Bengaluru Metro: ಬೆಂಗಳೂರು ಮೆಟ್ರೋ ದರ ಕಡಿಮೆ ಮಾಡಲು ಸಿದ್ದರಾಮಯ್ಯ ಸೂಚನೆ; ಪ್ರಯಾಣಿಕರ ಹಿತರಕ್ಷಣೆಗೆ ಮುಂದಾದ ಮುಖ್ಯಮಂತ್ರಿ
ಕನ್ನಡ ಸುದ್ದಿ  /  ಕರ್ನಾಟಕ  /  Bengaluru Metro: ಬೆಂಗಳೂರು ಮೆಟ್ರೋ ದರ ಕಡಿಮೆ ಮಾಡಲು ಸಿದ್ದರಾಮಯ್ಯ ಸೂಚನೆ; ಪ್ರಯಾಣಿಕರ ಹಿತರಕ್ಷಣೆಗೆ ಮುಂದಾದ ಮುಖ್ಯಮಂತ್ರಿ

Bengaluru Metro: ಬೆಂಗಳೂರು ಮೆಟ್ರೋ ದರ ಕಡಿಮೆ ಮಾಡಲು ಸಿದ್ದರಾಮಯ್ಯ ಸೂಚನೆ; ಪ್ರಯಾಣಿಕರ ಹಿತರಕ್ಷಣೆಗೆ ಮುಂದಾದ ಮುಖ್ಯಮಂತ್ರಿ

Bengaluru Metro Price: ಬೆಂಗಳೂರು ಮೆಟ್ರೋ ಟಿಕೆಟ್‌ ದರ ಏರಿಕೆ ಕುರಿತು ಸಾರ್ವಜನಿಕರ ವಿರೋಧ ವ್ಯಕ್ತವಾಗಿತ್ತು. ಇದೀಗ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದಿದ್ದಾರೆ.

Bengaluru Metro: ಬೆಂಗಳೂರು ಮೆಟ್ರೋ ದರ ಕಡಿಮೆ ಮಾಡಲು ಸಿದ್ದರಾಮಯ್ಯ ಸೂಚನೆ
Bengaluru Metro: ಬೆಂಗಳೂರು ಮೆಟ್ರೋ ದರ ಕಡಿಮೆ ಮಾಡಲು ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.

ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದೇ ಫೆಬ್ರವರಿ 9ರಿಂದ ಅನ್ವಯವಾಗುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮವು ಪ್ರಯಾಣ ದರ ಏರಿಕೆ ಮಾಡಿ ಆದೇಶ ಹೊರಡಿಸಿತ್ತ. ಹೊಸ ದರದ ಅನ್ವಯ ಪ್ರತಿ ಬಾರಿ ಪ್ರಯಾಣಿಸುವಾಗಲೂ ಸರಾಸರಿ 10 ರಿಂದ 90 ರೂಪಾಯಿಯವರೆಗೆ ಟಿಕೆಟ್ ದರ ತೆರಬೇಕಾಗಿತ್ತು. 

ಮೊದಲ 2 ಕಿಮೀ ವರೆಗೆ 10 ರೂ, 2 ರಿಂದ 4 ಕಿಮೀಗೆ 20 ರೂ, 4 ರಿಂದ 6 ಕಿಮೀಗೆ 30 ರೂ, 6 ರಿಂದ 8 ಕಿಮೀಗೆ 40 ರೂ, 8 ರಿಂದ 10 ಕಿಮೀಗೆ 50 ರೂ, 10 ರಿಂದ 15 ಕಿಮೀಗೆ 60 ರೂ, 15 ರಿಂದ 20 ಕಿಮೀಗೆ 70 ರೂ, 20 ರಿಂದ 25 ಕಿಮೀಗೆ 80 ರೂ, 25 ರಿಂದ 30 ಕಿಮೀಗೆ 90 ರೂ, 30 ಕಿಮೀ ನಂತರದ ಅಂತರಕ್ಕೆ 90 ರೂಪಾಯಿ ಟಿಕೆಟ್‌ ದರ ನಿಗದಿಪಡಿಸಲಾಗಿತ್ತು. ಇದಕ್ಕೆ ವ್ಯಾಪಕ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು. ಬೆಂಗಳೂರು ಮೆಟ್ರೋದಲ್ಲಿ ಈಗ 25 ಕಿಮೀಗಿಂತ ಹೆಚ್ಚಿನ ದೂರದ ಪ್ರಯಾಣಕ್ಕೆ 90 ರೂಪಾಯಿ ಪಾವತಿಸಬೇಕು.

Praveen Chandra B

TwittereMail
ಪ್ರವೀಣ್ ಚಂದ್ರ ಪುತ್ತೂರು: 'ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ'ದಲ್ಲಿ ಸಹಾಯಕ ಸುದ್ದಿ ಸಂಪಾದಕ. ಒನ್‌ ಇಂಡಿಯಾ, ವಿಜಯ ಕರ್ನಾಟಕದಲ್ಲಿ ಒಟ್ಟು 16 ವರ್ಷಗಳ ಅನುಭವ. ಆನ್‌ಲೈನ್‌ ಪತ್ರಿಕೋದ್ಯಮದಲ್ಲಿ ಎತ್ತರದ ಸಾಧನೆ ಮಾಡುವ ಕನಸು. ಡಿಜಿಟಲ್‌ ಜಗತ್ತಿನಲ್ಲಿ ಹೊಸತನ್ನು ಕಲಿಯುವ ಆಸಕ್ತಿ. ಮನರಂಜನೆ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ವಾಣಿಜ್ಯ, ಕರ್ನಾಟಕ, ದೇಶ- ವಿದೇಶ, ಸಿನಿಮಾ, ಷೇರುಪೇಟೆ, ಜೀವನಶೈಲಿ... ಹಲವು ವಿಚಾರಗಳ ಬಗ್ಗೆ ತಳಸ್ಪರ್ಶಿಯಾಗಿ ಬರೆಯಬಲ್ಲರು. ಎಸ್‌ಇಒ ತಂತ್ರಗಳನ್ನು ಪತ್ರಿಕೋದ್ಯಮದ ಹದಕ್ಕೆ ಪಳಗಿಸುವ ಸಾಮರ್ಥ್ಯ ರೂಢಿಸಿಕೊಂಡವರು. ಇಮೇಲ್: praveen.chandra@htdigital.in
Whats_app_banner