ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು: ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಜಾಯ್‌ ರೈಡ್‌, ಯುವಕನ ಬಂಧನ, ಡಿಎಲ್ ಅಮಾನತಿಗೆ ಶಿಫಾರಸು

ಬೆಂಗಳೂರು: ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಜಾಯ್‌ ರೈಡ್‌, ಯುವಕನ ಬಂಧನ, ಡಿಎಲ್ ಅಮಾನತಿಗೆ ಶಿಫಾರಸು

ಬೆಂಗಳೂರು: ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಜಾಯ್‌ ರೈಡ್‌ ಮಾಡಿದ್ದ ಯುವಕನ ಬಂಧನವಾಗಿದೆ. ಈ ರೈಡ್‌ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿ ವ್ಯಾಪಕ ಟೀಕೆಗೆ ಒಳಗಾಗಿತ್ತು. ಇದೀಗ ಆತನ ಡಿಎಲ್ ಅಮಾನತಿಗೆ ಶಿಫಾರಸು ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. (ವರದಿ - ಎಚ್. ಮಾರುತಿ, ಬೆಂಗಳೂರು)

ಬೆಂಗಳೂರು: ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಜಾಯ್‌ ರೈಡ್‌ ಮಾಡಿದ್ದ (ಎಡ ಚಿತ್ರ- ವಿಡಿಯೋದಿಂದ ತೆಗೆದ ಚಿತ್ರ) ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಜಾಯ್‌ ರೈಡ್‌ ಮಾಡಿದ್ದ (ಎಡ ಚಿತ್ರ- ವಿಡಿಯೋದಿಂದ ತೆಗೆದ ಚಿತ್ರ) ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುತ್ತಿದ್ದ ಯುವಕನೊಬ್ಬನನ್ನು ಬೆಂಗಳೂರಿನ ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟ್ರೆಂಡಿಂಗ್​ ಸುದ್ದಿ

21 ವರ್ಷದ ಸಿಲಂಬರಸನ್ ಬಂಧನಕ್ಕೊಳಗಾದ ಯುವಕ. ಈತ ಯಲಹಂಕದಿಂದ ಹೆಬ್ಬಾಳದತ್ತ ಸಾಗುವ ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿಕೊಂಡಿದ್ದ. ಮೇಲಾಗಿ ಬೈಕ್ ಅನ್ನು ವೇಗವಾಗಿ ಚಲಾಯಿಸುತ್ತಿದ್ದ. ಈತ ಬೈಕ್ ಓಡಿಸುವ ರೀತಿಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಈ ದೃಶ್ಯವನ್ನು ಸಾರ್ವಜನಿಕರೊಬ್ಬರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಗಮನಕ್ಕೆ ಬಂದ ನಂತರ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬೈಕ್ ಅನ್ನು ಜಪ್ತಿ ಮಾಡಿದ್ದಾರೆ.

ಈ ಯುವಕ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ. ಇಬ್ಬರೂ ಹೆಮ್ಮೆಟ್ ಧರಿಸಿರಲಿಲ್ಲ. ಈ ವಿಡಿಯೊ ಗಮನಕ್ಕೆ ಬರುತ್ತಿದ್ದಂತೆ ಬೈಕ್‌ನ ನೋಂದಣಿ ಸಂಖ್ಯೆ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಚಾಲನಾ ಪರವಾನಗಿಯನ್ನು ಜಪ್ತಿ ಮಾಡಲಾಗಿದ್ದು, ಅಮಾನತು ಮಾಡುವಂತೆ ಸಾರಿಗೆ ಸಂಸ್ಥೆಗೆ ಪತ್ರ ಬರೆಯಲಾಗಿದೆ ಎಂದೂ ಹೇಳಿದ್ದಾರೆ.

