ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು: ಕಟ್ಟಡದ ಮೇಲೆ ಬೀಳುವ ಮಳೆ ನೀರು ನೇರವಾಗಿ ಒಳಚರಂಡಿಗೆ ಸೇರುತ್ತಿದೆಯಾ ಚೆಕ್ ಮಾಡಿಕೊಳ್ಳಿ, ದಂಡ ವಿಧಿಸಲಿದೆ ಜಲಮಂಡಳಿ

ಬೆಂಗಳೂರು: ಕಟ್ಟಡದ ಮೇಲೆ ಬೀಳುವ ಮಳೆ ನೀರು ನೇರವಾಗಿ ಒಳಚರಂಡಿಗೆ ಸೇರುತ್ತಿದೆಯಾ ಚೆಕ್ ಮಾಡಿಕೊಳ್ಳಿ, ದಂಡ ವಿಧಿಸಲಿದೆ ಜಲಮಂಡಳಿ

ಬೆಂಗಳೂರು: ನಿಮ್ಮ ಕಟ್ಟಡದ ಮೇಲೆ ಬಿದ್ದ ಮಳೆ ನೀರು ನೇರವಾಗಿ ಒಳಚರಂಡಿಗೆ ಸೇರುತ್ತಿದೆಯಾ, ಚೆಕ್ ಮಾಡಿಕೊಳ್ಳಿ. ಹೌದು ಎಂದಾದರೆ, ಜಲ ಮಂಡಳಿ ನಿಮ್ಮ ವಿರುದ್ಧ ಕ್ರಮ ಜರುಗಿಸುತ್ತದೆ ಮತ್ತು ದಂಡ ವಿಧಿಸುತ್ತದೆ ಎಚ್ಚರ! (ವರದಿ- ಎಚ್. ಮಾರುತಿ, ಬೆಂಗಳೂರು)

ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವವರಿಗೆ ಮೇ 1 ರಿಂದ ನೋಟಿಸ್‌ ನೀಡಲು ಜಲಮಂಡಳಿ ನಿರ್ಧಾರ
ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವವರಿಗೆ ಮೇ 1 ರಿಂದ ನೋಟಿಸ್‌ ನೀಡಲು ಜಲಮಂಡಳಿ ನಿರ್ಧಾರ

ಬೆಂಗಳೂರು: ಮಳೆ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವವರ ವಿರುದ್ದ ಕ್ರಮ ಜರುಗಿಸಲು ಮತ್ತು ದಂಡ ವಿಧಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ಧರಿಸಿದೆ. ಮುಂಗಾರು ಆರಂಭದ ಹಿನ್ನೆಲೆಯಲ್ಲಿ ಜಲಮಂಡಳಿ ಅಧ್ಯಕ್ಷ ಡಾ ವಿ. ರಾಮ್‌ ಪ್ರಸಾತ್‌ ಮನೋಹರ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಮಳೆ ನೀರನ್ನು ಇಂಗಿಸುವುದನ್ನು ಪ್ರೋತ್ಸಾಹಿಸಲು ಹಾಗೂ ಒಳಚರಂಡಿ ಮೇಲಿನ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ. ದಂಡ ವಿಧಿಸುವುದು ಅಥವಾ ಶಿಕ್ಷೆ ನೀಡುವುದು ಮಂಡಳಿ ಗುರಿ ಅಲ್ಲವೇ ಅಲ್ಲ. ಬದಲಾಗಿ ಮಳೆ ನೀರು ಇಂಗಿಸುವುದು ಮತ್ತು ಒಳಚರಂಡಿ ಮೇಲಿನ ಒತ್ತಡ ಕಡಿಮೆ ಮಾಡುವುದು ಈ ಕ್ರಮದ ಉದ್ದೇಶ. ಒಟ್ಟಾರೆ ಮಳೆ ನೀರು ಇಂಗಿಸುವ ಉದ್ದೇಶ ಈಡೇರಬೇಕು ಎಂದು ಒತ್ತಿ ಹೇಳಿದ್ದಾರೆ.

