Monsoon: ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶದ ನಿರೀಕ್ಷೆ; ಬೆಂಗಳೂರಿಗೆ ಯಾವಾಗ ಬರುತ್ತೆ
ಕನ್ನಡ ಸುದ್ದಿ  /  ಕರ್ನಾಟಕ  /  Monsoon: ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶದ ನಿರೀಕ್ಷೆ; ಬೆಂಗಳೂರಿಗೆ ಯಾವಾಗ ಬರುತ್ತೆ

Monsoon: ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶದ ನಿರೀಕ್ಷೆ; ಬೆಂಗಳೂರಿಗೆ ಯಾವಾಗ ಬರುತ್ತೆ

ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶದ ನಿರೀಕ್ಷೆ ಇದೆ. ಬೆಂಗಳೂರಿಗೆ ಜೂನ್ 13 ಅಥವಾ 14ಕ್ಕೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶದ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವಾಗ ಬರುವ ಸಾಧ್ಯತೆ ಇದೆ ಎಂಬುದನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶದ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವಾಗ ಬರುವ ಸಾಧ್ಯತೆ ಇದೆ ಎಂಬುದನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು (Monsoon) ಪ್ರವೇಶಿಸಲಿದ್ದು, ಜೂನ್ 13 ಅಥವಾ 14ರಂದು ಬೆಂಗಳೂರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮಾನ್ಸೂನ್ ಆಗಮನವನ್ನು ವಿಸ್ತರಿಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ. ನೈಋತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಪ್ರಗತಿ ಸಾಧಿಸಿದೆ. ನೈಋತ್ಯ ಮುಂಗಾರು ಜೂನ್ 1 ಅಥವಾ 2ರಂದು ಕೇರಳ ಕರಾವಳಿಗೆ ಆಗಮಿಸುವ ಸಾಧ್ಯತೆ ಇದೆ. ಇದು ಜೂನ್ 6 ಅಥವಾ 7 ರಂದು ಕರ್ನಾಟಕ ಕರಾವಳಿಯನ್ನು ಪ್ರವೇಶಿಸಲಿದ್ದು, ಜೂನ್ 14 ರ ವೇಳೆಗೆ ಕ್ರಮೇಣ ದಕ್ಷಿಣ ಒಳನಾಡಿನ ಪ್ರದೇಶಗಳಿಗೆ ಹರಡಲಿದೆ ಎಂದು ಹಿರಿಯ ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಜೂನ್ ಮೊದಲ ವಾರದವರೆಗೂ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿಗೆ ಮಳೆ (Bengaluru Rain) ಬಾರದಿದ್ದರೂ, ಈ ತಿಂಗಳ ಅಂತ್ಯದ ವೇಳೆಗೆ ನಗರಕ್ಕೆ ಮಳೆಯ ಆಗಮನವಾಗಲಿದೆ. ಜೂನ್ ಎರಡನೇ ವಾರದಲ್ಲಿ ಮುಂಗಾರು ಬೆಂಗಳೂರಿಗೆ ಆಗಮಿಸಲಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗಾಗಲೇ ಮಳೆಗಾಲವನ್ನು ಎದುರಿಸಲು ಸಜ್ಜಾಗುತ್ತಿದೆ. ಮೇ ತಿಂಗಳ ಬಂದ ಪೂರ್ವ ಮುಂಗಾರು ಮಳೆಗೆ ನಗರದ ಕೆಲವು ಕಡೆಗಳಲ್ಲಿ ಭಾರಿ ಅವಾಂತರಗಳನ್ನೇ ಸೃಷ್ಟಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಬಿರುಗಾಳಿ ಸಹಿತ ಮಳೆಗೆ ನೂರಾರು ಮರಗಳು ಧರೆಗುರುಳಿವೆ. ಮುಂದಿನ ದಿನಗಳಲ್ಲಿ ವರುಣ ಅಬ್ಬರಿಸಿದೆ ಪ್ರವಾಹ ಮತ್ತು ಜಲಾವೃತತೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬುಧವಾರ (ಮೇ 22) ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆಗಾಲದಲ್ಲಿ ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಜಲಾಶಯಗಳ ಒಳ ಹರಿವು ಹೆಚ್ಚಾಗಿದೆ. ಮೇ 30ರ ಗುರುವಾರದ ವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಗುರುವಾರ (ಮೇ 23) ಚಾಮರಾಜನಗರದ ಮಲೆಮಹೇಶ್ವರ ಬೆಟ್ಟದಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ.

ಮೈಸೂರು ಜಿಲ್ಲೆಯ ಸರಗೂರಿನಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ. ಚಾಮರಾಜನಗರದ ಬಂಡೀಪುರದಲ್ಲಿ 6, ಉಡುಪಿ ಜಿಲ್ಲೆಯ ಸಿದ್ದಾಪುರ 5, ಕೊಡಗು ಜಿಲ್ಲೆಯ ಮೂರ್ನಾಡು 5, ಮೈಸೂರಿನ ಹೆಚ್‌ಡಿ ಕೋಟೆ 5, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ 5, ಕೊಳ್ಳೇಗಾಲ 4, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯದಲ್ಲಿ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner