ಕರ್ನಾಟಕ ರಾಜ್ಯಸಭೆ ಚುನಾವಣೆ: ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅಡ್ಡ ಮತದಾನ; ಕಾಂಗ್ರೆಸ್‌ಗೆ ಸಿಕ್ತು ಕೇಸರಿ ಮತ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ರಾಜ್ಯಸಭೆ ಚುನಾವಣೆ: ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅಡ್ಡ ಮತದಾನ; ಕಾಂಗ್ರೆಸ್‌ಗೆ ಸಿಕ್ತು ಕೇಸರಿ ಮತ

ಕರ್ನಾಟಕ ರಾಜ್ಯಸಭೆ ಚುನಾವಣೆ: ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅಡ್ಡ ಮತದಾನ; ಕಾಂಗ್ರೆಸ್‌ಗೆ ಸಿಕ್ತು ಕೇಸರಿ ಮತ

Karnataka Rajya Sabha Election: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ. ಎಸ್‌ಟಿಎಸ್ ಕಾಂಗ್ರೆಸ್‌ಗೆ ಮತ ಚಲಾಯಿಸಿರುವುದಾಗಿ ವರದಿಯಾಗಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ. ಕಾಂಗ್ರೆಸ್‌ಗೆ ಮತ ಚಲಾಯಿಸಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ. ಕಾಂಗ್ರೆಸ್‌ಗೆ ಮತ ಚಲಾಯಿಸಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಶಾಸಕ ಎಸ್‌ಟಿ ಸೋಮಶೇಖರ್ ಬಿಗ್ ಶಾಕ್ ಕೊಟ್ಟಿದ್ದಾರೆ. ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ. ಎಸ್‌ಟಿಎಸ್‌ ಕಾಂಗ್ರೆಸ್‌ಗೆ ಮತ ಚಲಾಯಿಸಿರುವುದಾಗಿ ಗೊತ್ತಾಗಿದೆ.

ಮತದಾನಕ್ಕೂ ಒಂದು ದಿನ ಮೊದಲು ಬಿಜೆಪಿ ತನ್ನ 66 ಶಾಸಕರಿಗೆ ವಿಪ್ ಜಾರಿ ಮಾಡಲಾಗಿತ್ತು. ಇಂದು (ಫೆಬ್ರವರಿ 27, ಮಂಗಳವಾರ) ಮತದಾನ ಮುಗಿದ ಬಳಿಕ ಮುಖ್ಯ ಸಚೇತಕರ ಕಚೇರಿಗೆ ಬರುವಂತೆ ಹೇಳಲಾಗಿತ್ತು. ಆದರೆ ಎಸ್‌ಟಿ ಸೋಮಶೇಖರ್ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡಿದ್ದಾರೆ. ಎಸ್‌ಟಿಎಸ್ ನಡೆಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕ್ರಮಕ್ಕೆ ಒತ್ತಾಯಿಸಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರಿಗೆ ದೂರು ನೀಡುವ ಸಾಧ್ಯತೆ ಇದೆ.

ಮತದಾನದ ಬಳಿಕ ಮಾತನಾಡಿರುವ ಎಸ್ ಟಿ ಸೋಮಶೇಖರ್, ಅನುದಾನದ ಭರವಸೆ ನೀಡಿದವರಿಗೆ ಆತ್ಮಸಾಕ್ಷಿಯಾಗಿ ಮತದಾನ ಮಾಡಿದ್ದೇನೆ ಎಂದು ಹೇಳಿದ್ದಾರೆ. ಮತ್ತೊಂದು ಎಸ್‌ಟಿಎಸ್ ಕಾಂಗ್ರೆಸ್‌ಗೆ ಮತದಾನ ಮಾಡಿದ್ದಾರೆ ಎಂಬ ವಿಚಾರದಲ್ಲಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

(This copy first appeared in Hindustan Times Kannada website. To read more like this please logon to kannada.hindustantimes.com )

Whats_app_banner