ಬಾಲಕಿ ಮೇಲೆ ದೌರ್ಜನ್ಯ: ಸೆಕ್ಯೂರಿಟಿ ಗಾರ್ಡ್ ಬಂಧನ

ಹತ್ತು ವರ್ಷ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 55 ವರ್ಷದ ರಾಜೇಶ್ ಎಂಬಾತನ್ನು ಬೆಂಗಳೂರಿನ ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಿಹಾರ ಮೂಲದ ರಾಜೇಶ್ ನಾಗೇನಹಳ್ಳಿ ಸಮೀಪದ ಅಪಾರ್ಟ್‌ಮೆಂಟ್ ವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸಕ್ಕೆ ಸೇರಿಕೊಂಡಿದ್ದ. ನೇಪಾಳ ಮೂಲದ ಸಂತ್ರಸ್ತ ಬಾಲಕಿಯ ಪೋಷಕರು ನಾಗೇನಹಳ್ಳಿಯಲ್ಲಿರುವ ಮತ್ತೊಂದು ಅಪಾರ್ಟ್‌ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದರು.

ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಗಾಗ ಮಾತನಾಡಿಸುತ್ತಾ ಹೊಂದಿಕೊಂಡಿದ್ದ. ಆರೋಪಿಯು ಶನಿವಾರ ರಾತ್ರಿ ಬಾಲಕಿಯನ್ನು ಕರೆದು ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಶೌಚಾಲಯದೊಳಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದ ಎಂದು ಪೊಲೀಸರು ಹೇಳಿದ್ದಾರೆ. ನಂತರ ಬಾಲಕಿ ದೌರ್ಜನ್ಯದ ವಿಷಯವನ್ನು ಪೋಷಕರಿಗೆ ತಿಳಿಸಿದ್ದಳು. ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸ್) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿ ರಾಜೇಶ್‌ನನ್ನು ಬಂಧಿಸಲಾಗಿದೆ. ಈಗ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮಲ್ಲೇಶ್ವರಂ ಸಮೀಪ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

ಬೆಂಗಳೂರಿನ ಮಲ್ಲೇಶ್ವರಂ ಸಮೀಪ ಸುಬ್ರಹ್ಮಣ್ಯ ನಗರ ಮುಖ್ಯರಸ್ತೆಯಲ್ಲಿ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಾಯಗೊಂಡಿರುವ‌ ಘಟನೆ ನಡೆದಿದೆ. 

ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದ್ದು, ಮೃತನನ್ನು ಸುಬ್ರಮಣ್ಯ ನಗರ ನಿವಾಸಿ ವಿನಯ್ (32) ಎಂದು ಗುರುತಿಸಲಾಗಿದೆ. ಕಾರು ಚಾಲಕ ಹರಿನಾಥ್ ಎಂಬಾತನನ್ನು ಮಲ್ಲೇಶ್ವರಂ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. 

ಹರಿನಾಥ್ ಪಾನಮತ್ತನಾಗಿದ್ದ. ಇದಕ್ಕೂ ಮೊದಲು ರಸ್ತೆ ಬದಿ ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದ ಬಳಿಕ ವಿನಯ್ ಹಾಗೂ ಆತನ ಸ್ನೇಹಿತ ಇದ್ದ ಬೈಕಿಗೆ ಡಿಕ್ಕಿಯಾಗಿದೆ. ಆ ರಭಸಕ್ಕೆ ನೆಲಕ್ಕೆ ಬಿದ್ದ ವಿನಯ್‌ನನ್ನ ಕಾರು ಸ್ವಲ್ಪದೂರ ಎಳೆದೊಯ್ದಿದೆ. ಪರಿಣಾಮ ವಿನಯ್‌ ಗಂಭೀರವಾಗಿ ಗಾಯಗೊಂಡಿದ್ದ. ಚಿಕಿತ್ಸೆ ಫಲಕಾರಿಯಾಗದೆ ವಿನಯ್ ಮೃತಪಟ್ಟಿದ್ದಾನೆ. ಆತನ ಜೊತೆಗಿದ್ದವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

(ವರದಿ - ಎಚ್. ಮಾರುತಿ, ಬೆಂಗಳೂರು)

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

 

ಟಿ20 ವರ್ಲ್ಡ್‌ಕಪ್ 2024