ಪೊಕ್ಸೊ ಪ್ರಕರಣ: ವಿಚಾರಣೆಗೆ ಖುದ್ದು ಹಾಜರಾತಿಯಿಂದಲೂ ಯಡಿಯೂರಪ್ಪಗೆ ಹೈಕೋರ್ಟ್ ವಿನಾಯ್ತಿ, ಮಾಜಿ ಮುಖ್ಯಮಂತ್ರಿಗೆ ಸದ್ಯಕ್ಕಿದು ಬಿಗ್ ರಿಲೀಫ್
ಕನ್ನಡ ಸುದ್ದಿ  /  ಕರ್ನಾಟಕ  /  ಪೊಕ್ಸೊ ಪ್ರಕರಣ: ವಿಚಾರಣೆಗೆ ಖುದ್ದು ಹಾಜರಾತಿಯಿಂದಲೂ ಯಡಿಯೂರಪ್ಪಗೆ ಹೈಕೋರ್ಟ್ ವಿನಾಯ್ತಿ, ಮಾಜಿ ಮುಖ್ಯಮಂತ್ರಿಗೆ ಸದ್ಯಕ್ಕಿದು ಬಿಗ್ ರಿಲೀಫ್

ಪೊಕ್ಸೊ ಪ್ರಕರಣ: ವಿಚಾರಣೆಗೆ ಖುದ್ದು ಹಾಜರಾತಿಯಿಂದಲೂ ಯಡಿಯೂರಪ್ಪಗೆ ಹೈಕೋರ್ಟ್ ವಿನಾಯ್ತಿ, ಮಾಜಿ ಮುಖ್ಯಮಂತ್ರಿಗೆ ಸದ್ಯಕ್ಕಿದು ಬಿಗ್ ರಿಲೀಫ್

ಸಂತ್ರಸ್ತ ಬಾಲಕಿಯ ಪರ ವಕೀಲರಾದ ಬಾಲನ್‌ ಅವರು ತಮ್ಮ ವಾದವನ್ನು ಮಂಡಿಸಿ, ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಮತ್ತು ವಾದ ಮಂಡನೆ ಮಾಡಲು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿಕೊಂಡರು. (ವರದಿ: ಮಾರುತಿ ಎಚ್.)

ಪೊಕ್ಸೊ ಪ್ರಕರಣ: ವಿಚಾರಣೆಗೆ ಖುದ್ದು ಹಾಜರಾತಿಯಿಂದಲೂ ಯಡಿಯೂರಪ್ಪಗೆ ಹೈಕೋರ್ಟ್ ವಿನಾಯ್ತಿ, ಮಾಜಿ ಮುಖ್ಯಮಂತ್ರಿಗೆ ಸದ್ಯಕ್ಕಿದು ಬಿಗ್ ರಿಲೀಫ್
ಪೊಕ್ಸೊ ಪ್ರಕರಣ: ವಿಚಾರಣೆಗೆ ಖುದ್ದು ಹಾಜರಾತಿಯಿಂದಲೂ ಯಡಿಯೂರಪ್ಪಗೆ ಹೈಕೋರ್ಟ್ ವಿನಾಯ್ತಿ, ಮಾಜಿ ಮುಖ್ಯಮಂತ್ರಿಗೆ ಸದ್ಯಕ್ಕಿದು ಬಿಗ್ ರಿಲೀಫ್

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೊಕ್ಸೊ ಪ್ರಕರಣದಲ್ಲಿ ಮತ್ತೊಂದು ಮುಖ್ಯ ಬೆಳವಣಿಗೆ ನಡೆದಿದೆ. ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ. ಜೊತೆಗೆ ವಿಚಾರಣೆಗಾಗಿ ಖುದ್ದು ಹಾಜರಾತಿಯಿಂದಲೂ ವಿನಾಯಿತಿ ನೀಡಲಾಗಿದೆ. ಇದರಿಂದ ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪೊಕ್ಸೊ ಪ್ರಕರಣ ರದ್ದುಗೊಳಿಸುವಂತೆ ಬಿಜೆಪಿ ಕೇಂದ್ರ ಸಂಸದೀಯ ಮಂಡಲಿ ಸದಸ್ಯರೂ ಆಗಿರುವ ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಶಾಸಕರು ಮತ್ತು ಸಂಸದರ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗಳ ವಿಶೇಷ ನ್ಯಾಯಾಲಯ ಗುರುವಾರ ನಡೆಸಿತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದರು.

