ಕನ್ನಡ ಸುದ್ದಿ  /  ಕರ್ನಾಟಕ  /  ರಾಜಸ್ಥಾನ ಮೂಲದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಡಿಕೆ ಸುರೇಶ್ ಪರ ಬೆಟ್ಟಿಂಗ್ ಮಾಡಿದ ಲಾರಿ ಮಾಲೀಕ ಆತ್ಮಹತ್ಯೆ

ರಾಜಸ್ಥಾನ ಮೂಲದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಡಿಕೆ ಸುರೇಶ್ ಪರ ಬೆಟ್ಟಿಂಗ್ ಮಾಡಿದ ಲಾರಿ ಮಾಲೀಕ ಆತ್ಮಹತ್ಯೆ

ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ, ರಾಜಸ್ಥಾನ ಮೂಲದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಡಿಕೆ ಸುರೇಶ್ ಪರ ಬೆಟ್ಟಿಂಗ್ ಮಾಡಿದ ಲಾರಿ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಇನ್ನೊಂದೆಡೆ, ಬೈಕ್ ವಿಚಾರಕ್ಕೆ ತಂದೆಯಿಂದಲೇ ಮಗನ ಕೊಲೆಯಾಗಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)

ರಾಜಸ್ಥಾನ ಮೂಲದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ. ಡಿಕೆ ಸುರೇಶ್ ಪರ ಬೆಟ್ಟಿಂಗ್ ಮಾಡಿದ ಲಾರಿ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. (ಆತ್ಮಹತ್ಯೆ ತಡೆಗೆ ಸಂಬಂಧಿಸಿದ ಚಿತ್ರಗಳನ್ನು ಇಲ್ಲಿ ಪ್ರಾಮುಖ್ಯ ನೀಡಿ ಪ್ರಕಟಿಸಲಾಗಿದೆ.)
ರಾಜಸ್ಥಾನ ಮೂಲದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ. ಡಿಕೆ ಸುರೇಶ್ ಪರ ಬೆಟ್ಟಿಂಗ್ ಮಾಡಿದ ಲಾರಿ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. (ಆತ್ಮಹತ್ಯೆ ತಡೆಗೆ ಸಂಬಂಧಿಸಿದ ಚಿತ್ರಗಳನ್ನು ಇಲ್ಲಿ ಪ್ರಾಮುಖ್ಯ ನೀಡಿ ಪ್ರಕಟಿಸಲಾಗಿದೆ.)

ಬೆಂಗಳೂರು: ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಲೋಕೇಂದ್ರನಾಥ ಕುಮಾರ್ ಸಿಂಗ್ (22) ಎಂದು ತಿಳಿದುಬಂದಿದೆ.

