ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಬಜೆಟ್ 2024; ಸಮುದ್ರ ಆಂಬುಲೆನ್ಸ್ ಖರೀದಿ; ಮೀನುಗಾರಿಕೆಗೆ 3000 ಕೋಟಿ ರೂಪಾಯಿ ಮೀಸಲು; ಸಿಎಂ ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ಬಜೆಟ್ 2024; ಸಮುದ್ರ ಆಂಬುಲೆನ್ಸ್ ಖರೀದಿ; ಮೀನುಗಾರಿಕೆಗೆ 3000 ಕೋಟಿ ರೂಪಾಯಿ ಮೀಸಲು; ಸಿಎಂ ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ಬಜೆಟ್ 2024: ಸಮುದ್ರ ಆಂಬುಲೆನ್ಸ್ ಖರೀದಿಸುವ ಪ್ರಸ್ತಾವನೆ ಸೇರಿ ಹಲವು ವಿಚಾರಗಳು ರಾಜ್ಯ ಬಜೆಟ್‌ನಲ್ಲಿ ಉಲ್ಲೇಖವಾಗಿವೆ. ಇನ್ನು ಮೀನುಗಾರಿಕೆಗೆ 3000 ಕೋಟಿ ರೂಪಾಯಿ ಮೀಸಲು ಇಟ್ಟಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಕರ್ನಾಟಕ ಬಜೆಟ್ 2024; ಸಮುದ್ರ ಆಂಬುಲೆನ್ಸ್ ಖರೀದಿ ಮತ್ತು ಮೀನುಗಾರಿಕೆಗೆ 3000 ಕೋಟಿ ರೂಪಾಯಿ ಮೀಸಲು ಇಟ್ಟಿರುವುದಾಗಿ ಇಂದು (ಫೆ.16) ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಕರ್ನಾಟಕ ಬಜೆಟ್ 2024; ಸಮುದ್ರ ಆಂಬುಲೆನ್ಸ್ ಖರೀದಿ ಮತ್ತು ಮೀನುಗಾರಿಕೆಗೆ 3000 ಕೋಟಿ ರೂಪಾಯಿ ಮೀಸಲು ಇಟ್ಟಿರುವುದಾಗಿ ಇಂದು (ಫೆ.16) ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಬೆಂಗಳೂರು: ನಿರೀಕ್ಷೆಯಂತೆ ಈ ಸಲ ಮೀನುಗಾರಿಕೆ ಕ್ಷೇತ್ರಕ್ಕೂ ಆದ್ಯತೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3,000 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆ.16) ವಿಧಾನಸಭೆಯಲ್ಲಿ 2024-25ನೇ ಸಾಲಿನ ರಾಜ್ಯ ಬಜೆಟ್ (ಕರ್ನಾಟಕ ಬಜೆಟ್ 2024) ಮಂಡಿಸುತ್ತಿದ್ದ ವೇಳೆ ಈ ವಿಚಾರ ಘೋಷಿಸಿದರು.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೀನುಗಾರಿಕೆ ಸಂಶೋಧನೆ ಮತ್ತು ಮೀನುಗಾರರ ಅಭಿವೃದ್ಧಿಗಾಗಿ 3 ಸಾವಿರ ಕೋಟಿ ಮೊತ್ತ ಮೀಸಲಿಡಲಾಗುವುದು. ಗಣಿ ಬಾಧಿತ ಪ್ರದೇಶಗಳಲ್ಲಿಯೂ ಮೀನುಗಾರಿಕೆ ಅಭಿವೃದ್ಧಿ ಸಾಧ್ಯತೆಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ.

7 ಕೋಟಿ ರೂಪಾಯಿ ಸಮುದ್ರ ಆಂಬುಲೆನ್ಸ್ ಖರೀದಿ

ಸಮುದ್ರ ಮೀನುಗಾರಿಕೆಗೆ ಹೋಗುವ ಮೀನುಗಾರರು ಅಪಾಯಕ್ಕೆ ಸಿಲುಕಿದಾಗ ಅವರನ್ನು ರಕ್ಷಿಸಲು ವಿಶೇಷ "ಸಮುದ್ರ ಆಂಬುಲೆನ್ಸ್" ಖರೀದಿಸಲಾಗುವುದು. ತುರ್ತು ಸಂದರ್ಭದಲ್ಲಿ ಅವರ ರಕ್ಷಣೆಗೆ ಅತ್ಯಾಧುನಿಕ ಸಮುದ್ರ ಅಂಬುಲೆನ್ಸ್ ಅಗತ್ಯವನ್ನು ಮನಗಂಡು ಈ ಕ್ರಮ ತೆಗೆದುಕೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಮೀನುಗಾರಿಕೆಗೆ ಸಂಬಂಧಿಸಿದ ಸಂಶೋಧನೆ ಅಗತ್ಯವಾಗಿದ್ದು, ಇದಕ್ಕಾಗಿ ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುತ್ತದೆ. ಹಾಗೆಯೇ, ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ಅನ್ನು 7 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಮೀನುಗಾರಿಕೆ ಕ್ಷೇತ್ರಕ್ಕೆ ಮತ್ತೇನು ಕೊಡುಗೆ

1) ಆಕ್ವಾ ಪಾರ್ಕ್‌ಗಳ ಸ್ಥಾಪನೆ.

2) ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರ ಬಂದರು ನಿರ್ಮಾಣ.

3) ವಿಜಯಪುರದ ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ.

4) ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000 ರೂ.ಗಳಿಗೆ ಹೆಚ್ಚಿಸಲಾಗುವುದು.

5) 2024-25ನೇ ಸಾಲಿನಲ್ಲಿ 10,000 ವಸತಿ ರಹಿತ ಮೀನುಗಾರರಿಗೆ ಕರ್ನಾಟಕ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು. ಇದಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

6) ಕರ್ನಾಟಕ ರಾಜ್ಯದಲ್ಲಿನ 16 ಮೀನು ಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣವನ್ನು ನಬಾರ್ಡ್‌ ಸಹಯೋಗದೊಂದಿಗೆ 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.

7) ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು 6 ಕೋಟಿ ರೂ. ವೆಚ್ಚ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

(This copy first appeared in Hindustan Times Kannada website. To read more like this please logon to kannada.hindustantimes.com)

ಟಿ20 ವರ್ಲ್ಡ್‌ಕಪ್ 2024