Namma Metro Alert: ಇನ್ನೊಂದು ತಿಂಗಳು ಬೆಂಗಳೂರಿನ ಈ ಮಾರ್ಗಗಳಲ್ಲಿ ಮೆಟ್ರೋ ಸಂಚಾರ ವ್ಯತ್ಯಯ
ಕನ್ನಡ ಸುದ್ದಿ  /  ಕರ್ನಾಟಕ  /  Namma Metro Alert: ಇನ್ನೊಂದು ತಿಂಗಳು ಬೆಂಗಳೂರಿನ ಈ ಮಾರ್ಗಗಳಲ್ಲಿ ಮೆಟ್ರೋ ಸಂಚಾರ ವ್ಯತ್ಯಯ

Namma Metro Alert: ಇನ್ನೊಂದು ತಿಂಗಳು ಬೆಂಗಳೂರಿನ ಈ ಮಾರ್ಗಗಳಲ್ಲಿ ಮೆಟ್ರೋ ಸಂಚಾರ ವ್ಯತ್ಯಯ

Bengaluru Metro: ಮುಂದಿನ ಒಂದು ತಿಂಗಳ ಕಾಲ ಬೆಂಗಳೂರಿನ ಎರಡು ಮಾರ್ಗಗಳಲ್ಲಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆಯಲ್ಲಿ ತಿಳಿಸಿದೆ.

ನಮ್ಮ ಮೆಟ್ರೋ
ನಮ್ಮ ಮೆಟ್ರೋ

ಬೆಂಗಳೂರು: ಜುಲೈ 10 ರಿಂದ ಆಗಸ್ಟ್​ 9ರ ವರೆಗೆ ಬೆಂಗಳೂರಿನ ಎರಡು ಮಾರ್ಗಗಳಲ್ಲಿ ನಮ್ಮ ಮೆಟ್ರೋ (Namma Metro) ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆಯಲ್ಲಿ ತಿಳಿಸಿದೆ.

ನೇರಳೆ ಮಾರ್ಗದಲ್ಲಿ ಎಸ್‌ವಿ ರಸ್ತೆ -ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣ ಹಾಗೂ ಕೆಆರ್ ಪುರಂ-ವೈಟ್‌ಫೀಲ್ಡ್‌ - ಈ ಎರಡು ಮಾರ್ಗಗಳಲ್ಲಿ ನಮ್ಮ ಮೆಟ್ರೋ ಸೇವೆಯನ್ನು ಒಂದು ತಿಂಗಳ ಕಾಲ ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಮೊಟಕುಗೊಳಿಸಲಾಗಿದೆ. ಉಳಿದಂತೆ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಯಥಾಸ್ಥಿತಿಯಲ್ಲಿರಲಿದೆ.

ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಸಂಪರ್ಕ ಕಲ್ಪಿಸಲು ಸಿಗ್ನಲಿಂಗ್ ಮತ್ತು ಇತರ ಅಂತಿಮ ಹಂತದ ಕಾಮಗಾರಿಗಳನ್ನು ಕೈಗೊಳ್ಳುವ ಕಾರಣ ಒಂದು ತಿಂಗಳ ಕಾಲ ಮುಂಜಾನೆ 2 ಗಂಟೆಗಳ ಸಮಯ 2 ಮಾರ್ಗಗಳಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕಾರಿಗಳು ತಿಳಿಸಿದ್ದಾರೆ.

ಈ ಕೆಳಗಿನ ಮಾರ್ಗಗಳಲ್ಲಿ ಬೆಳಿಗ್ಗೆ 5.00 ರಿಂದ 7.00 ರವರೆಗೆ ಒಂದು ತಿಂಗಳು ಮೆಟ್ರೋ ರೈಲು ಸೇವೆಗಳು ಲಭ್ಯವಿರುವುದಿಲ್ಲ.

1) ಬೈಯಪ್ಪನಹಳ್ಳಿ ಟರ್ಮಿನಲ್‌ನಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ.

2) ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ).

ಆದರೆ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಮತ್ತು ಕೆಂಗೇರಿ ನಡುವೆ ಬೆಳಿಗ್ಗೆ 5.00 ರಿಂದ 7.00 ರವರೆಗೆ ರೈಲು ಸೇವೆಗಳು ಲಭ್ಯವಿರುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ 7.00 ಗಂಟೆಯ ನಂತರ ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮತ್ತು ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳ ನಡುವೆ ವಾಣಿಜ್ಯ ರೈಲುಗಳ ಸಂಚಾರವು ಎಂದಿನಂತೆ ರಾತ್ರಿ 10 ಗಂಟೆಯವರೆಗೆ ಇರಲಿದೆ. ಗ್ರೀನ್ ಲೈನ್‌ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ನಮ್ಮ ಮೆಟ್ರೋ ಸುರಕ್ಷತೆಗೆ ವಿಟಿ210 ಸರಣಿಯ ಕಣ್ಣಾವಲು ಕ್ಯಾಮೆರಾ

ವಿಶ್ವದ ಅತ್ಯಂತ ವೇಗವಾಗಿ ಬೆಳೆಯುವ ನಗರಗಳಲ್ಲಿ ಒಂದಾದ ಬೆಂಗಳೂರಿನ ಮೆಟ್ರೋ ರೈಲುಗಳಲ್ಲಿ ಲಕ್ಷಾಂತರ ಜನರು ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆ ಖಚಿತಪಡಿಸಿಕೊಳ್ಳಲು ಬಿಎಂಆರ್‌ಸಿಎಲ್‌ ತನ್ನ ನಿಲ್ದಾಣಗಳಿಗೆ ಮತ್ತು ಡಿಪೋಗಳಿಗೆ ಅತ್ಯಾಧುನಿಕ ಕ್ಯಾಮೆರಾ ವ್ಯವಸ್ಥೆಯನ್ನು ಒದಗಿಸುವ ಜವಾಬ್ದಾರಿಯನ್ನು ಇನ್ಫಿನೊವಾಗೆ ನೀಡಿತ್ತು.

ಈ ಪ್ರಾಜೆಕ್ಟ್‌ನಡಿ ಬಿಎಂಆರ್‌ಸಿಎಲ್‌ನ ಒಟ್ಟು 28 ಮೆಟ್ರೋ ನಿಲ್ದಾಣಗಳು ಮತ್ತು 3 ಡಿಪೋಗಳು ಒಳಗೊಳ್ಳಲಿವೆ. ಬೆಂಗಳೂರು ಮೆಟ್ರೋಗೆ ಇನ್ಫಿನೊವಾವು ವಿಟಿ210 ಸರಣಿಯ ಕ್ಯಾಮೆರಾಗಳನ್ನು ಅಳವಡಿಸಿದೆ. ಪ್ರತಿನಿಲ್ದಾಣಕ್ಕೆ ಸುಮಾರು 64 ಸ್ಥಿರ ಕ್ಯಾಮೆರಾಗಳನ್ನು ಅಳವಡಿಸಿದೆ.

Whats_app_banner