ಕನ್ನಡ ಸುದ್ದಿ  /  ಕರ್ನಾಟಕ  /  Hd Revanna: ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಬಂಧನ; ಮಾಜಿ ಪ್ರಧಾನಿ ದೇವೇಗೌಡರ ಪುತ್ರನ ವಿರುದ್ಧ ಅಪಹರಣ ಕೇಸ್, ತಿಳಿಯಬೇಕಾದ 10 ಅಂಶಗಳಿವು

HD Revanna: ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಬಂಧನ; ಮಾಜಿ ಪ್ರಧಾನಿ ದೇವೇಗೌಡರ ಪುತ್ರನ ವಿರುದ್ಧ ಅಪಹರಣ ಕೇಸ್, ತಿಳಿಯಬೇಕಾದ 10 ಅಂಶಗಳಿವು

ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ತನ್ನ ತಾಯಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯ ಮಗ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಅಪಹರಣ ಕೇಸ್‌ನಲ್ಲಿ ರೇವಣ್ಣ ಬಂಧನವಾಗಿದೆ. ಪ್ರಕರಣದ 10 ಪ್ರಮುಖ ಅಂಶಗಳಿವು.

ಕೆಆರ್ ನಗರದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ರೇವಣ್ಣ ವಿರುದ್ಧ ಸಂತ್ರಸ್ತೆಯನ್ನು ಅಪಹರಿಸಿದ ಆರೋಪವಿದೆ.
ಕೆಆರ್ ನಗರದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ರೇವಣ್ಣ ವಿರುದ್ಧ ಸಂತ್ರಸ್ತೆಯನ್ನು ಅಪಹರಿಸಿದ ಆರೋಪವಿದೆ. (ANI)

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊದಲ್ಲಿದ್ದ (Prajwal Revanna Sex Scandal Case) ಇದ್ದವರು ಎನ್ನಲಾದ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ (JDS MLA HD Revanna) ಅವರನ್ನು ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಶನಿವಾರ (ಮೇ 4) ಬಂಧಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೂಡಲೇ ಅವರನ್ನು ರೇವಣ್ಣ ಅವರನ್ನ ಬಂಧಿಸಲಾಯಿತು.

ಟ್ರೆಂಡಿಂಗ್​ ಸುದ್ದಿ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (Ex PM HD Deve Gowda) ಅವರ ಪದ್ಮನಾಭನಗರ ನಿವಾಸದಿಂದ ಶಾಸಕ ಎಚ್.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದು ಎಸ್ಐಟಿ ಕಚೇರಿಗೆ ಕರೆತರಲಾಯಿತು. ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಎಚ್.ಡಿ.ರೇವಣ್ಣ ಮತ್ತು ಅವರ ಆಪ್ತ ಸತೀಶ್ ಬಾಬಣ್ಣ ವಿರುದ್ಧ ಗುರುವಾರ ರಾತ್ರಿ ಮೈಸೂರಿನಲ್ಲಿ ಪ್ರಕರಣ ದಾಖಲಾಗಿತ್ತು.

ಏನಿದು ಎಚ್.ಡಿ.ರೇವಣ್ಣ ವಿರುದ್ಧದ ಅಪಹರಣ ಪ್ರಕರಣ?

  1. ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವಿಡಿಯೊಗಳು ವೈರಲ್ ಆಗಿದ್ದವು.
  2. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮಹಿಳೆ ಏಪ್ರಿಲ್ 28 ರಂದು ಕಾಣೆಯಾದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಎಚ್.ಡಿ.ರೇವಣ್ಣ ಅವರ ನಿರ್ದೇಶನದಂತೆ ಸತೀಶ್ ತನ್ನ ತಾಯಿಯನ್ನು ಅಪಹರಿಸಿದ್ದಾನೆ ಎಂದು ಸಂತ್ರಸ್ತೆಯ ಪುತ್ರ ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಅವರನ್ನ ಗುರುವಾರ (ಮೇ 3) ಬಂಧಿಸಲಾಗಿತ್ತು.
  3. ಭವಾನಿ ರೇವಣ್ಣ ಅವರು ಕರೆಯುತ್ತಿದ್ದಾರೆಂದು ಹೇಳಿ ಸಂತ್ರಸ್ತ ಮಹಿಳೆಯನ್ನು ಭವಾನಿ ರೇವಣ್ಣ ಅವರ ಸಂಬಂಧಿ ಸತೀಶ್ ಕರೆದೊಯ್ದಿದ್ದರು.
  4. ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿರುವ ಎಚ್‌ಡಿ ರೇವಣ್ಣ ಅವರ ಆಪ್ತ ಸಹಾಯಕ ರಾಜಶೇಖರ್ ಅವರ ತೋಟದ ಮನೆಯಲ್ಲಿ ಸಂತ್ರಸ್ತ ಮಹಿಳೆ ಪತ್ತೆಯಾಗಿದ್ದಾರೆ.
  5. ರೇವಣ್ಣ ಅವರ ಪಿಎಂ ರಾಜಶೇಖರ್ ಅವರ ತೋಟದ ಮನೆಯಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಿಸಿ ಬೆಂಗಳೂರಿಗೆ ಕರೆ ತಂದಿರುವ ಪೊಲೀಸರು
  6. ತನ್ನನ್ನು ಬಿಟ್ಟುಬಿಡುವಂತೆ ಮಹಿಳೆ ಪ್ರಜ್ವಲ್ ರೇವಣ್ಣಗೆ ಬೇಡಿಕೊಳ್ಳುವುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು. ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ನಂತರ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿದ್ದಾರೆ.
  7. ಪ್ರಕರಣ ಬೆಳಕಿಗೆ ಬಂದ ನಂತರ ಅಂದರೆ ಏಪ್ರಿಲ್ 29 ರಂದು ಸಂತ್ರಸ್ತೆ ಮಹಿಳೆ ಕಾಣೆಯಾಗಿದ್ದಳು. ಈ ಸಂಬಂಧ ಸಂತ್ರಸ್ತೆಯ ಪುತ್ರ ಕೆಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದ
  8. ಮಹಿಳೆಯ ಅಪಹರಣ ಸಂಬಂಧ ಶನಿವಾರ (ಮೇ 4, ಶನಿವಾರ) ಎಚ್‌ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ರೇವಣ್ಣ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 364 (ಎ) (ವಿಮೋಚನೆಗಾಗಿ ಅಪಹರಣ), 365 (ವ್ಯಕ್ತಿಯನ್ನು ರಹಸ್ಯವಾಗಿ ಮತ್ತು ತಪ್ಪಾಗಿ ಬಂಧಿಸುವ ಉದ್ದೇಶದಿಂದ ಅಪಹರಣ ಅಥವಾ ಅಪಹರಣ) ಮತ್ತು 34 (ಸಾಮಾನ್ಯ ಉದ್ದೇಶವನ್ನು ಸಾಧಿಸಲು ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
  9. ಅಪಹರಣದ 5 ದಿನಗಳ ನಂತರ ಮೈಸೂರಿನ ಕಾಳೇನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಮಹಿಳೆ ಪತ್ತೆಯಾಗಿದ್ದಾಳೆ ಎಂದು ಎಸ್ಐಟಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ಮಹಿಳೆಯನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಲಾಗುವುದು" ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  10. 33 ವರ್ಷದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೊ ತುಣುಕುಗಳು ಇತ್ತೀಚೆಗೆ ಹಾಸನದಲ್ಲಿ ಹರಿದಾಡಿದ್ದವು. ನಂತರ ಕರ್ನಾಟಕ ಸರ್ಕಾರವು ಸಂಸದರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸಲು ಎಸ್ಐಟಿಯನ್ನು ರಚಿಸಿತು.

ಇದನ್ನೂ ಓದಿ: ಸಂಪಾದಕೀಯ: ತಲೆಮರೆಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ ಹಗರಣದ ಸಂತ್ರಸ್ತೆಯರು, ವ್ಯವಸ್ಥೆಯ ಮೇಲೆ ಭರವಸೆ ಹುಟ್ಟುವುದು ಸುಲಭವಲ್ಲ

ಲೋಕಸಭಾ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಗಳು ಪ್ರಮುಖ ಪ್ರಚಾರದ ನಿರೂಪಣೆಯಾಗಿ ಮಾರ್ಪಟ್ಟಿವೆ, ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ರಾಜಕೀಯ ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿವೆ.

ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿ ಸಾಧ್ಯತೆ

ಲೈಂಗಿಕ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತಂಡವು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ 'ಬ್ಲೂ ಕಾರ್ನರ್ ನೋಟಿಸ್' ಹೊರಡಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿ ಶನಿವಾರ ತಿಳಿಸಿದೆ.

ತನ್ನ ಸದಸ್ಯ ರಾಷ್ಟ್ರಗಳಿಂದ ವ್ಯಕ್ತಿಯ ಗುರುತು, ಸ್ಥಳ ಅಥವಾ ಅಪರಾಧಕ್ಕೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಅಂತರರಾಷ್ಟ್ರೀಯ ಪೊಲೀಸ್ ಸಹಕಾರ ಸಂಸ್ಥೆಯಿಂದ ಬ್ಲೂ ಕಾರ್ನರ್ ನೋಟಿಸ್ ನೀಡಲಾಗುತ್ತದೆ.

IPL_Entry_Point