Bengaluru News: ಬೆಂಗಳೂರು ಮೆಟ್ರೋ ಹಳಿ ಸಮೀಪ ವ್ಯಕ್ತಿಯ ನಡಿಗೆ; ನಮ್ಮ ಮೆಟ್ರೋ ರೈಲು ಸಂಚಾರ ವ್ಯತ್ಯಯ
ಬೆಂಗಳೂರು ಮೆಟ್ರೋ ಹಳಿ ಸಮೀಪದ ವಯಾಡಕ್ಟ್‌ನಲ್ಲಿ ವ್ಯಕ್ತಿಯೊಬ್ಬರು ನಡೆದಾಡಿದ ಕಾರಣ ನಿನ್ನೆ (ಮಾರ್ಚ್ 12) ಮಧ್ಯಾಹ್ನ ನಂತರ ಸ್ವಲ್ಪ ಹೊತ್ತು ನಮ್ಮ ಮೆಟ್ರೋ ರೈಲು ಸಂಚಾರ ವ್ಯತ್ಯಯವಾಗಿತ್ತು. ಈ ವಿದ್ಯಮಾನದ ವಿವರ ಇಲ್ಲಿದೆ.
ಬೆಂಗಳೂರು: ಕೆಂಗೇರಿ ಮೆಟ್ರೋ ನಿಲ್ದಾಣದ ವಯಾಡಕ್ಟ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಕಾಲಿಟ್ಟ ನಂತರ ಬೆಂಗಳೂರಿನ ನೇರಳೆ ಮಾರ್ಗದ ಮೆಟ್ರೋ ಸೇವೆಗಳು ಮತ್ತೆ ಸ್ಥಗಿತಗೊಂಡವು. ರಾಜರಾಜೇಶ್ವರಿ ನಗರ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಮಂಗಳವಾರ (ಮಾರ್ಚ್ 12) ಮಧ್ಯಾಹ್ನ 2.30 ರ ಸುಮಾರಿಗೆ ಹಳಿಗಳ ಬಳಿ ವಯಾಡಕ್ಟ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ನಮ್ಮ ಮೆಟ್ರೋ ಅಧಿಕಾರಿಗಳು ಗುರುತಿಸಿದರು. ಕೂಡಲೇ ಆ ವ್ಯಕ್ತಿಯಲ್ಲಿ ಅಲ್ಲಿಂದ ಸ್ಥಳಾಂತರಿಸಲು 27 ನಿಮಿಷಗಳ ಕಾಲ ಮೆಟ್ರೋ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು ಎಂದು ಮೆಟ್ರೋ ಮೂಲಗಳು ತಿಳಿಸಿವೆ.
ಈ ಬಗ್ಗೆ ಕಾಂಗ್ರೆಸ್ ವಿರುದ್ಧ ಬಿಜೆಪಿಯ ತೇಜಸ್ವಿ ಸೂರ್ಯ ವಾಗ್ದಾಳಿ ಹಳಿಗಳಲ್ಲಿ ವಿದ್ಯುತ್ ಸರಬರಾಜನ್ನು ನಿಲ್ಲಿಸುವಂತೆ ಅಧಿಕಾರಿಗಳು ತಕ್ಷಣ ಎಂಜಿನಿಯರಿಂಗ್ ತಂಡಕ್ಕೆ ನಿರ್ದೇಶನ ನೀಡಿದರು. ತನಿಖೆ ನಡೆಯುತ್ತಿದೆ ಮತ್ತು ವಯಾಡಕ್ಟ್‌ನಲ್ಲಿ ಪತ್ತೆಯಾದ ವ್ಯಕ್ತಿಯ ಬಗ್ಗೆ ಹೆಚ್ಚಿನ ವಿವರಗಳು ಇನ್ನೂ ತಿಳಿದುಬಂದಿಲ್ಲ.
