PSI Re-Exam: ಡಿಸೆಂಬರ್ 23ರಂದು 545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕನ್ನಡ ಸುದ್ದಿ  /  ಕರ್ನಾಟಕ  /  Psi Re-exam: ಡಿಸೆಂಬರ್ 23ರಂದು 545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

PSI Re-Exam: ಡಿಸೆಂಬರ್ 23ರಂದು 545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷಾ ಅಕ್ರಮದ ಕಾರಣ ರದ್ದುಗೊಂಡ ಪಿಎಸ್‌ಐ ನೇಮಕಾತಿಗೆ ಮರುಚಾಲನೆ ಸಿಕ್ಕಿದೆ. ಡಿಸೆಂಬರ್ 23ರಂದು 545 ಪಿಎಸ್‌ಐ ಹುದ್ದೆಗಳ ಭರ್ತಿಗೆ ಮರುಪರೀಕ್ಷೆ ನಡೆಯಲಿದೆ. ಈ ಬಾರಿ ಬೆಂಗಳೂರಿನಲ್ಲಿ ಮಾತ್ರ ಪರೀಕ್ಷಾ ಕೇಂದ್ರ ಇದ್ದು, ಅಭ್ಯರ್ಥಿಗಳು ಇಲ್ಲೇ ಪರೀಕ್ಷೆ ಬರೆಯಬೇಕಾಗುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಸೆಂಬರ್ 23ರಂದು 545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಸೆಂಬರ್ 23ರಂದು 545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಿದೆ.

ಹಗರಣದ ಕಾರಣ ರದ್ದಾಗಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 23ರಂದು ಮರುಪರೀಕ್ಷೆ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಕರ್ನಾಟಕ ಪೊಲೀಸ್ ಇಲಾಖೆಯ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ 2021ರ ಜನವರಿ 21ರಂದು ಅಧಿಸೂಚನೆ ಪ್ರಕಟವಾಗಿತ್ತು. ಅದೇ ವರ್ಷ ಅಕ್ಟೋಬರ್ 3ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆದರೆ ಅಕ್ರಮ ನಡೆದ ಕಾರಣ ಪರೀಕ್ಷೆ ರದ್ದಾಗಿತ್ತು. ಈಗ ಡಿಸೆಂಬರ್ 3ರಂದು ನಡೆಯುವ ಮರುಪರೀಕ್ಷೆ ಬೆಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಹೈಕೋರ್ಟ್‌ ನವೆಂಬರ್ 10ರಂದು ನೀಡಿದ ತೀರ್ಪಿನ ಪ್ರಕಾರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಪರೀಕ್ಷೆಯನ್ನು ನಡೆಸುತ್ತಿದೆ.

ಪರೀಕ್ಷಾ ಅಕ್ರಮ ಕೇಸ್- ನೇಮಕಾತಿ ವಿಭಾಗದ ಎಡಿಜಿಪಿ ಸೇರಿ ಹಲವರ ಬಂಧನ

ಪೊಲೀಸ್ ಇಲಾಖೆಯ 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮದ ಆರೋಪ ಎದುರಾದ ಕಾರಣ, ಪೊಲೀಸ್ ಕೇಸ್ ದಾಖಲಾಗಿದ್ದವು. ಈ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳು, ಅವರ ಕೆಲವು ಪಾಲಕರು ಬಂಧಿತರಾಗಿದ್ದರು.

ಪರೀಕ್ಷಾ ಅಕ್ರಮ ನಡೆದುದು ಖಚಿತವಾದ ಕೂಡಲೇ ನೇಮಕಾತಿ ಅಧಿಸೂಚನೆಯನ್ನು ಸರ್ಕಾರ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ಮೆಟ್ಟಿಲೇರಿದ ನೇಮಕಾತಿ ರದ್ದು ಪ್ರಕರಣ

ಪರೀಕ್ಷಾ ಅಕ್ರಮ ನಡೆದುದು ಖಚಿತವಾದ ಕೂಡಲೇ ನೇಮಕಾತಿ ಅಧಿಸೂಚನೆಯನ್ನು ಸರ್ಕಾರ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅಹವಾಲು ಸ್ವೀಕರಿಸಿದ ಹೈಕೋರ್ಟ್‌, ಸುದೀರ್ಘ ವಿಚಾರಣೆ ನಡೆಸಿತ್ತು. ನವೆಂಬರ್ 10ರಂದು ಈ ಕುರಿತು ತೀರ್ಪು ನೀಡಿದ ಕೋರ್ಟ್‌, ಮರುಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿಯಿತು. ಸ್ವತಂತ್ರ ಪರೀಕ್ಷಾ ಸಂಸ್ಥೆಯ ಮೂಲಕ ಪರೀಕ್ಷೆ ನಡೆಸುವಂತೆ ಸೂಚಿಸಿತ್ತು.

ಡಿಸೆಂಬರ್ 23ರಂದು 545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ

ಕರ್ನಾಟಕ ಸರ್ಕಾರ ಈಗಾಗಲೇ ನಿರ್ಧರಿಸಿದ ಪ್ರಕಾರ ಮತ್ತು ಹೈಕೋರ್ಟ್ ತೀರ್ಪಿನ ಪ್ರಕಾರ, ಮರುಪರೀಕ್ಷೆಗೆ ದಿನ ನಿಗದಿಯಾಗಿದೆ. ಡಿಸೆಂಬರ್ 23ರಂದು 545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿದೆ.

Whats_app_banner