ಮಳೆನೀರು ಕೊಯ್ಲು ಪದ್ಧತಿ ಅಳವಡಿಕೆಗೆ ಆದ್ಯತೆ

ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಳ್ಳುವ ಮೂಲಕ ನೀರಿನ ಸದ್ಬಳಕೆ ಮಾಡುವುದು ಕಡ್ಡಾಯವಾಗಿದೆ. ಆದರೆ, ಈ ಉದ್ದೇಶ ಈಡೇರುತ್ತಿಲ್ಲ. ಬಹುತೇಕ ಪ್ರದೇಶಗಳಲ್ಲಿ ಮಳೆ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡಲಾಗುತ್ತಿದೆ. ಇದರಿಂದ ನೀರು ವ್ಯರ್ಥವಾಗುತ್ತಿದೆ. ಜೊತೆಗೆ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಒಳಚರಂಡಿ ಮೇಲೆ ಒತ್ತಡ ಹೆಚ್ಚಿದರೆ ನೀರು ಆಚೆ ಬಂದು ರಸ್ತೆಗಳ ಮೇಲೆ ಹರಿಯುತ್ತದೆ. ಆದ್ದರಿಂದ ಮಳೆ ನೀರನ್ನು ನೇರವಾಗಿ ಒಳಚರಂಡಿಗೆ ಹರಿಯಬಿಡುವವರ ವಿರುದ್ಧ ಕ್ರಮ ಜರುಗಿಸಲು ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಸುರಿಯುವ ಮಳೆಯ ನೀರನ್ನು ಸಮರ್ಪಕವಾಗಿ ಬಳಕೆ ಮಾಡುವುದರಿಂದ ನಗರದ ಅಂತರ್ಜಲ ಮಟ್ಟವನ್ನು ಗಣನೀಯವಾಗಿ ಹೆಚ್ಚಿಸಬಹುದಾಗಿದೆ. ಕೆಲವು ಪ್ರದೇಶಗಳಲ್ಲಿ ಮಳೆ ನೀರು ಕೊಯ್ಲು ಪದ್ದತಿಯ ಮೂಲಕ ಸಂಗ್ರಹಿಸಲಾದ ನೀರನ್ನು ಒಳಚರಂಡಿಗೆ ನೇರವಾಗಿ ಹರಿಯಬಿಡಲಾಗುತ್ತಿದೆ. ಇದರಿಂದ ಮಳೆ ನೀರು ಒಳಚರಂಡಿಗೆ ಸೇರ್ಪಡೆಗೊಂಡು ಪೋಲಾಗುವುದಲ್ಲದೇ, ಒಳಚರಂಡಿ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ. ಈ ಅವಘಡವನ್ನು ತಡೆಗಟ್ಟಿ ಸಾರ್ವಜನಿಕರು ಮಳೆ ನೀರನ್ನು ಸಮರ್ಪಕವಾಗಿ ಸಂಗ್ರಹಿಸಿ ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದರು, ಈ ಹಿನ್ನಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧ್ಯಕ್ಷರು ಹೇಳಿದ್ದಾರೆ.

ಮಳೆ ನೀರು ಕೊಯ್ಲು ಅಳವಡಿಸದ ಕಟ್ಟಡಗಳ ಸಮೀಕ್ಷೆ

ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಳ್ಳಲು ಸಾಧ್ಯವಿರುವ ಆದರೆ ಇದುವರೆಗೂ ಅಳವಡಿಸಿಕೊಳ್ಳದೇ ಇರುವಂತಹ ಕಟ್ಟಡಗಳ ಸಮೀಕ್ಷೆಗೂ ಜಲಮಂಡಳಿ ಮುಂದಾಗಿದೆ. ಈ ಮೂಲಕ ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಳ್ಳದೇ ಇರುವ ಹಾಗೂ ಅಳವಡಿಸಿಕೊಳ್ಳುವ ಮೂಲಕ ಆಗುತ್ತಿರುವ ಅನುಕೂಲತೆಗಳ ಬಗ್ಗೆ ಮಾಹಿತಿಯನ್ನು ಕ್ರೋಡೀಕರಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ.

ಉದ್ಯಾನ ನಗರಿ ಬೆಂಗಳೂರಿನಲ್ಲಿ ಬೀಳುತ್ತಿರುವ ಮಳೆ ನೀರನ್ನು ಸದ್ಬಳಕೆ ಮಾಡುವ ಮೂಲಕ ನಗರದ ನೀರಿನ ಅಭಾವವನ್ನು ನಿರ್ವಹಿಸಲು ಸಾಧ್ಯವಿದೆ. ನೀರಿನ ಕೊರತೆಯನ್ನು ನಿರ್ವಹಿಸಿದ ರೀತಿಯಲ್ಲಿಯೇ ಮಳೆಗಾಲವನ್ನು ನಿರ್ವಹಿಸಲು ಇದು ಬಹಳ ಮುಖ್ಯ ಕ್ರಮವಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ ವಿ. ರಾಮ್‌ ಪ್ರಸಾತ್‌ ಮನೋಹರ್‌ ಅಭಿಪ್ರಾಯಪಟ್ಟಿದ್ದಾರೆ.

(ವರದಿ- ಎಚ್. ಮಾರುತಿ, ಬೆಂಗಳೂರು)

ಟಿ20 ವರ್ಲ್ಡ್‌ಕಪ್ 2024