ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು ಅಪರಾಧ ಸುದ್ದಿ; ಇಬ್ಬರು ವಿದೇಶಿಯರು ಸೇರಿ ನಾಲ್ವರು ಡ್ರಗ್ಸ್ ಪೆಡ್ಲರ್‌ ಗಳ ಬಂಧನ; 18 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು ಅಪರಾಧ ಸುದ್ದಿ; ಇಬ್ಬರು ವಿದೇಶಿಯರು ಸೇರಿ ನಾಲ್ವರು ಡ್ರಗ್ಸ್ ಪೆಡ್ಲರ್‌ ಗಳ ಬಂಧನ; 18 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು ಅಪರಾಧ ಸುದ್ದಿ; ಇಬ್ಬರು ವಿದೇಶಿಯರು ಸೇರಿ ನಾಲ್ವರು ಡ್ರಗ್ಸ್ ಪೆಡ್ಲರ್‌ ಗಳ ಬಂಧನವಾಗಿದೆ. ಬಂಧಿತರಿಂದ ಒಟ್ಟು 18 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಪುಟ್ಟೇನಹಳ್ಳಿಯಲ್ಲಿ ನೀರಿನ ಟ್ಯಾಂಕರ್ ಡಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ನಡೆದಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)

ಬೆಂಗಳೂರು ಅಪರಾಧ ಸುದ್ದಿ; ಇಬ್ಬರು ವಿದೇಶಿಯರು ಸೇರಿ ನಾಲ್ವರು ಡ್ರಗ್ಸ್ ಪೆಡ್ಲರ್‌ ಗಳ ಬಂಧನ ಮಾಡಿರುವ ಪೊಲೀಸರು ಅವರಿಂದ 18 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ಧಾರೆ. (ಸಾಂಕೇತಿಕ ಚಿತ್ರ)
ಬೆಂಗಳೂರು ಅಪರಾಧ ಸುದ್ದಿ; ಇಬ್ಬರು ವಿದೇಶಿಯರು ಸೇರಿ ನಾಲ್ವರು ಡ್ರಗ್ಸ್ ಪೆಡ್ಲರ್‌ ಗಳ ಬಂಧನ ಮಾಡಿರುವ ಪೊಲೀಸರು ಅವರಿಂದ 18 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ಧಾರೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ನಗರದ ವಿವಿಧ ಪ್ರದೇಶಗಳಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಕೋಣನಕುಂಟೆ ಹಾಗೂ ವಿ.ವಿ ಪುರಂ ಠಾಣೆ ಪೊಲೀಸರು, ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ನಾಲ್ವರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಇವರಿಂದ ಸುಮಾರು ರೂಪಾಯಿ ‍18 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಘಾನಾ ದೇಶದ ಕೈರಿಲ್ ಹಾಗೂ ನೈಜೀರಿಯಾದ ಇಮ್ಯಾನುವೆಲ್ ಬಂಧಿತ ಆರೋಪಿಗಳು. ಇವರು ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು. ಆರೋಪಿ ಇಮ್ಯಾನುವೆಲ್ ವಿರುದ್ಧ ಈಗಾಗಲೇ ವಿದ್ಯಾರಣ್ಯಪುರ ಹಾಗೂ ಪುಲಕೇಶಿನಗರ ಠಾಣೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣಗಳು ದಾಖಲಾಗಿವೆ. ಇವರಿಂದ ಎಂಡಿಎಂಎ ಕ್ರಿಸ್ಟಲ್, ಎಕ್ಸ್‌ಟಸಿ ಪಿಲ್ಸ್, ಕೊಕೇನ್, ಬೈಕ್ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ‍12 ಲಕ್ಷ ರೂಪಾಯಿ ಎಂದು ತಿಳಿದು ಬಂದಿದೆ.

