ಭಾನುವಾರ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಭಾಗಶಃ ಸ್ಥಗಿತ; ಪ್ರಯಾಣಿಕರೇ ಟೈಮ್ ಅಡ್ಜಸ್ಟ್ ಮಾಡಿಕೊಳ್ಳಿ
Namma Metro: ಭಾನುವಾರದಂದು ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು ಸದರಿ ಕಾರ್ಯವನ್ನು ನಿರ್ವಹಿಸಲು ಎಂ.ಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳ ಸಮಯ ಬದಲಾಗಿದೆ.
ಬೆಂಗಳೂರು: ನವೆಂಬರ್ 5 ಭಾನುವಾರದಂದು ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವೆ ವಾಣಿಜ್ಯ ಸೇವೆಯು ಭಾಗಶಃ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಮೆಟ್ರೋ ನಿಗಮವು, ಭಾನುವಾರದಂದು ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು ಸದರಿ ಕಾರ್ಯವನ್ನು ನಿರ್ವಹಿಸಲು ಎಂ.ಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7.00ಗಂಟೆಗೆ ಬದಲಾಗಿ 9.00 ಗಂಟೆಗೆ ಪ್ರಾರಂಭವಾಗಲಿದೆ.
ಬೆಳಗ್ಗೆ 9.00 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ, ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ. ಚಲ್ಲಘಟ್ಟ ಮತ್ತು ಎಂ.ಜಿ ರಸ್ತೆ, ಬೈಯಪ್ಪನಹಳ್ಳಿ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ), ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವಿನ ಮಾರ್ಗಗಳಲ್ಲಿ, ರೈಲುಗಳ ಸೇವೆಯು ಬೆಳಿಗ್ಗೆ 7.00 ಗಂಟೆಗೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ.
ನಮ್ಮ ಮೆಟ್ರೋ ಪ್ರಯಾಣಿಕರು ಈ ಬದಲಾವಣೆಯನ್ನು ಗಮನಿಸಬೇಕೆಂದು ಮೆಟ್ರೊ ನಿಗಮ ತಿಳಿಸಿದ್ದು, ಇದರಿಂದಾಗುವ ಅನಾನುಕೂಲತೆಗೆ ನಿಗಮವು ವಿಷಾದಿಸಿದೆ.