Bengaluru Rains: ಬೆಂಗಳೂರಿನಲ್ಲಿ ಮತ್ತೆ ಮುಂಗಾರು ಮಳೆ ಆರಂಭ, ಜನರಲ್ಲಿ ಹರ್ಷ
ಕನ್ನಡ ಸುದ್ದಿ  /  ಕರ್ನಾಟಕ  /  Bengaluru Rains: ಬೆಂಗಳೂರಿನಲ್ಲಿ ಮತ್ತೆ ಮುಂಗಾರು ಮಳೆ ಆರಂಭ, ಜನರಲ್ಲಿ ಹರ್ಷ

Bengaluru Rains: ಬೆಂಗಳೂರಿನಲ್ಲಿ ಮತ್ತೆ ಮುಂಗಾರು ಮಳೆ ಆರಂಭ, ಜನರಲ್ಲಿ ಹರ್ಷ

ಬಿಸಿಲಿಗೆ ಪರಿತಪಿಸುತ್ತಿದ್ದ ಜನರಿಗೆ ವರುಣನ ಸಿಂಚನ ನೆಮ್ಮದಿ ಮೂಡಿಸಿದೆ.

ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಮಳೆ ಸುರಿಯಿತು.
ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಮಳೆ ಸುರಿಯಿತು. (twitter.com/bykarthikreddy)

ಬೆಂಗಳೂರು: ನಗರದಲ್ಲಿ ಗುರುವಾರ (ಆಗಸ್ಟ್ 31) ರಾತ್ರಿ ಮತ್ತೆ ಮುಂಗಾರು ಮಳೆ ಆರಂಭವಾಗಿದೆ. ರಾತ್ರಿ 10 ಗಂಟೆಯ ವೇಳೆಗೆ ನಗರದ ಮಲ್ಲೇಶ್ವರ, ಕೋರಮಂಗಲ, ಹೆಬ್ಬಾಳ, ಮೇಕರಿ ವೃತ್ತ, ಕಾರ್ಪೊರೇಷನ್, ಶಾಂತಿನಗರ, ಸರ್ಜಾಪುರ ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಹೊಸ ರೋಡ್ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು ಜನರು ಹರ್ಷ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಎಂದಿನಂತೆ ಮಳೆಯ ನೀರು ರಸ್ತೆಯ ಮೇಲೆ ಹರಿದಿದೆ. ಜನರು ಮನೆಗಳಿಗೆ ತೆರಳಲು ಪರದಾಡಿದ್ದಾರೆ. ಸಾಕಷ್ಟು ಜನರು ಸಾಮಾಜಿಕ ಮಾಧ್ಯಮಗಳಲ್ಲಿ ಮಳೆ ವಿಡಿಯೊಗಳನ್ನು ಹಂಚಿಕೊಂಡಿದ್ದಾರೆ. ಮಳೆಯಿಂದಾಗಿ ನಗರದ ವಿವಿಧೆಡೆ ಟ್ರಾಫಿಕ್ ಜಾಮ್ ಸಹ ಉಂಟಾಯಿತು.

ಬೆಂಗಳೂರು ಮಾತ್ರವಲ್ಲದೆ ದೊಡ್ಡಬಳ್ಳಾಪುರ, ಮಂಡ್ಯ, ಕೋಲಾರ, ದಾವಣಗೆರೆ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿಯೂ ಗುರುವಾರ ಉತ್ತಮ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯು ಮೊದಲೇ ಮುನ್ನೆಚ್ಚರಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Whats_app_banner