ಇವರು ವಿದ್ಯಾರ್ಥಿ ವೀಸಾ ಪಡೆದು ಬೆಂಗಳೂರಿನಲ್ಲಿ ವಾಸವಾಗಿದ್ದರು. ಸುಲಭವಾಗಿ ಹಣ ಗಳಿಸಲು ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಮುಂಬೈ,ದೆಹಲಿ ಮತ್ತು ಗೋವಾದಲ್ಲಿ ನೆಲೆಸಿರುವ ನೈಜೀರಿಯಾ ಮತ್ತು ಘಾನಾ ದೇಶದ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ ಬೆಂಗಳೂರಿನ ಗ್ರಾಹಕರಿಗೆ ಪೂರೈಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್‌ ಗೆ ರೂ. 10 ಸಾವಿರದಿಂದ 12 ಸಾವಿರ, ಒಂದು ಎಕಸ್ಟಸಿ ಪಿಲ್ಸ್ ಗೆ ರೂ. 15 ಸಾವಿರದಿಂದ 16 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.

ಡ್ರಗ್ಸ್ ಹಾಗೂ ಪಾಪ್ಪಿ ಸ್ಟ್ರಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಮತ್ತೊಂದು ಪ್ರಕರಣದಲ್ಲಿ ಡ್ರಗ್ಸ್ ಹಾಗೂ ಪಾಪ್ಪಿ ಸ್ಟ್ರಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಂಗನಾಥ ಕಾಲೊನಿಯ ವಿಕಾಸ್ ಬಂಧಿತ ಆರೋಪಿಯಾಗಿದ್ದು ಈತನಿಂದ 2.20 ಕೆ.ಜಿ. ಮಾದಕ ವಸ್ತು ಹಾಗೂ 10 ಕೆಜಿ ಪಾಪ್ಪಿ ಸ್ಟ್ರಾಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ‍1.80 ಲಕ್ಷ ರೂಪಾಯಿ ಎಂದು ಎಂದು ಪೊಲೀಸರು ಹೇಳಿದ್ದಾರೆ.

ಕೋಣನಕುಂಟೆ ಸಮೀಪದ ನಾರಾಯಣನಗರದ ದೊಡ್ಡಕಲ್ಲಸಂದ್ರದಲ್ಲಿ ಕೆಲವು ಗ್ರಾಹಕರಿಗೆ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಇದೇ ಆಧಾರದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲಿಸರು ಹೇಳಿದ್ದಾರೆ.

ವಿ.ವಿ. ಪುರಂ ಠಾಣೆ ವ್ಯಾಪ್ತಿಯ ಪಾರ್ವತಿಪುರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಸರ್ಜಾಪುರ ರಫೀಕ್ ಕುಮಾರ್ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 3 ಕೆ.ಜಿ. 900 ಗ್ರಾಂ ಗಾಂಜಾ ಮತ್ತು ತೂಕ ಮಾಡಲು ಬಳಸುತ್ತಿದ್ದ ಎಲೆಕ್ಟ್ರಿಕ್ ತೂಕದ ಯಂತ್ರವನ್ನು ವಶಪಡಿಸಿ ಕೊಳ್ಳಲಾಗಿದ್ದು ಇದರ ಮೌಲ್ಯ 5 ಲಕ್ಷ ರೂಪಾಯಿ ಎಂದು ಪೊಲೀಸರು ಹೇಳಿದ್ದಾರೆ. ಈತನ ವಿರುದ್ಧವೂ ಈ ಹಿಂದೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನೀರಿನ ಟ್ಯಾಂಕರ್ ಹರಿದು ಯುವಕ ಸಾವು

ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ ಸವಾರರ ಮೇಲೆ ನೀರಿನ ಟ್ಯಾಂಕರ್ ಹರಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪುಟ್ಟೇನಹಳ್ಳಿ ನಿವಾಸಿ 19 ವರ್ಷದ ಕಿರಣ್ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮೂಲದ ಕಿರಣ್ ಆರ್‌ಬಿಐ ಲೇಔಟ್‌ನ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಬೆಳಿಗ್ಗೆ ಬೈಕ್‌ನಲ್ಲಿ ಅಂಗಡಿಗೆ ಹೋಗಿ ದಿನಸಿ ಸಾಮಗ್ರಿ ಖರೀದಿಸಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನೀರಿನ ಟ್ಯಾಂಕರ್ ವಾಹನವನ್ನು ಜಪ್ತಿ ಮಾಡಿಕೊಂಡು ಚಾಲಕನನ್ನು ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ವರದಿ- ಎಚ್. ಮಾರುತಿ, ಬೆಂಗಳೂರು)