ಮೆಟ್ರೋ ಹಳಿಗಳ ಮೇಲೆ ಜನ ಹಾರಿದ ನಂತರ ನಮ್ಮ ಮೆಟ್ರೋ ಸೇವೆಗಳನ್ನು ಸ್ಥಗಿತಗೊಳಿಸುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಜನವರಿಯಲ್ಲಿ ರೈಲು ಮೆಟ್ರೋ ನಿಲ್ದಾಣವನ್ನು ಸಮೀಪಿಸಿದಾಗ ಯುವಕನೊಬ್ಬ ಹಳಿಯ ಮೇಲೆ ಹಾರಿದ. ಲೋಕೋ ಪೈಲಟ್ ಟ್ರ್ಯಾಕ್ ನಲ್ಲಿದ್ದ ವ್ಯಕ್ತಿಯನ್ನು ಗಮನಿಸಿ ತುರ್ತು ಬ್ರೇಕ್ ಹಾಕುವ ಮೂಲಕ ರೈಲನ್ನು ನಿಲ್ಲಿಸಿದರು. ಆದಾಗ್ಯೂ, ರೈಲು ಆ ವ್ಯಕ್ತಿಗೆ ಭಾಗಶಃ ಡಿಕ್ಕಿ ಹೊಡೆದಿದೆ, ಮತ್ತು ಭದ್ರತಾ ಸಿಬ್ಬಂದಿ ಅವನನ್ನು ರಕ್ಷಿಸಿದ್ದಾರೆ. ಬಿಎಂಆರ್ ಸಿಎಲ್ ಸಿಬ್ಬಂದಿ ತಕ್ಷಣ ತುರ್ತು ಟ್ರಿಪ್ ವ್ಯವಸ್ಥೆ ಮೂಲಕ ರೈಲಿಗೆ ವಿದ್ಯುತ್ ಸರಬರಾಜನ್ನು ನಿಲ್ಲಿಸಿದರು. ಗ್ರೀನ್ ಲೈನ್ ನಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಮೆಟ್ರೋ ಹಳಿಗಳಲ್ಲಿ ಹೋಗುವುದು ಅತ್ಯಂತ ಅಪಾಯಕಾರಿ. ಆದ್ಧರಿಂದ ಅದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಒತ್ತಿಹೇಳಿತು. "ಹಳಿಗಳ ಉದ್ದಕ್ಕೂ ಚಲಿಸುವ ರೈಲು 750 ವೋಲ್ಟ್ ವಿದ್ಯುತ್ ಶಕ್ತಿಯಲ್ಲಿ ಚಲಿಸುತ್ತದೆ. ಇದು ಅತ್ಯಂತ ಅಪಾಯಕಾರಿಯಾಗಿರುವುದರಿಂದ ಹಳಿಗಳ ಬಳಿ ಹೋಗುವುದಕ್ಕೆ ಯಾರಿಗೂ ಅವಕಾಶವಿಲ್ಲ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೊಳಕು ಉಡುಪು ಧರಿಸಿದ್ದ ವ್ಯಕ್ತಿಗೆ ಪ್ರವೇಶ ನಿರಾಕರಣೆ
ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹರಿದಾಡಿತ್ತು. ಈ ವಿದ್ಯಮಾನದ ಬಗ್ಗೆ ಫೆಬ್ರವರಿ 26 ರಂದು ಸ್ಪಷ್ಟನೆ ನೀಡಿರುವ ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ಇಲ್ಲಿ ಎಲ್ಲರಿಗೂ ಪ್ರಯಾಣಕ್ಕೆ ಅವಕಾಶವಿದೆ. ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ, ಭದ್ರತಾ ಮೇಲ್ವಿಚಾರಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ ಎಂದು ಎಕ್ಸ್ ತಾಣದಲ್ಲಿ ಮಾಹಿತಿ ನೀಡಿತ್ತು.
(This copy first appeared in Hindustan Times Kannada website. To read more like this please logon to kannada.hindustantimes.com)