ವಿಚಾರಣೆಯ ಸಂದರ್ಭದಲ್ಲಿ ಯಡಿಯೂರಪ್ಪ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್‌ ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆದ್ದರಿಂದ ದೋಷೋಪ ಪಟ್ಟಿಯನ್ನು ಪ್ರಶ್ನಿಸಿದ ತಿದ್ದುಪಡಿ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಮನವಿ ಮಾಡಿದರು. ಈ ಮನವಿಗೆ ನ್ಯಾಯಪೀಠವು ನಿಮ್ಮದೇನೂ ಅಭ್ಯಂತರ ಇಲ್ಲವೇ ಎಂದು ಪ್ರಾಸಿಕ್ಯೂಟರ್‌ ಬಿ.ಎ.ಬೆಳ್ಳಿಯಪ್ಪ ಅವರನ್ನು ಪ್ರಶ್ನಿಸಿದಾಗ ಅವರು ಯಾವುದೇ ಆಕ್ಷೇಪಣೆ ಇಲ್ಲ ಎಂದು ತಿಳಿಸಿದರು.

ಸಂತ್ರಸ್ತ ಬಾಲಕಿಯ ಪರ ವಕೀಲರಾದ ಬಾಲನ್‌ ಅವರು ತಮ್ಮ ವಾದವನ್ನು ಮಂಡಿಸಿ, ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಮತ್ತು ವಾದ ಮಂಡನೆ ಮಾಡಲು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿಕೊಂಡರು. ನಂತರ ನ್ಯಾಯಮೂರ್ತಿಗಳು ವಿಚಾರಣೆಯನ್ನು ಇದೇ ತಿಂಗಳ 22ಕ್ಕೆ ಮುಂದೂಡಿದರು.

ಯಡಿಯೂರಪ್ಪ ವಿರುದ್ಧ ಪೊಕ್ಸೊ ಪ್ರಕರಣ: ಹಿನ್ನೆಲೆ ಇದು

ತಮ್ಮ 17 ವರ್ಷದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು 53 ವರ್ಷದ ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ನ್ಯಾಯ ಒದಗಿಸಲು ಸಹಾಯ ಮಾಡುವಂತೆ ಕೋರಿ ಯಡಿಯೂರಪ್ಪ ಅವರ ಬಳಿ ಹೋಗಿದ್ದಾಗಿ ಆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿಯ ಮನೆಗೆ ಹೋಗಿ ಸಹಾಯ ಕೇಳಿದಾಗ ಅವರು ನನ್ನ ಪುತ್ರಿಯನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದಿದ್ದರು. ಅಲ್ಲಿ ನನ್ನ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಸಂದರ್ಭದಲ್ಲಿ ಒಂದಿಷ್ಟು ಹಣ ನೀಡಿ ಯಾರಿಗೂ ಹೇಳದಂತೆ ತಾಕೀತು ಮಾಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.

ಈ ಆರೋಪಕ್ಕೆ ಪೂರಕವಾಗಿ ಈ ಮಹಿಳೆಯ ಮೊಬೈಲ್‌ ನಲ್ಲಿ ರೆಕಾರ್ಡ್ ಮಾಡಲಾಗಿದ್ದ ವಿಡಿಯೋ ತುಣುಕುಗಳನ್ನು ಯಡಿಯೂರಪ್ಪ ಅವರ ಬೆಂಬಲಿಗರು ಬಲವಂತವಾಗಿ ಅಳಿಸಿ ಹಾಕಿದ್ದರು. ಆ ಮಹಿಳೆಯು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತರಾಗಿದ್ದಾರೆ. ನಂತರ ಸದಾಶಿವ ನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿದ್ದರು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದ್ದರೂ ಯಡಿಯೂರಪ್ಪ ಗೈರು ಹಾಜರಾಗಿದ್ದರು.

ಅಂತಿಮವಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಅವರ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಹೈಕೋ‌ರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಿರ್ದೇಶನದಂತೆ ಯಡಿಯೂರಪ್ಪ ಅವರು ಸಿಐಡಿ ಎದುರು ವಿಚಾರಣೆಗೆ ಹಾಜರಾಗಿದ್ದರು.

ಈ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ.

Whats_app_banner