಿಯಾಗಿದ್ದೆ. ಅದನ್ನು ಬೇರೆ ತರ ಅರ್ಥೈಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.