ಟ್ರೆಂಡಿಂಗ್​ ಸುದ್ದಿ

ರಾಜಸ್ಥಾನ ಮೂಲದ ಈ ವಿದ್ಯಾರ್ಥಿ ಶಿವಾಜಿ ನಗರದ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು. ಈ ಕಾಲೇಜನ್ನು ಹಿಂದೆ ಬೌರಿಂಗ್ ಮತ್ತು ಲೇಡಿ ಕರ್ಜನ್ ಮೆಡಿಕಲ್ ಕಾಲೇಜು ಎಂದು ಕರೆಯಲಾಗುತ್ತಿತ್ತು. ಈತನ ಸಹಪಾಠಿ ಕಾಲೇಜು ಮುಗಿಸಿಕೊಂಡು ಮಧ್ಯಾಹ್ನ 3 ಗಂಟೆಗೆ ಕೊಠಡಿಗೆ ಹಿಂತಿರುಗಿ ಬಂದಾಗ ರೂಂ ಬಾಗಿಲು ತೆರೆದಿರಲಿಲ್ಲ. ನಂತರ ಕೊಠಡಿಯ ಬಾಗಿಲನ್ನು ಒಡೆದು ಪ್ರವೇಶಿಸಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ಈ ಮಾಹಿತಿಯನ್ನು ಲೋಕೇಂದ್ರನಾಥ್ ಅವರ ಪೋಷಕರಿಗೆ ನೀಡಲಾಗಿದ್ದು ಅವರು ಬಂದ ನಂತರ ಮುಂದಿನ ಪ್ರಕ್ರಿಯೆಗಳನ್ನು ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಠಡಿಯಲ್ಲಿ ಡೆತ್ ನೋಟ್ ಸಿಕ್ಕಿದೆ. ಜೊತೆಗೆ ಲ್ಯಾಪ್ ಟಾಪ್ ಮತ್ತು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ತನಿಖೆಯ ನಂತರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಗಮನಿಸಿ: ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ನಿಮ್ಮನ್ನು ಪ್ರೀತಿಸುವ, ಬೆಂಬಲಿಸುವ ಆಪ್ತರು ಇದ್ದೇ ಇರುತ್ತಾರೆ. ನಿಮ್ಮ ಸಮಸ್ಯೆಗಳನ್ನು ಅಂಥವರೊಂದಿಗೆ ಹಂಚಿಕೊಂಡು ನೆರವು ಪಡೆಯಿರಿ. ಆತ್ಮಹತ್ಯೆಯ ಆಲೋಚನೆಗಳು ಮನಸ್ಸಿಗೆ ಪದೇಪದೆ ಬರುತ್ತಿದ್ದರೆ ಹಿಂಜರಿಕೆಯಿಲ್ಲದೆ ಆಪ್ತಸಮಾಲೋಚಕರ ಮಾರ್ಗದರ್ಶನ ಪಡೆದುಕೊಳ್ಳಿ. ತುರ್ತು ಸಂದರ್ಭದಲ್ಲಿ ಬೆಂಗಳೂರಿನ SAHAI ಸಹಾಯವಾಣಿ (080 - 25497777) ಅಥವಾ ನಿಮ್ಹಾನ್ಸ್‌ ಸಹಾಯವಾಣಿಯ (080 – 4611 0007) ನೆರವು ಪಡೆಯಿರಿ

ಡಿ.ಕೆ. ಸುರೇಶ್ ಪರ ಬೆಟ್ಟಿಂಗ್; ಲಾರಿ ಮಾಲೀಕ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಗೆಲ್ಲುತ್ತಾರೆ ಎಂದು ಬೆಟ್ಟಿಂಗ್ ಕಟ್ಟಿ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಬೆಂಗಳೂರಿನ ಮೈಸೂರು ರಸ್ತೆಯ ಬಿಡದಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಡದಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿ 44 ವರ್ಷದ ಶಿವರಾಜು ಮೃತ ದುರ್ದೈವಿ. ಇವರು ಈ ಬಾರಿ ಡಿಕೆ ಸುರೇಶ್ ಗೆದ್ದೇ ಗೆಲ್ಲುತ್ತಾರೆ ಎಂದು ಬೆಟ್ಟಿಂಗ್ ಕಟ್ಟಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಆದರೆ ಸಾಲ ತೀರಿಸಲು ಸಾಧ್ಯವಾಗದೆ ಒತ್ತಡದಿಂದ ಎಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆರಂಭದಲ್ಲಿ ಲಾರಿ ಚಾಲಕನಾಗಿ ಕೆಲಸ ಆರಂಭಿಸಿದ್ದ ಶಿವರಾಜು ನಂತರ 4 ಲಾರಿಗಳ ಮಾಲೀಕರಾಗಿದ್ದರು. ಬೆಟ್ಟಿಂಗ್ ನಲ್ಲಿ ಎಲ್ಲವನ್ನೂ ಕಳೆದುಕೊಂಡು ಅಪಾರ ಸಾಲ ಮಾಡಿಕೊಂಡಿದ್ದರು.

