ಬೆಂಗಳೂರು: ಸಂತ್ರಸ್ತೆ ಅಪಹರಣ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು: ಸಂತ್ರಸ್ತೆ ಅಪಹರಣ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಸಂತ್ರಸ್ತೆ ಅಪಹರಣ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌

ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ. ಮುಂದಿನ ಶುಕ್ರವಾರ ಮಧ್ಯಾಹ್ನ ತನಕ ಜಾಮೀನು ಜಾರಿಯಲ್ಲಿರಲಿದೆ.

ಬೆಂಗಳೂರು: ಸಂತ್ರಸ್ತೆ ಅಪಹರಣ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌. (ಭವಾನಿ ರೇವಣ್ಣ ಪತಿ ಎಚ್ ಡಿ ರೇವಣ್ಣ ಜೊತೆಗೆ - ಕಡತ ಚಿತ್ರ)
ಬೆಂಗಳೂರು: ಸಂತ್ರಸ್ತೆ ಅಪಹರಣ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌. (ಭವಾನಿ ರೇವಣ್ಣ ಪತಿ ಎಚ್ ಡಿ ರೇವಣ್ಣ ಜೊತೆಗೆ - ಕಡತ ಚಿತ್ರ)

ಬೆಂಗಳೂರು: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಮಹಿಳೆಯ ಅಪಹರಣ ಕೇಸ್‌ನಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ (ಜೂನ್ 7) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದು ಷರತ್ತುಬದ್ಧ ಜಾಮೀನು ಆಗಿದ್ದು, ಇಂದು ಮಧ್ಯಾಹ್ನ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠ ಈ ಜಾಮೀನು ನೀಡಿದ್ದು, ತನಿಖೆಗೆ ಸಹಕರಿಸುವಂತೆ ಮತ್ತು ಹಾಸನ ಜಿಲ್ಲೆ ಅಥವಾ ಮೈಸೂರಿನ ಕೆಆರ್ ನಗರಕ್ಕೆ ಪ್ರವೇಶಿಸದಂತೆ ಭವಾನಿ ರೇವಣ್ಣ ಅವರಿಗೆ ಸೂಚಿಸಿದೆ.

ಈ ನಡುವೆ, ಎಸ್‌ಐಟಿ ತಂಡ ತನಿಖೆ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ಭವಾನಿ ರೇವಣ್ಣ ಅವರ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.

Whats_app_banner