ಗಮನಿಸಿ: ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ನಿಮ್ಮನ್ನು ಪ್ರೀತಿಸುವ, ಬೆಂಬಲಿಸುವ ಆಪ್ತರು ಇದ್ದೇ ಇರುತ್ತಾರೆ. ನಿಮ್ಮ ಸಮಸ್ಯೆಗಳನ್ನು ಅಂಥವರೊಂದಿಗೆ ಹಂಚಿಕೊಂಡು ನೆರವು ಪಡೆಯಿರಿ. ಆತ್ಮಹತ್ಯೆಯ ಆಲೋಚನೆಗಳು ಮನಸ್ಸಿಗೆ ಪದೇಪದೆ ಬರುತ್ತಿದ್ದರೆ ಹಿಂಜರಿಕೆಯಿಲ್ಲದೆ ಆಪ್ತಸಮಾಲೋಚಕರ ಮಾರ್ಗದರ್ಶನ ಪಡೆದುಕೊಳ್ಳಿ. ತುರ್ತು ಸಂದರ್ಭದಲ್ಲಿ ಬೆಂಗಳೂರಿನ SAHAI ಸಹಾಯವಾಣಿ (080 - 25497777) ಅಥವಾ ನಿಮ್ಹಾನ್ಸ್‌ ಸಹಾಯವಾಣಿಯ (080 – 4611 0007) ನೆರವು ಪಡೆಯಿರಿ

ಬೈಕ್ ವಿಚಾರಕ್ಕೆ ತಂದೆಯಿಂದಲೇ ಮಗನ ಕೊಲೆ

ಬೈಕ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತಂದೆಯೇ ಮಗನನ್ನು ಕೊಲೆ ಮಾಡಿರುವ ಪ್ರಕರಣ ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್ ಲೇ ಔಟ್‌ನ ಮುದ್ದಿನಪಾಳ್ಯ ನಿವಾಸಿ ಅಂಜನ್ ಕುಮಾರ್ ಕೊಲೆಯಾದ ಯುವಕ. ಕೊಲೆ ಮಾಡಿದ ಆರೋಪದ ಮೇಲೆ ಅಂಜನ್‌ಕುಮಾರ್ ತಂದೆ 53 ವರ್ಷದ ವೆಂಕಟೇಶ್ ಅವರನ್ನು ಪೊಲೀಸರುಬಂಧಿಸಿದ್ದಾರೆ.

ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ವೆಂಕಟೇಶ್ ಪತ್ನಿ, ಪುತ್ರ ಹಾಗೂ ಪುತ್ರಿ ಜೊತೆ ಮುದ್ದಿನಪಾಳ್ಯದಲ್ಲಿ ವಾಸವಾಗಿದ್ದರು. ಪುತ್ರ ಅಂಜನ್ ಕುಮಾರ್ ಪಿಯುಸಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ಧ. ಆದರೆ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ವೆಂಕಟೇಶ್ ಮಗಳ ಜೊತೆ ಬೈಕ್ ನಲ್ಲಿ ಹೊರಗೆ ಹೋಗಿದ್ದರು. ರಾತ್ರಿ ಮನೆಗೆ ಮರಳಿದಾಗ ಬೈಕ್ ತಂದಿರಲಿಲ್ಲ. ಪುತ್ರ ಅಂಜನ್ ಬೈಕ್ ಎಲ್ಲಿ ಎಂದು ಪ್ರಶ್ನಿಸಿದ್ದ. ಆಗ ಮಾತಿಗೆ ಮಾತು ಬೆಳೆದಿದೆ. ಬೈಕ್ ಎಲ್ಲೋ ನಿಲ್ಲಿಸಿದ್ದೇನೆ, ಬೆಳಗ್ಗೆ ತರುತ್ತೇನೆ ಎಂದು ಉಡಾಫೆಯಿಂದ ಉತ್ತರಿಸಿದ್ದರು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಅಂಜನ್‌ಕುಮಾರ್ ಹೆಲೈಟ್‌ನಿಂದ ತಂದೆಯ ಮೇಲೆ ಹಲ್ಲೆ ಮಾಡಿದ್ದಾನೆ. ಮಗನ ವರ್ತನೆಯಿಂ ಕೋಪಗೊಂಡ ಅಪ್ಪ ಅಡುಗೆ ಕೋಣೆಯಿಂದ ಚಾಕು ತಂದು ಮಗನ ಎದೆಗೆ ಚುಚ್ಚಿದ್ದಾರೆ. ಅಂಜನ್ ಕುಮಾರ್ ತೀವ್ರ ರಕ್ತಸ್ರಾವವಾಗಿ ಕುಸಿದುಬಿದ್ದು, ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

(ವರದಿ- ಎಚ್. ಮಾರುತಿ, ಬೆಂಗಳೂರು)

ಟಿ20 ವರ್ಲ್ಡ್‌ಕಪ್ 2024